ಮಡಿಕೇರಿ ಸೆ. ೨೯: ಮಡಿಕೇರಿ ನಗರ ಯುವ ಕಾಂಗ್ರೆಸ್ ಸಮಿತಿಯ ನೂತನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಸಮಾರಂಭ ಯುವ ಕಾಂಗ್ರೆಸ್ ನಗರಾಧ್ಯಕ್ಷ ಅರ್ಜುನ್ ಟಿ.ಆರ್. ಅವರ ನೇತೃತ್ವದಲ್ಲಿ ನಡೆಯಿತು. ನಗರದ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪಾಧ್ಯಕ್ಷರಾಗಿ ಯಶವಂತ್, ನಿತಿನ್ ಥಾಮಸ್, ಸಂಘಟನಾ ಕಾರ್ಯದರ್ಶಿಗಳಾಗಿ ಪ್ರತಾಪ್, ಕಿಶನ್, ಗಗನ್ ಹಾಗೂ ಮಹೇಶ್ ಅಧಿಕಾರ ಸ್ವೀಕರಿಸಿದರು.
ಅರ್ಜುನ್ ಟಿ.ಆರ್. ಮಾತನಾಡಿ ಯುವ ಕಾಂಗ್ರೆಸ್ ಸಂಘಟನೆಯನ್ನು ಬಲಪಡಿಸಲು ಎಲ್ಲರೂ ಕೈಜೋಡಿಸಬೇಕು, ಯುವ ಸಮೂಹವನ್ನು ಪಕ್ಷದ ಸಂಘಟನಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ನಿಟ್ಟಿನಲ್ಲಿ ನೂತನ ಪದಾಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಮಡಿಕೇರಿ ನಗರ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ಆಚಾರ್ಯ, ಕೊಡಗು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಜಮ್ಮಡ ಸೋಮಣ್ಣ, ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷರಾದ ರಾಹುಲ್ ಮಾರ್ಷಲ್, ಅನ್ಫಲ್, ಪ್ರಧಾನ ಕಾರ್ಯದರ್ಶಿ ಅಬ್ದುಲ್ ಹಕೀಮ್, ಮಡಿಕೇರಿ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಕವನ್ ಕೊತ್ತೋಳಿ, ನಗರ ಯುವ ಕಾಂಗ್ರೆಸ್ ಉಪಾಧ್ಯಕ್ಷ ಸುಹೇಬ್, ಪ್ರಧಾನ ಕಾರ್ಯದರ್ಶಿಗಳಾದ ಅಜ್ಮಾನ್, ಶಾಹುಲ್ ಅಮೀನ್, ಸಂಘಟನಾ ಕಾರ್ಯದರ್ಶಿಗಳಾದ ವಸೀಮ್, ವಂಶ್, ಅಭಿಲಾಷ್ ಸೇರಿದಂತೆ ಹಲವು ಪದಾಧಿಕಾರಿಗಳು ಉಪಸ್ಥಿತರಿದ್ದರು.