ಮಡಿಕೇರಿ, ಸೆ. ೨೭: ವಿಶ್ವ ಪ್ರವಾಸೋದ್ಯಮ ದಿನದ ಅಂಗವಾಗಿ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ಪ್ರವಾಸೋದ್ಯಮ ಪಾಲುದಾರರು ಸೇರಿದಂತೆ ವಿವಿಧ ಸಂಘ-ಸAಸ್ಥೆಗಳು, ಕಾಲೇಜು ವಿದ್ಯಾರ್ಥಿಗಳಿಂದ ನಗರದಲ್ಲಿ ಸ್ವಚ್ಛತಾ ಅಭಿಯಾನ ಕೈಗೊಳ್ಳಲಾಯಿತು.
ನಗರದ ರಾಜಾಸೀಟ್, ಗದ್ದಿಗೆ, ಓಂಕಾರೇಶ್ವರ ದೇವಾಲಯ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬಿದ್ದಿದ್ದ ಕಸವನ್ನು ತೆರವುಗೊಳಿಸಿ ಸ್ವಚ್ಛತಾ ಅಭಿಯಾನ ನಡೆಸಲಾಯಿತು. ರೋಟರಿ, ಹೋಂಸ್ಟೇ ಅಸೋಸಿಯೇಷನ್, ಫೀ.ಮಾ. ಕೆ.ಎಂ. ಕಾರ್ಯಪ್ಪ ಕಾಲೇಜು, ಕೊಡಗು ಅಭಿವೃದ್ಧಿ ಸಮಿತಿ, ಚೇಂಬರ್ ಆಫ್ ಕಾಮರ್ಸ್ ಸೇರಿದಂತೆ ಇನ್ನಿತರ ಸಂಘಟನೆಗಳು ಬೆಂಬಲಿಸಿ ಸ್ವಚ್ಛತಾ ಕಾರ್ಯದಲ್ಲಿ ತೊಡಗಿಸಿಕೊಂಡವು.
ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕ ಹೆಚ್. ಶಶಿಧರ್, ಹೋಂಸ್ಟೇ ಅಸೋಸಿಯೇಷನ್ ಅಧ್ಯಕ್ಷೆ ಮೋಂತಿ ಗಣೇಶ್, ಫೀ.ಮಾ. ಕಾರ್ಯಪ್ಪ ಕಾಲೇಜು ಪ್ರಾಂಶುಪಾಲ ಪ್ರೊ. ಮೇ ಬಿ. ರಾಘವ, ಪ್ರಮುಖರಾದ ಅಂಬೆಕಲ್ಲು ನವೀನ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.