ಸಿದ್ದಾಪುರ, ಸೆ. ೩೦: ಕಾರ್ಮಿಕ ಸಚಿವರ ಆದೇಶದ ಮೇರೆಗೆ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಉಪ ಕಾರ್ಯದರ್ಶಿ ಗುರುಪ್ರಸಾದ್ ನೇತೃತ್ವದಲ್ಲಿ ಕಟ್ಟಡ ಕಾರ್ಮಿಕರ ಸಂಘಟನೆಗಳ ಮುಖಂಡರ ಕುಂದುಕೊರತೆ ಸಭೆ ನಡೆಯಿತು. ಸಭೆಯಲ್ಲಿ ಕಾರ್ಮಿಕ ಸಂಘಟನೆಗಳ ಮುಖಂಡರು ವಿವಿಧ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತಂದರು. ತಾಂತ್ರಿಕ ಕಾರಣಗಳಿಂದ ಕಾರ್ಮಿಕರ ಕಾರ್ಡ್ ನವೀಕರಣವಾಗದೆ ನೋಂದಣಿ ರದ್ದಾಗಿರುವ ಪ್ರಕರಣಗಳಿಗೆ ಮತ್ತೊಮ್ಮೆ ನವೀಕರಣಕ್ಕೆ ಅವಕಾಶ ಕಲ್ಪಿಸಬೇಕು. ಪಿಂಚಣಿ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಲು ವಯೋಮಿತಿ ತಲುಪಿದ ಬಳಿಕ ಇರುವ ಆರು ತಿಂಗಳ ಕಾಲಮಿತಿಯನ್ನು ರದ್ದುಪಡಿಸಬೇಕು. ಅರ್ಜಿ ಸಲ್ಲಿಸಿದರೂ ಸೌಲಭ್ಯ ದೊರೆಯದಿರುವ ಸಮಸ್ಯೆಯನ್ನು ಪರಿಹರಿಸಬೇಕು ಎಂದು ಮನವಿ ಮಾಡಿದರು.
ತಾಲೂಕು ಮಟ್ಟದಲ್ಲಿ ಖಾಸಗಿ ಆಸ್ಪತ್ರೆಗಳನ್ನು ಕಲ್ಯಾಣ ಮಂಡಳಿಯಲ್ಲಿ ನೋಂದಾಯಿಸುವAತೆ ಕ್ರಮ ಕೈಗೊಳ್ಳಬೇಕು. ಕಾರ್ಮಿಕ ನಿರೀಕ್ಷಕರಿಗೆ ವಾಹನ ವ್ಯವಸ್ಥೆ ಕಲ್ಪಿಸಿದರೆ ಕಾರ್ಮಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಲು ಸಾಧ್ಯವಾಗಲಿದೆ ಎಂದು ಕಾಫಿನಾಡು ಕಟ್ಟಡ ಕಾರ್ಮಿಕ ಸಂಘದ ಜಿಲ್ಲಾ ಕಾರ್ಯದರ್ಶಿ ಎಂ.ಎ. ಕೃಷ್ಣ ತಿಳಿಸಿದರು.
ಪ್ರಸ್ತುತ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಗ್ರಾಮ ಪಂಚಾಯಿತಿಗಳ ಗ್ರಾಮಸಭೆ ಗಳಿಗೆ ಭೇಟಿ ನೀಡದಿರುವುದರಿಂದ ಮಂಡಳಿ ಹಾಗೂ ಇಲಾಖೆಯಿಂದ ದೊರೆಯುವ ವಿವಿಧ ಸೌಲಭ್ಯಗಳ ಕುರಿತು ಸಾರ್ವಜನಿಕರಿಗೆ ಸಮರ್ಪಕ ಮಾಹಿತಿ ಲಭ್ಯವಾಗು ತ್ತಿಲ್ಲ. ಈ ಹಿನ್ನೆಲೆಯಲ್ಲಿ ಗ್ರಾಮಸಭೆ ಗಳಲ್ಲಿ ಇಲಾಖೆಯ ಸೌಲಭ್ಯಗಳ ಕುರಿತು ಮಾಹಿತಿ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ವೀರಾಜಪೇಟೆಯ ಕಾರ್ಮಿಕ ಸಂಘದ ಮುಖಂಡ ವರ್ಗೀಸ್ ಮಾತನಾಡಿ, ಜಿಲ್ಲೆಯಲ್ಲಿ ಕಟ್ಟಡ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಸಹಾಯಧನ ಹಾಗೂ ನಿವೇಶನ ರಹಿತ ಕಾರ್ಮಿಕರಿಗೆ ಮನೆ ನಿರ್ಮಾಣಕ್ಕೆ ಸಹಾಯಧನ ಒದಗಿಸಬೇಕು ಎಂದು ಆಗ್ರಹಿಸಿದರು.
ಕಾರ್ಮಿಕ ಸಂಘಟನೆಗಳ ಮುಖಂಡರಿAದ ಅಹವಾಲುಗಳನ್ನು ಆಲಿಸಿದ ಉಪ ಕಾರ್ಯದರ್ಶಿ ಗುರುಪ್ರಸಾದ್, ಸಮಸ್ಯೆಗಳ ಕುರಿತು ಮಾಹಿತಿ ಸಂಗ್ರಹಿಸಿ ಮಂಡಳಿಯ ಮೇಲಧಿಕಾರಿಗಳು ಹಾಗೂ ಕಾರ್ಮಿಕ ಸಚಿವರೊಂದಿಗೆ ಚರ್ಚಿಸಿ ಕಾರ್ಮಿಕರಿಗೆ ಅಗತ್ಯ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಜಿಲ್ಲೆಯಲ್ಲಿ ಅಧಿಕಾರಿಗಳ ಕೊರತೆ ಇದ್ದರೂ ಲಭ್ಯವಿರುವ ಸಿಬ್ಬಂದಿಯಿAದ ಸಾಧ್ಯವಾದಷ್ಟು ಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಹೆಚ್ಚುವರಿ ಅಧಿಕಾರಿಗಳ ನೇಮಕಕ್ಕೆ ಸಂಬAಧಿಸಿದAತೆ ಮೇಲಧಿಕಾರಿಗಳು ಹಾಗೂ ಸಚಿವರಿಗೆ ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಹಿರಿಯ ಕಾರ್ಮಿಕ ನಿರೀಕ್ಷಕ ಎಂ.ಎA. ಯತ್ನಟ್ಟಿ, ಸೋಮವಾರಪೇಟೆ ತಾಲೂಕು ನಿರೀಕ್ಷಕ ಶಶಿಧರ್, ಜಿಲ್ಲಾ ಕಾರ್ಯನಿರ್ವಾಹಕ ಅಧಿಕಾರಿ ಪ್ರಸನ್ನ, ತಾಲೂಕು ಮಾಹಿತಿ ನಮೂದುಗಾರರು ಸೇರಿದಂತೆ ಜಿಲ್ಲೆಯ ವಿವಿಧ ಕಾರ್ಮಿಕ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.