ವೀರಾಜಪೇಟೆ, ಸೆ. ೩೦: ವೀರಾಜಪೇಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕ್ರೀಡಾ, ಸಾಂಸ್ಕೃತಿಕ, ಎನ್‌ಎಸ್‌ಎಸ್, ರೆಡ್ ಕ್ರಾಸ್, ರೋವರ್ಸ್-ರೇಂಜರ್ಸ್ ಸೇರಿದಂತೆ ವಿವಿಧ ಘಟಕಗಳು ಹಾಗೂ ಸಮಿತಿಗಳ ೨೦೨೬-೨೭ನೇ ಸಾಲಿನ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮಕ್ಕೆ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ, ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯೂ ಆಗಿರುವ ಎ.ಎಸ್. ಪೊನ್ನಣ್ಣ ಚಾಲನೆ ನೀಡಿ ಮಾತನಾಡಿದರು. ಸರ್ಕಾರ ಹಾಗೂ ವಿವಿಧ ಸಂಘ-ಸAಸ್ಥೆಗಳು ಜನಸೇವೆ, ಜನರಿಗೆ ಮಾಹಿತಿ ಒದಗಿಸುವುದು ಮತ್ತು ಜನೋಪಯೋಗಿ ಉದ್ದೇಶಗಳಿಗಾಗಿ ಹಲವು ಕಾರ್ಯಕ್ರಮಗಳನ್ನು ಹಮ್ಮಿ ಕೊಳ್ಳುತ್ತಿವೆ. ೨೦೨೬-೨೭ನೇ ಸಾಲಿನಲ್ಲಿ ಆಯೋಜಿಸಿರುವ ಎಲ್ಲ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಆಯಾ ಸಂಸ್ಥೆಗಳ ಪ್ರಮುಖರು ಹಾಗೂ ಪದಾಧಿಕಾರಿಗಳು ಹೆಚ್ಚಿನ ಗಮನಹರಿಸಬೇಕು ಎಂದು ಕರೆ ನೀಡಿದರು.

ಇಂತಹ ಕಾರ್ಯಕ್ರಮಗಳಿಂದ ಸಮಾಜದ ವಿವಿಧ ವರ್ಗದ ಜನರಿಗೆ ಅನುಕೂಲವಾಗಲಿದೆ. ಪ್ರತಿಯೊಂದು ಕಾರ್ಯವನ್ನೂ ಜನಸೇವೆ ಎಂದೇ ಭಾವಿಸಿ, ಸೇವಾ ಮನೋಭಾವದಿಂದ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.

ಈ ಸಂದರ್ಭ ಕಾಲೇಜಿನ ಉಪಾಧ್ಯಕ್ಷ ಮಾದಂಡ ತಿಮ್ಮಯ್ಯ, ಸದಸ್ಯರು ಹಾಗೂ ಪದಾಧಿಕಾರಿಗಳು, ಪ್ರಾಂಶುಪಾಲರಾದ ಕೋರನ ಸರಸ್ವತಿ, ವಿವಿಧ ಘಟಕಗಳ ಅಧ್ಯಕ್ಷರು, ಉಪನ್ಯಾಸಕ ವೃಂದ, ಕೆಡಿಪಿ ಸದಸ್ಯ ಶಶಿ, ಬ್ಲಾಕ್ ಉಪಾಧ್ಯಕ್ಷ ಜೋಕಿಮ್, ಪ್ರಧಾನ ಕಾರ್ಯದರ್ಶಿ ಮಂಜುನಾಥ್, ವಿದ್ಯಾರ್ಥಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

ಬೆಂಕಿಯಲ್ಲಿ ಘಮಘಮಿಸಿದ ಕಾಫಿ-ಕೊಡಗಿನ ಪುರಾತನ ಕಾಫಿ ಯಂತ್ರದ ಕಥೆ