ಮಡಿಕೇರಿ, ಸೆ. ೨೯: ತಾಲೂಕಿನ ಎಮ್ಮೆಮಾಡು ಗ್ರಾಮಕ್ಕೆ ವೀರಾಜಪೇಟೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಭೇಟಿ ನೀಡಿದರು.
ಈ ಸಂದರ್ಭ ಸಣ್ಣ ನೀರಾವರಿ ಇಲಾಖೆ ವತಿಯಿಂದ ರೂ. ೨೫ ಲಕ್ಷ ವೆಚ್ಚದಲ್ಲಿ ನಿರ್ಮಾಣ ವಾಗಲಿರುವ ಕಿರು ಸೇತುವೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು. ಇದೇ ಭಾಗದಲ್ಲಿ ಸುಮಾರು ೬೦ ಸಾವಿರ ಲೀಟರ್ ಸಾಮರ್ಥ್ಯದ ನೀರು ಶೇಖರಣಾ ಟ್ಯಾಂಕ್ ಸಹ ನಿರ್ಮಾಣವಾಗ ಲಿದೆ ಎಂದು ತಿಳಿಸಿದರು.
ಈ ಸಂದರ್ಭ ನಾಪೋಕ್ಲು ಬ್ಲಾಕ್ ಅಧ್ಯಕ್ಷ ಸೌಕತ್ ಆಲಿ, ಡಿಸಿಸಿ ಉಪಾಧ್ಯಕ್ಷ ಹಾಗೂ ಕೆಡಿಪಿ ಸದಸ್ಯ ಅಬ್ದುಲ್ ರೆಹಮಾನ್, ಜಿಲ್ಲಾ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಹನೀಫ್, ವಲಯ ಅಧ್ಯಕ್ಷ ಮೂಸಾ, ಮಾಜಿ ಬ್ಲಾಕ್ ಅಧ್ಯಕ್ಷ ಇಸ್ಮಾಯಿಲ್, ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯ ಸಿರಾಜ್ ಪರವಂಡ, ಉಮರ್, ಅಬುಬಕರ್, ಸಖಾಫಿ, ಅಶ್ರಫ್, ಝುಬೈರ್, ಸ್ಥಳೀಯ ಪ್ರಮುಖರು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಹಾಜರಿದ್ದರು.