ಕಡಂಗ, ಸೆ. ೨೯: ೨೦೩೦ರೊಳಗೆ ದೇಶದಲ್ಲಿ ಮಲೇರಿಯಾ ಪ್ರಕರಣಗಳನ್ನು ನಿರ್ಮೂಲನೆ ಮಾಡುವ ಗುರಿಯೊಂದಿಗೆ ಕೇಂದ್ರ ಸರ್ಕಾರ ಕೈಗೊಂಡಿರುವ ಕ್ರಮಗಳ ಭಾಗವಾಗಿ, ದೇಶಾದ್ಯಂತ ಆರೋಗ್ಯ ಸಂಸ್ಥೆಗಳಲ್ಲಿ ಮಲೇರಿಯಾ ಪ್ರಕರಣಗಳ ಚಿಕಿತ್ಸೆ, ಅನುಸರಣೆ ಹಾಗೂ ದಾಖಲಾತಿ ನಿರ್ವಹಣೆಯನ್ನು ಪರಿಶೀಲಿಸಲಾಗುತ್ತಿದೆ. ಇದರ ಅಂಗವಾಗಿ ಕೇಂದ್ರದ ಪರಿಶೀಲನಾ ತಂಡ ಕೊಡಗು ಜಿಲ್ಲೆಗೆ ಭೇಟಿ ನೀಡಿ ಜಿಲ್ಲೆಯ ಆರೋಗ್ಯ ಸಂಸ್ಥೆಗಳ ಕಾರ್ಯವೈಖರಿ ಬಗ್ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತಪಡಿಸಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಎಂ. ಸತೀಶ್ ಕುಮಾರ್ ತಿಳಿಸಿದ್ದಾರೆ.
ಕೊಡಗು ಜಿಲ್ಲೆಗೆ ಕಳೆದ ಮೂರು ದಿನಗಳಿಂದ ಭೇಟಿ ನೀಡಿದ್ದ ಸಬ್ ನ್ಯಾಷನಲ್ ಮಲೇರಿಯಾ ಎಲಿಮಿನೇಷನ್ ವ್ಯಾಲಿಡೇಶನ್ ರಾಷ್ಟಿçÃಯ ತಂಡವು ಸೋಮವಾರಪೇಟೆ ತಾಲೂಕು ಆಸ್ಪತ್ರೆ, ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರ, ಆಲೂರು-ಸಿದ್ದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರ, ಸುಂಟಿಕೊಪ್ಪ ಉಪಕೇಂದ್ರ, ಮಡಿಕೇರಿ ನಗರದ ನಗರ ಆರೋಗ್ಯ ಕೇಂದ್ರ ಹಾಗೂ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು.
ಜಿಲ್ಲೆಯಲ್ಲಿ ಕಳೆದ ಐದು ವರ್ಷಗಳಿಂದ ಮಲೇರಿಯಾ ನಿಯಂತ್ರಣ ಹಾಗೂ ನಿರ್ಮೂಲನೆಗಾಗಿ ಕೈಗೊಂಡಿರುವ ಕ್ರಮಗಳು, ಪ್ರಕರಣಗಳ ದಾಖಲಾತಿ ನಿರ್ವಹಣೆ, ರೋಗಿಗಳ ಚಿಕಿತ್ಸೆಯ ಅನುಸರಣೆ ಹಾಗೂ ಆರೋಗ್ಯ ಇಲಾಖೆಯ ಕಾರ್ಯವೈಖರಿಯನ್ನು ತಂಡ ಪರಿಶೀಲಿಸಿತು. ದೆಹಲಿಯ ಡಾ. ಕಲ್ಪನಾ ಬರುವ ಅವರ ನೇತೃತ್ವದಲ್ಲಿ ನಡೆದ ಪರಿಶೀಲನೆಯಲ್ಲಿ ಕೇಂದ್ರ ತಂಡದ ಡಾ. ಆರ್. ತೇನಾಂಬಿಗೈ, ಡಾ. ಬಿಜೀತ್ ಬಿಸ್ವಾ ಹಾಗೂ ಡಾ. ಶ್ಯಾಮ್ ಬಂದು ರಾತ್ ಭಾಗವಹಿಸಿದ್ದರು. ಈ ಸಂದರ್ಭ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಶ್ರೀನಿವಾಸ್ ಬಿ.ಎಲ್., ಸೋಮವಾರಪೇಟೆ ತಾಲೂಕು ಆರೋಗ್ಯಾಧಿಕಾರಿ ಡಾ. ಇಂದೂಧರ್, ಮಡಿಕೇರಿ ತಾಲೂಕು ಆರೋಗ್ಯಾಧಿಕಾರಿ ಡಾ. ಸುನಿಲ್, ಜಿಲ್ಲಾ ಎಂಟಮಾಲಜಿಸ್ಟ್ ಮಂಜುನಾಥ್ ಸೇರಿದಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳು, ಆರೋಗ್ಯ ಸಂಸ್ಥೆಗಳ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು. ಜಿಲ್ಲೆಯಲ್ಲಿ ಮಲೇರಿಯಾ ನಿಯಂತ್ರಣಕ್ಕೆ ಸಂಬAಧಿಸಿದAತೆ ಉತ್ತಮ ನಿರ್ವಹಣೆ ಕಂಡುಬAದಿದ್ದು, ಕೆಲವೊಂದು ಸಣ್ಣಪುಟ್ಟ ಲೋಪಗಳನ್ನು ಸರಿಪಡಿಸಿಕೊಳ್ಳುವಂತೆ ತಂಡ ಸಲಹೆ ನೀಡಿತು. ಜಿಲ್ಲಾ ಸರ್ವೇಕ್ಷಣಾ ಘಟಕದ ವತಿಯಿಂದ ರಾಷ್ಟಿçÃಯ ಪರಿಶೀಲನಾ ತಂಡದ ಸದಸ್ಯರನ್ನು ಸನ್ಮಾನಿಸಲಾಯಿತು.