ಮಡಿಕೇರಿ, ಸೆ. ೨೮: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಹಿರಿಯ ನಾಗರಿಕರ ಸ್ವಯಂ ಸೇವಾ ಸಂಸ್ಥೆಗಳು ಹಾಗೂ ವಿಕಲಚೇತನರು ಹಾಗು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ದೀರ್ಘಾ ಯುಷ್ಯದ ಯುಗ: ಸುದೀರ್ಘ ಜೀವನಕ್ಕಾಗಿ ಜೀವನ ಕ್ರಮಗಳ ಮರು ಚಿಂತನೆ ಎಂಬ ಘೋಷವಾಕ್ಯದೊಂದಿಗೆ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯು ಅಕ್ಟೋಬರ್ ೧ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ನಗರದ ಶಿಶು ಕಲ್ಯಾಣ ಸಂಸ್ಥೆಯಲ್ಲಿ (ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಹತ್ತಿರ) ನಡೆಯಲಿದೆ.