ವೀರಾಜಪೇಟೆ. ಸೆ. ೩೦: ವಿಪತ್ತು ನಿರ್ವಹಣೆಯ ಕೌಶಲ್ಯ ಹಾಗೂ ಶಿಕ್ಷಣ, ತರಬೇತಿ ಪ್ರತಿಯೊಬ್ಬರಿಗೂ ಕೂಡ ಅವಶ್ಯಕವಾಗಿದೆ ಎಂದು ವೀರಾಜಪೇಟೆಯ ಸೆಂಟ್ ಆನ್ಸ್ ಪದವಿ ಕಾಲೇಜಿನ ವ್ಯವಸ್ಥಾಪಕರಾದ ರೆ.ಫಾ. ಮದಲೈ ಮುತ್ತು ಅಭಿಪ್ರಾಯಪಟ್ಟರು. ಕಾಲೇಜಿನ ಸಭಾಂಗಣದಲ್ಲಿ ಐಕ್ಯೂಎಸಿ, ಎನ್ಎಸ್ಎಸ್ ಘಟಕ, ಯುವ ರೆಡ್ ಕ್ರಾಸ್ ಘಟಕ ಹಾಗೂ ಎನ್ಡಿಆರ್ಎಫ್ನ ಸಹಯೋಗದಲ್ಲಿ ಎನ್ಎಸ್ಎಸ್ ಡೇ ಪ್ರಯುಕ್ತ ಕಾಲೇಜಿನಲ್ಲಿ ಪದವಿ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ ವಿಪತ್ತು ನಿರ್ವಹಣಾ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಷ್ಟಾçದ್ಯಂತ ಎನ್ಡಿಆರ್ಎಫ್ ತಂಡವು ವಿಪತ್ತುಗಳು ಸಂಭವಿಸಿದ ಸಂದರ್ಭದಲ್ಲಿ ತನ್ನದೇ ಆದ ಸೇವೆಯನ್ನು ಸಲ್ಲಿಸುತ್ತಿದ್ದು, ಜನರ ಜೀವನ ರಕ್ಷಣೆ ಜೊತೆಗೆ ಸಮಯ ಪ್ರಜ್ಞೆಯಿಂದ ಕರ್ತವ್ಯವನ್ನು ನಿರ್ವಹಿಸುತ್ತಿದೆ. ವಿದ್ಯಾರ್ಥಿಗಳು ಈಗಿನಿಂದಲೇ ಇಂತಹ ತರಬೇತಿಗಳನ್ನು ಪಡೆಯುವುದರಿಂದ ತುರ್ತು ಸಂದರ್ಭದಲ್ಲಿ ಕೈಗೊಳ್ಳಬೇಕಾದಂತಹ ಮುಂಜಾಗ್ರತಾ ಕ್ರಮಗಳನ್ನು ಅರಿಯಲು ಸಾಧ್ಯ ಎಂದರು.
ಎನ್ಡಿಆರ್ಎಫ್ನ ಟೀಮ್ ಕಮಾಂಡರ್ ಪ್ರದೀಪ್ ಕುಮಾರ್ ಮಾತನಾಡಿ, ಎನ್ಡಿಆರ್ಎಫ್ ವತಿಯಿಂದ ಹತ್ತು ಹಲವು ಸಾಮಾಜಿಕ ಕಾರ್ಯಕ್ರಮ ಹಾಗೂ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದ್ದು ವಿಶೇಷವಾಗಿ ವಿದ್ಯಾರ್ಥಿಗಳಲ್ಲಿಯೂ ಜಾಗೃತಿಯನ್ನು ಮೂಡಿಸುವ ಪ್ರಯತ್ನ ಮಾಡಲಾಗುತ್ತಿದೆ. ವಿಪತ್ತು ಸಂಭವಿಸಿದ ಸಂದರ್ಭದಲ್ಲಿ ಪ್ರತಿಯೊಬ್ಬರು ಜಾಗೃತರಾಗಿ ಜೀವ ರಕ್ಷಿಸುವ ಕೌಶಲ್ಯವನ್ನು ಅರಿತುಕೊಳ್ಳಬೇಕಾಗಿರುವುದು ಪ್ರಾಮುಖ್ಯವನ್ನು ಪಡೆದಿದೆ. ರಾಷ್ಟç ಹಾಗೂ ಅಂತಾರಾಷ್ಟಿçÃಯ ಮಟ್ಟದಲ್ಲಿಯೂ ಸಹ ನಮ್ಮ ತಂಡವು ಕಾರ್ಯವನ್ನು ನಿರ್ವಹಿಸಿದ್ದು ರಕ್ಷಣಾ ಹಾಗೂ ಪರಿಹಾರ ಕಾರ್ಯವನ್ನು ನಿರ್ವಹಿಸುತ್ತಿದೆ ಎಂದು ಹೇಳಿದರು. ಎನ್ಡಿಆರ್ಎಫ್ ತಂಡದ ರೆಸ್ಕೂ÷್ಯ ಕಮಾಂಡರ್ ನಾಗರಾಜು ಎ.