ಬೆಂಗಳೂರು, ಸೆ. ೨೪: ಕೊಡಗು ಜಿಲ್ಲೆಯ ಲಯನ್ಸ್ ಪ್ರೌಢಶಾಲೆಯ ವಿದ್ಯಾರ್ಥಿನಿ ಸಿಂಚನಾ, ೧೦ನೇ ತರಗತಿ, ರಾಜ್ಯಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.
ಬೆಂಗಳೂರಿನ ಬನಶಂಕರಿಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ರಾಜ್ಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಇಲಾಖೆ (ಆSಇಖಖಿ) ವತಿಯಿಂದ ಆಯೋಜಿಸಲಾಗಿದ್ದ ರಾಜ್ಯಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಸಿಂಚನಾ ಭಾಗವಹಿಸಿದ್ದರು. ಅವರು ‘ನೀರಿನ ನಿರ್ವಹಣೆ ಮತ್ತು ಸಂರಕ್ಷಣೆ’ (Wಚಿಣeಡಿ ಒಚಿಟಿಚಿgemeಟಿಣ ಚಿಟಿಜ ಅoಟಿseಡಿvಚಿಣioಟಿ) ವಿಷಯವನ್ನು ಆಧರಿಸಿ ತಮ್ಮ ವಿಜ್ಞಾನ ಮಾದರಿಯನ್ನು ಪ್ರದರ್ಶಿಸಿದರು.
ಕೊಡಗು ಜಿಲ್ಲೆಯಿಂದ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾದ ಏಕೈಕ ವಿದ್ಯಾರ್ಥಿನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಸಿಂಚನಾ, ತಮ್ಮ ಮಾದರಿಯ ಮೂಲಕ ನೀರಿನ ಸಮರ್ಪಕ ಬಳಕೆ, ನಿರ್ವಹಣೆ ಹಾಗೂ ಸಂರಕ್ಷಣೆಯ ಮಹತ್ವವನ್ನು ಮನದಟ್ಟು ಮಾಡಿಕೊಟ್ಟರು.