ನವದೆಹಲಿ, ಸೆ. ೨೬: ಕುಟ್ಟ ಹೋಂಸ್ಟೇಯೊAದರ ಮಾಲೀಕ ಪೊನ್ನಪ್ಪ ಅವರನ್ನು ಕೊಡಗು ಪೊಲೀಸÀರು ಅಕ್ರಮವಾಗಿ ಬಂಧಿಸಿದ್ದರು ಎಂದು ಹೈಕೋರ್ಟ್ನಲ್ಲಿ ಹೋಂಸ್ಟೇ ಮಾಲೀಕರು ಸಲ್ಲಿಸಿದ್ದ ಅರ್ಜಿ ಮೇರೆÀಗೆ ಅವರಿಗೆ ಸರಕಾರವು ರೂ. ೫ ಲಕ್ಷ ಪರಿಹಾರ ನೀಡುವಂತೆ ಈ ಹಿಂದೆ ಹೈಕೋರ್ಟ್ ಆದೇಶಿಸಿತ್ತು. ಇದರ ವಿರುದ್ಧ ಸರಕಾರವು ಸುಪ್ರೀಂ ಕೋರ್ಟ್ನಲ್ಲಿ ಇತ್ತೀಚೆಗೆ ಸಲ್ಲ್ಲಿಸಿದ್ದ ಮೇಲ್ಮನವಿಯನ್ನು ಇದೀಗ ಸುಪ್ರೀಂ ಕೋರ್ಟ್ ವಜಾಗೊಳಿಸಿ ಹೈಕೋರ್ಟ್ನ ಆದೇಶವನ್ನು ಪುರಸ್ಕರಿಸಿದೆ.
ಅಮೇರಿಕಾದ ಪ್ರವಾಸಿ ಮಹಿಳೆಯೊಬ್ಬರ ಮೇಲೆ ಕಳೆದ ಏಪ್ರಿಲ್ ೧೨ ರಂದು ಕೊಡಗಿನ ಕುಟ್ಟ ವ್ಯಾಪ್ತಿಯ ಹೋಂಸ್ಟೇಯೊAದರಲ್ಲಿ ನಡೆದಿದೆ ಎನ್ನಲಾದ ಅತ್ಯಾಚಾರ ಆರೋಪದಲ್ಲಿ ಹೋಂಸ್ಟೇ ನೌಕರನೊಬ್ಬ ಅತ್ಯಾಚಾರ ಎಸಗಿದ್ದಾನೆಂಬ ಆರೋಪದ ಮೇರೆಗೆ ಪ್ರಕರಣ ದಾಖಲಾಗಿತ್ತು. ಆತನನ್ನು ಬಂಧಿಸಲಾಗಿತ್ತು. ಆದರೆ, ಈ ಪ್ರಕರಣದಲ್ಲಿ ಹೋಂಸ್ಟೇ ಮಾಲೀಕರನ್ನು ಕಾನೂನು ಬಾಹಿರವಾಗಿ ಬಂಧಿಸಿದ ಕಾರಣಕ್ಕೆ ಅವರಿಗೆ ಸರಕಾರ ರೂ. ೫ ಲಕ್ಷ ಪರಿಹಾರ ನೀಡುವಂತೆ ಹೈಕೋರ್ಟ್ ಜುಲೈ ೫ ರಂದು ಆದೇಶ ನೀಡಿತ್ತು. ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಈ ಆದೇಶವನ್ನು ಹೊರಡಿಸಿತ್ತು. ಬಳಿಕ ಈ ಆದೇಶವನ್ನು ರಾಜ್ಯ ಸರ್ಕಾರ ಪಾಲನೆ ಮಾಡಿಲ್ಲ ಎಂಬ ಹಿನ್ನೆಲೆಯಲ್ಲಿ ಹೋಂಸ್ಟೇ ಮಾಲೀಕರು ಮತ್ತೆ ಮನವಿ ಸಲ್ಲ್ಲಿಸಿದ್ದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಕ್ಕೆ ನೋಟೀಸ್ ಜಾರಿಗೊಳಿಸಲು ಹೈಕೋರ್ಟ್ ಇತ್ತೀಚೆಗೆ ಆದೇಶಿಸಿತ್ತು. ಹೈಕೋರ್ಟ್ ನಿರ್ದೇಶನದಂತೆ ಒಂದು ತಿಂಗಳಲ್ಲಿ ೪ಏಳನೇ ಪುಟಕ್ಕೆ
(ಮೊದಲ ಪುಟದಿಂದ) ರಾಜ್ಯ ಸರ್ಕಾರ ತÀನಗೆ ರೂ. ೫ ಲಕ್ಷ ಪರಿಹಾರ ಪಾವತಿ ಮಾಡಿಲ್ಲ ಎಂದು ಆರೋಪಿಸಿ ಹೋಂಸ್ಟೇ ಮಾಲೀಕ ಪೊನ್ನಪ್ಪ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿಯನ್ನು ನ್ಯಾಯಮೂರ್ತಿ ಜಯಂತ್ ಬ್ಯಾನರ್ಜಿ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತ್ತ್ತು. ಪ್ರತಿವಾದಿಗಳಾದ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ನೋಟೀಸ್ ಜಾರಿಗೊಳಿಸಲು ಆದೇಶಿಸಿದ ನ್ಯಾಯಪೀಠ ಮೂರು ವಾರಗಳಲ್ಲಿ ಆಕ್ಷೇಪಣೆ ಸಲ್ಲಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. ಇದರ ವಿರುದ್ಧ ಸರಕಾರ ಸುಪ್ರೀಂ ಮೆಟ್ಟಿಲೇರಿತ್ತು. ಇದೀಗ ಸುಪ್ರೀಂನಲ್ಲಿ ಸರಕಾರದ ಅರ್ಜಿ ವಜಾಗೊಂಡಿದೆ. ಆದರೆ, ತನ್ನ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಬೇಕೆಂಬ ಹೋಂಸ್ಟೇ ಮಾಲೀಕರ ಮನವಿಯನ್ನು ನ್ಯಾಯಾಲಯಗಳು ಪುರಸ್ಕರಿಸಿಲ್ಲ.