ಮಡಿಕೇರಿ, ಸೆ. ೨೫: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಸಂಬAಧ ಇದುವರೆಗಿನ ಪ್ರಕ್ರಿಯೆ ಸಂಬAಧಿಸಿದAತೆ ರಾಜಕೀಯ ಪಕ್ಷಗಳ ಪ್ರಮುಖರೊಂದಿಗೆ ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ ಸಭೆ ನಡೆಸಿದರು.

ನಗರದ ತಹಶೀಲ್ದಾರ್ ಕಚೇರಿಯಲ್ಲಿ ಮಾಹಿತಿ ನೀಡಿದ ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಸಂಬAಧಿಸಿದAತೆ ಕರಡು ಮತದಾರರ ಪಟ್ಟಿ ಪ್ರಕಟ, ಜೊತೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದ್ದು, ಹಾಗೆಯೇ ಎಸ್‌ಐಆರ್ ಪ್ರಕ್ರಿಯೆ ಸಮಯದಲ್ಲಿ ಮ್ಯಾಪಿಂಗ್ ಆಗದಿರುವ ಹಿನ್ನೆಲೆ ಜಿಲ್ಲೆಯಲ್ಲಿ ೫೮,೮೮೩ ಮಂದಿಗೆ ನೋಟಿಸ್ ನೀಡಲಾಗಿತ್ತು. ಇದರಲ್ಲಿ ಸೆಪ್ಟೆಂಬರ್ ೨೧ಕ್ಕೆ ೩೬,೨೪೩ ಮಂದಿ ಮಾಹಿತಿ ನೀಡಿ ಸರಿಪಡಿಸಲಾಗಿದೆ. ಉಳಿದಂತೆ ೨೨,೬೪೦ ಮಾಹಿತಿ ನೀಡಲು ಬಾಕಿ ಇದ್ದು, ಪ್ರಕ್ರಿಯೆಗಳು ನಡೆಯುತ್ತಿವೆ ಎಂದು ತಿಳಿಸಿದರು.

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಸಂಬAಧ ಮ್ಯಾಪಿಂಗ್ ಆಗದಿರುವ ಮತದಾರರಿಗೆ ನೋಟಿಸ್ ನೀಡಲಾಗಿದ್ದು, ಸಂಬAಧಪಟ್ಟ ಗ್ರಾಮ ಪಂಚಾಯಿತಿಗೆ ತೆರಳಿ ಮಾಹಿತಿ ನೀಡಿ ಸರಿಪಡಿಸಿಕೊಳ್ಳುವಂತಾಗಬೇಕು. ಇಲ್ಲದಿದ್ದಲ್ಲಿ ಹೊಸದಾಗಿ ನಮೂನೆ-೬ ನೀಡಿ ಮತದಾರರ ಪಟ್ಟಿಗೆ ಹೆಸರು ನೋಂದಾಯಿಸುವAತಾಗಬೇಕು ಎಂದು ಉಪ ವಿಭಾಗಾಧಿಕಾರಿ ಸಲಹೆ ಮಾಡಿದರು.

ಸಣ್ಣಪುಟ್ಟ ಸಮಸ್ಯೆಗಳು ಇದ್ದಲ್ಲಿ ಬಿಎಲ್‌ಓಗಳು, ಗ್ರಾಮ ಆಡಳಿತಾಧಿಕಾರಿ, ಗ್ರಾ.ಪಂ. ಪಿಡಿಓ ಅಥವಾ ತಹಶೀಲ್ದಾರರಿಗೆ ಮಾಹಿತಿ ನೀಡಿದ್ದಲ್ಲಿ ಸರಿಪಡಿಸಲಾಗುವುದು. ಯಾವುದೇ ಕಾರಣಕ್ಕೂ ಗಾಬರಿಯಾಗುವ ಅಗತ್ಯವಿಲ್ಲ ಎಂದು ನಿತಿನ್ ಚಕ್ಕಿ ಅವರು ಒತ್ತಿ ಹೇಳಿದರು. ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಪ್ರಕ್ರಿಯೆಯು ನಿರಂತರವಾಗಿದ್ದು, ೧೮ ವರ್ಷ ಪೂರ್ಣಗೊಂಡವರು ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಬಹುದು ಎಂದರು.

