ಪೊನ್ನAಪೇಟೆ, ಸೆ. ೨೪: ಪೊನ್ನಂಪೇಟೆ ಪಟ್ಟಣದಲ್ಲಿ ವಿಜೃಂಭಣೆಯಿAದ ನಡೆದ ಗೌರಿ-ಗಣೇಶೋತ್ಸವದಲ್ಲಿ ಪೊನ್ನಂಪೇಟೆ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಸಾವಿರಾರು ಜನರು ಪಾಲ್ಗೊಂಡು ಸಂಭ್ರಮಿಸಿದರು.

ಪೊನ್ನAಪೇಟೆ ವ್ಯಾಪ್ತಿಯ ವಿವಿಧ ೯ ಗೌರಿ-ಗಣೇಶೋತ್ಸವ ಸಮಿತಿಗಳು ವಿದ್ಯುತ್ ದೀಪಾಲಂಕೃತ ವಾಹನಗಳಲ್ಲಿ ಮುಖ್ಯ ರಸ್ತೆಗಳಲ್ಲಿ ಕಿಕ್ಕಿರಿದು ನಿಂತಿದ್ದ ಜನಸಾಗರದ ನಡುವೆ ಮೆರವಣಿಗೆ ನಡೆಸಿ ಬೆಳಿಗ್ಗಿನ ಜಾವ ಗೌರಿಕೆರೆಯಲ್ಲಿ ವಿಸರ್ಜನೆ ಮಾಡುವ ಮೂಲಕ ಗಣೇಶೋತ್ಸವಕ್ಕೆ ತೆರೆ ಎಳೆಯಲಾಯಿತು.

ಸಂಜೆ ೬ ಗಂಟೆಯಿAದಲೇ ತಮ್ಮ ತಮ್ಮ ಬಡಾವಣೆಯಿಂದ ಡಿಜೆ, ಬ್ಯಾಂಡ್ ಸೆಟ್, ವಾಲಗ ನಾದಕ್ಕೆ ಹೆಜ್ಜೆ ಹಾಕುತ್ತ ಮುಖ್ಯ ರಸ್ತೆಯಲ್ಲಿ ಮೆರವಣಿಗೆ ಹೊರಟು ಬಸವೇಶ್ವರ ದೇವಸ್ಥಾನದ ಸುತ್ತು ಪ್ರದಕ್ಷಿಣೆ ಹಾಕಿದ ನಂತರ ಗೌರಿಕೆರೆಗೆ ತೆರಳಿ ಗೌರಿ-ಗಣೇಶ ಮೂರ್ತಿಗಳ ವಿಸರ್ಜನೆ ಮಾಡಲಾಯಿತು.

ಕೃಷ್ಣನಗರದ ಕೃಷ್ಣ ಯುವಕರ ಸಂಘದ ವತಿಯಿಂದ ೩೪ನೇ ವರ್ಷದ ಗಣೇಶೋತ್ಸವದ ಪ್ರಯುಕ್ತ ಶೋಭಾಯಾತ್ರೆ ನಡೆಸಲಾಯಿತು. ಶೋಭಾಯಾತ್ರೆಯಲ್ಲಿ ಪ್ರದರ್ಶನಗೊಂಡ ಧಾರ್ಮಿಕ ಹಿನ್ನೆಲೆಯ ಕಥಾನಕ ಪ್ರೇಕ್ಷಕರ ಗಮನ ಸೆಳೆಯಿತು.

ಬಸವೇಶ್ವರ ದೇವಸ್ಥಾನ ಸೇರಿದಂತೆ ಕೃಷ್ಣನಗರದ ಶ್ರೀ ಕೃಷ್ಣ ಯುವಕರ ಸಂಘ, ಶಿವ ಕಾಲೋನಿಯ ಶಿವ ಯುವಕ ಸಂಘ, ಎಂ.ಜಿ. ನಗರದ ಯುವ ಶಕ್ತಿ ಯುವಕ ಸಂಘ, ಕಾಟ್ರಕೊಲ್ಲಿ ಗಜಮುಖ ಗೆಳೆಯರ ಬಳಗ, ಜೋಡುಬೀಟಿ ಶ್ರೀ ವಿನಾಯಕ ಯುವಕರ ಸಂಘ ಹಾಗೂ ಕಾವೇರಿ ನಗರದ ಗಜಾನನ ಸ್ನೇಹಿತರ ಬಳಗ, ಪೊನ್ನಂಪೇಟೆ ಶ್ರೀ ವಿಘ್ನೇಶ್ವರ ವಾಹನ ಚಾಲಕ ಮತ್ತು ಮಾಲೀಕರ ಸಂಘ, ಜನತಾ ಕಾಲೋನಿಯ ವಿನಾಯಕ ಬಳಗ ವಿದ್ಯುತ್ ದೀಪಾಲಂಕೃತ ರಥಗಳಲ್ಲಿ ಗೌರಿ-ಗಣೇಶ ಮೂರ್ತಿಯನ್ನು ತಮ್ಮ ತಮ್ಮ ಬಡಾವಣೆಗಳಲ್ಲಿ ಮೆರವಣಿಗೆ ನಡೆಸಿದ ನಂತರ ಮುಖ್ಯರಸ್ತೆಯ ಮೂಲಕ ತೆರಳಿ ಗೌರಿಕೆರೆಯಲ್ಲಿ ವಿಸರ್ಜನೆ ನಡೆಸಿದವು. ಭಕ್ತಾದಿಗಳಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.

ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶವಾಗದಂತೆ ಪೊಲೀಸ್ ಇಲಾಖೆ ಬಿಗಿ ಬಂದೋಬಸ್ತ್ ಕೈಗೊಂಡಿತ್ತು. ವೀರಾಜಪೇಟೆ ಡಿವೈಎಸ್‌ಪಿ ಮಹೇಶ್ ಕುಮಾರ್, ಗೋಣಿಕೊಪ್ಪಲು ವೃತ್ತ ನಿರೀಕ್ಷಕ ಶಿವರಾಜ್ ಆರ್. ಮುಧೋಳ್ ನೇತೃತ್ವದಲ್ಲಿ ಪೊನ್ನಂಪೇಟೆ ಠಾಣಾಧಿಕಾರಿ ಅನ್ನಪೂರ್ಣ ಸೇರಿದಂತೆ ವಿವಿಧ ಭಾಗಗಳಿಂದ ಆಗಮಿಸಿದ್ದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಬಂದೋಬಸ್ತ್ ಕೈಗೊಂಡಿದ್ದರು. ಚಿತ್ರ, ವರದಿ: ಚನ್ನನಾಯಕ