ಪಿ. ಮಾತನಾಡಿ, ವಿದ್ಯಾರ್ಥಿಗಳಿಗೆ ವಿಪತ್ತನ್ನು ನಿರ್ವಹಿಸುವಂತಹ ಜ್ಞಾನ ಅವಶ್ಯಕ. ಸಮಯಪ್ರಜ್ಞೆ, ದೈರ್ಯ, ಶಿಸ್ತುಗಳನ್ನು ಜೀವನದಲ್ಲಿ ಅಳವಡಿಸುವುದರಿಂದ ಮೂಲಕ ವಿಪತ್ತನ್ನು ನಿರ್ವಹಿಸಬಹುದು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸೆಂಟ್ ಆ್ಯನ್ಸ್ ಪದವಿ ಕಾಲೇಜಿನ ಪ್ರಾಂಶುಪಾಲೆ ತೃಪ್ತಿ ಬೋಪಣ್ಣ ಮಾತನಾಡಿ, ರಾಷ್ಟç ಹಾಗೂ ಅಂತರರಾಷ್ಟಿçÃಯ ಮಟ್ಟದಲ್ಲಿ ವಿಪತ್ತು ಸಂಬAಧಿಸಿದ ಸಂದರ್ಭದಲ್ಲಿ ಎನ್ಡಿಆರ್ಎಫ್ ತಂಡವು ಅದನ್ನು ಹೇಗೆ ನಿರ್ವಹಣೆ ಮಾಡುತ್ತದೆ ಎಂಬುದನ್ನು ನಾವು ನೋಡಿದ್ದೇವೆ. ಆ ತಂಡದ ಸಮಯಪ್ರಜ್ಞೆಯಿಂದ ಆಪತ್ತು ನಿಯಂತ್ರಿಸಿ, ಜೀವ ರಕ್ಷಿಸುವ ಕಾರ್ಯವನ್ನು ಮಾಡುತ್ತಿದೆ. ಇಂದು ನಮ್ಮ ಕಾಲೇಜಿನಲ್ಲಿ ಸಹ ನಮ್ಮ ವಿದ್ಯಾರ್ಥಿಗಳಿಗೆ ಎನ್ಎಸ್ಎಸ್ ಡೇ ಪ್ರಯುಕ್ತ ವಿಪತ್ತು ನಿರ್ವಹಣಾ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಿದ್ದು ಎಲ್ಲಾ ವಿದ್ಯಾರ್ಥಿಗಳಿಗೂ ಅರಿವು ಮೂಡಿದಂತಾಗುತ್ತದೆ ಎಂದರು. ಕಾಲೇಜಿನ ಎನ್ಎಸ್ಎಸ್ ಘಟಕದ ಅಧಿಕಾರಿ ಬಿ.ಎನ್ ಶಾಂತಿಭೂಷಣ್ ಅವರು ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಎನ್ಡಿಆರ್ಎಫ್ ತಂಡದ ಅಧಿಕಾರಿಗಳಾದ ಪ್ರದೀಪ್ ಕುಮಾರ್ ಹಾಗೂ ನಾಗರಾಜು ಅವರನ್ನು ವಿದ್ಯಾಸಂಸ್ಥೆ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ವೇದಿಕೆಯಲ್ಲಿ ಕಾಲೇಜಿನ ಐಕ್ಯೂಎಸಿ ಸಂಚಾಲಕಿ ಹೇಮ ಎನ್ಎಸ್ಎಸ್ ಘಟಕದ ಸ್ವಯಂ ಸೇವಕಿ ಪ್ರಕೃತಿ, ಯುವ ರೆಡ್ ಕ್ರಾಸ್ ಘಟಕದ ಅಧಿಕಾರಿ ವಿಲೀನ ಗೋನ್ಸಾಲ್ವೆಸ್ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿಗಳು ಹಾಗೂ ಪದವಿ ಕಾಲೇಜಿನ ೫೦೦ಕ್ಕೂ ಅಧಿಕ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಎನ್ಡಿಆರ್ಎಫ್ ತಂಡದ ವತಿಯಿಂದ ವಿದ್ಯಾರ್ಥಿಗಳಿಗೆ ಸಭಾ ಕಾರ್ಯಕ್ರಮದ ಬಳಿಕ ವಿಪತ್ತು ನಿರ್ವಹಣೆ ಕುರಿತು ತರಬೇತಿ ಕಾರ್ಯಕ್ರಮ ಜರುಗಿತು.
ಎನ್ಡಿಆರ್ಎಫ್ ತಂಡದ ರೆಸ್ಕೂ÷್ಯ ಕಮಾಂಡರ್ ನಾಗರಾಜು ಎ.ಪಿ. ವಿದ್ಯಾರ್ಥಿಗಳಿಗೆ ವಿಪತ್ತು ನಿರ್ವಹಣೆಯ ವಿವಿಧ ವಿಧಾನಗಳು ಹಾಗೂ ಹಂತಗಳನ್ನು ಉದಾಹರಣೆ ಸಮೇತ ವಿವರಿಸಿದರು. ವಿಪತ್ತು ನಿರ್ವಹಣೆಯ ಕುರಿತು ಪ್ರಾಯೋಗಿಕ ತರಬೇತಿಯನ್ನು ನಡೆಸಲಾಯಿತು. ಅಧಿಕಾರಿಗಳು ಪ್ರಾತ್ಯಕ್ಷಿಕೆಯನ್ನು ನೆರವೇರಿಸಿದರು.