ಈ ಸಂದರ್ಭ ಮಾತನಾಡಿದ ಭಾರತೀಯ ರಾಷ್ಟಿçÃಯ ಕಾಂಗ್ರೆಸ್ ಪಕ್ಷದ ಪ್ರತಿನಿಧಿ ತೆನ್ನಿರಾ ಮೈನಾ, ನೋಟಿಸ್ ಪಡೆದಿರುವ ವಯಸ್ಸಾದವರು, ವಿಶೇಷಚೇತನರು ಇತರರಿಗೆ ಹೆಚ್ಚಿನ ಆದ್ಯತೆ ನೀಡಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಸರಿಪಡಿಸುವಂತಾಗಬೇಕು ಎಂದು ಕೋರಿದರು.

ಜಿಲ್ಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆಯು ತೃಪ್ತಿಯುತವಾಗಿ ನಡೆಯು ತ್ತಿದ್ದು, ಆರಂಭದಲ್ಲಿ ಒಂದು ರೀತಿ ಆತಂಕವಿತ್ತು. ಆದರೆ ಎಸ್‌ಐಆರ್ ಪ್ರಕ್ರಿಯೆ ಗಮನಿಸಿದಾಗ ಈ ಪ್ರಕ್ರಿಯೆ ಎಂದೋ ಆಗಬೇಕಿತ್ತು ಎಂದು ತೆನ್ನೀರ ಮೈನಾ ಅಭಿಪ್ರಾಯ ವ್ಯಕ್ತಪಡಿಸಿದರು.

ಜಿಲ್ಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆಯು ಶೇ. ೧೦೦ ರಷ್ಟು ಯಶಸ್ವಿಯಾಗಿ ಪೂರ್ಣಗೊಳ್ಳಬೇಕು ಎಂಬುದು ರಾಜಕೀಯ ಪಕ್ಷಗಳ ಆಶಯವಾಗಿದೆ ಎಂದು ತೆನ್ನೀರಾ ಮೈನಾ ಹೇಳಿದರು.

ಭಾರತೀಯ ಜನತಾ ಪಕ್ಷದ ಸಜಿಲ್ ಕೃಷ್ಣ ಮಾತನಾಡಿ, ಭಾರತೀಯ ಚುನಾವಣಾ ಆಯೋಗ ಎಸ್‌ಐಆರ್ ಪ್ರಕ್ರಿಯೆಯನ್ನು ವ್ಯವಸ್ಥಿತವಾಗಿ, ಯಾವುದೇ ರೀತಿ ಗೊಂದಲವಿಲ್ಲದೆ ನಡೆಸಿದೆ. ಇದಕ್ಕೆ ಮತದಾರರು ಸಹ ಉತ್ತಮ ಸ್ಪಂದನ ನೀಡಿದ್ದು, ಅರ್ಹ ಮತದಾರರು ಬಿಟ್ಟು ಹೋಗದಂತೆ ನೋಡಿಕೊಳ್ಳುವುದು ಅತೀ ಮುಖ್ಯವಾಗಿದೆ. ಆ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆಯು ಉತ್ತಮವಾಗಿ ನಡೆಯುತ್ತಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ತಹಶೀಲ್ದಾರ್ ಶ್ರೀಧರ್ ಎಸ್‌ಐಆರ್ ಪ್ರಕ್ರಿಯೆ ಸಂಬAಧ ಹಲವು ಮಾಹಿತಿ ನೀಡಿದರು. ಚುನಾವಣಾ ಶಿರಸ್ತೆದಾರ್ ಚಂದ್ರಶೇಖರ್ ಇತರರು ಇದ್ದರು.