ವೀರಾಜಪೇಟೆ, ಸೆ. ೨೬: ಗಣೇಶೋತ್ಸವ ಕೇವಲ ಧಾರ್ಮಿಕ ಆಚರಣೆಯಲ್ಲ, ಸಮಾಜವನ್ನು ಒಗ್ಗೂಡಿಸುವ ಶಕ್ತಿ ಕೇಂದ್ರವಾಗಿದೆ. ದೇಶದಾದ್ಯಂತ ಗಣೇಶೋತ್ಸವವನ್ನು ವಿಜೃಂಭಣೆಯಿAದ ಆಚರಿಸುವಂತಾಗಬೇಕು. ಗಣೇಶೋತ್ಸವವನ್ನು ರಾಷ್ಟಿçÃಯ ಹಬ್ಬವಾಗಿ ಘೋಷಿಸುವ ಕುರಿತು ಗಂಭೀರ ಚಿಂತನೆ ನಡೆಯಬೇಕು ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.

ವೀರಾಜಪೇಟೆ-ಮೂರ್ನಾಡು ರಸ್ತೆಯ ಕಾವೇರಿ ಗಣೇಶೋತ್ಸವ ಸಮಿತಿ ವತಿಯಿಂದ ಶುಕ್ರವಾರ ರಾತ್ರಿ ಆಯೋಜಿಸಿದ್ದ ಸಾರ್ವಜನಿಕ ಗಣೇಶೋತ್ಸವದ ವೇದಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಕೊಡಗಿನ ಸಾಂಸ್ಕೃತಿಕ ಪರಂಪರೆ ಹಾಗೂ ಐತಿಹಾಸಿಕ ಮಹತ್ವವನ್ನು ಅರಿತು, ಅದನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಜವಾಬ್ದಾರಿ ಸಮಾಜದ ಮೇಲಿದೆ. ಕೊಡಗು ಭಾರತೀಯ ಸೇನೆಗೆ ಅಪ್ರತಿಮ ವೀರ ಯೋಧರನ್ನು ನೀಡಿರುವ ಪುಣ್ಯಭೂಮಿಯಾಗಿದ್ದು, ಕಾವೇರಿ ನದಿಯ ಉಗಮಸ್ಥಳವೂ ಆಗಿದೆ. ಇಲ್ಲಿನ ಸಂಸ್ಕೃತಿ ಹಾಗೂ ಸಂಸ್ಕಾರ ತಮ್ಮನ್ನು ಪ್ರೀತಿಯಿಂದ ಸ್ವಾಗತಿಸಿದೆ ಎಂದು ಯತ್ನಾಳ್ ಹೇಳಿದರು.

ಹಿಂದೂಗಳ ಹಬ್ಬಗಳಿಗೂ ಯಾವುದೇ ರೀತಿಯ ಅಡ್ಡಿಯಾಗಬಾರದು. ಡಾ. ಬಿ.ಆರ್. ಅಂಬೇಡ್ಕರ್ ಅವರ ಕೃತಿಗಳನ್ನು ಓದಿ ಅವರ ವಿಚಾರಧಾರೆಗಳನ್ನು ಅರ್ಥಮಾಡಿಕೊಳ್ಳಬೇಕು. ಅಂಬೇಡ್ಕರ್ ಅವರು ಅಸ್ಪೃಶ್ಯತೆ ಹಾಗೂ ಅಸಮಾನತೆಯ ವಿರುದ್ಧ ಹೋರಾಡಿದ್ದರೆ ಹೊರತು ಹಿಂದುತ್ವದ ವಿರೋಧಿಯಾಗಿರಲಿಲ್ಲ ಎಂದು ಹೇಳಿದರು.

ದೇಶದ ವಿಚಾರದಲ್ಲಿ ಪ್ರತಿಯೊಬ್ಬರೂ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು. ಹಿಂದೂಗಳು ಯಾವುದೇ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಒಗ್ಗಟ್ಟಿನಿಂದ ಇರಬೇಕು ಎಂದು ಯತ್ನಾಳ್ ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಹಿಂದೂ ಮುಖಂಡ ರಘು ಸಕಲೇಶಪುರ, ಸ್ವಾತಂತ್ರ‍್ಯ ಪೂರ್ವದಲ್ಲಿ ಕ್ರಾಂತಿಕಾರಿಗಳು ಹಾಗೂ ಜನರನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸಿ ಸ್ವಾತಂತ್ರ‍್ಯದ ಕಿಚ್ಚು ಹಚ್ಚುವ ಉದ್ದೇಶದಿಂದ ಲೋಕಮಾನ್ಯ ಬಾಲಗಂಗಾಧರ ತಿಲಕರು ಸಾರ್ವಜನಿಕ ಗಣೇಶೋತ್ಸವಕ್ಕೆ ನಾಂದಿ ಹಾಡಿದರು ಎಂದು ಹೇಳಿದರು.

ಹೊರಗಿನಿಂದ ಬಂದು ಕೊಡಗಿನಲ್ಲಿ ನೆಲೆಸುವವರ ವಿಚಾರದಲ್ಲಿ ಸ್ಥಳೀಯರು ಎಚ್ಚರಿಕೆ ವಹಿಸಬೇಕಿದೆ ಎಂದು ಹೇಳಿದರು. ಸ್ಥಳೀಯ ಕಾರ್ಮಿಕರ ಹಿತಾಸಕ್ತಿ ಹಾಗೂ ಭದ್ರತೆಗೆ ಧಕ್ಕೆಯಾಗದ ರೀತಿಯಲ್ಲಿ ಎಲ್ಲರೂ ನಡೆದುಕೊಳ್ಳಬೇಕು ಎಂದು ತಿಳಿಸಿದರು. ೪ಏಳನೇ ಪುಟಕ್ಕೆ

(ಮೊದಲ ಪುಟದಿಂದ) ಕಾರ್ಯಕ್ರಮಕ್ಕೂ ಮುನ್ನ ಅತಿಥಿಗಳನ್ನು ಮಂಗಳವಾದ್ಯ ಹಾಗೂ ಹೂಮಳೆಯ ಮೂಲಕ ಅದ್ದೂರಿಯಾಗಿ ವೇದಿಕೆಗೆ ಬರಮಾಡಿಕೊಳ್ಳಲಾಯಿತು.

ವೇದಿಕೆಯಲ್ಲಿ ವಕೀಲ ಕೃಷ್ಣ, ಹಿಂದೂ ಮುಖಂಡ ವಿವೇಕ್ ರೈ, ಕಾವೇರಿ ಗಣೇಶೋತ್ಸವ ಸಮಿತಿ ಅಧ್ಯಕ್ಷ ಆನಂದ ನಂಜಪ್ಪ ಹಾಗೂ ಚೇತನ್ ಶಿವಪ್ಪ ಉಪಸ್ಥಿತರಿದ್ದರು.