ಮಡಿಕೇರಿ, ಸೆ. ೨೫: ಕರ್ನಾಟಕ ಹೈಕೋರ್ಟ್ನ ಹೆಚ್ಚುವರಿ ನ್ಯಾಯಮೂರ್ತಿಯಾಗಿ ಕೊಡಗು ಜಿಲ್ಲೆಯ ವೀರಾಜಪೇಟೆ ಮೂಲದ, ಬೆಂಗಳೂರು ಪ್ರಧಾನ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಧೀಶರಾದ ಕೆ.ಎಸ್. ಭರತ್ ಕುಮಾರ್ ಅವರು ಇಂದು ಅಧಿಕಾರ ಸ್ವೀಕರಿಸಿದರು.

ಬೆಂಗಳೂರಿನ ಲೋಕ ಭವನದ ಗಾಜಿನ ಮನೆಯಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಕರ್ನಾಟಕದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಕೆ.ಎಸ್.ಭರತ್ ಕುಮಾರ್ ಅವರಿಗೆ ಪ್ರಮಾಣ ವಚನ ಬೋಧಿಸಿದರು.ಇವರೊಂದಿಗೆ ಮೈಸೂರು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಉಷಾರಾಣಿ ಹಾಗೂ ಕಾನೂನು ಇಲಾಖೆಯ ಪ್ರಧಾನ ಕಾರ್ಯದರ್ಶಿ ೪ಆರನೇ ಪುಟಕ್ಕೆ

(ಮೊದಲ ಪುಟದಿಂದ) ಎನ್.ವಿ. ಭವಾನಿ ಅವರು ಕೂಡ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಅಧಿಕಾರ ಸ್ವೀಕರಿಸಿದರು. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಭಿನಂದಿಸಿದರು.

ಈ ಮೂವರನ್ನು ಹೈಕೋರ್ಟ್ ಹೆಚ್ಚುವರಿ ನ್ಯಾಯಮೂರ್ತಿಗಳ ಹುದ್ದೆಗಳಿಗೆ ಪರಿಗಣಿಸುವಂತೆ ಸೆ. ೧೦ ರಂದು ಸುಪ್ರೀಂಕೋರ್ಟ್ ಕೊಲಿಜಿಯಂ ಶಿಫಾರಸ್ಸು ಮಾಡಿತ್ತು.