ಮಡಿಕೇರಿ, ಸೆ. ೩೦: ರಾಷ್ಟಿçÃಯ ಸೇವಾ ಯೋಜನಾ ಘಟಕದ ಪ್ರಯುಕ್ತ ವೀರಾಜಪೇಟೆಯ ಕಾವೇರಿ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟಿçÃಯ ಸೇವಾ ಯೋಜನಾ ದಿನಾಚರಣೆಯನ್ನು ಆಚರಿಸ ಲಾಯಿತು. ಕಾಲೇಜು ಪ್ರಾಂಶುಪಾಲೆ ಎಂ.ಕೆ. ಪದ್ಮ ಮಾತನಾಡಿ, ಸ್ವಯಂಸೇವಕರು ತಮ್ಮ ವಿದ್ಯಾರ್ಥಿ ಜೀವನದಲ್ಲಿ ಶಿಸ್ತು, ಸೇವಾ ಮನೋಭಾವನೆ, ಮಾನವೀಯ ಮೌಲ್ಯಗಳನ್ನು ಹಾಗೂ ನಿಸ್ವಾರ್ಥ ಸೇವೆಯನ್ನು ಬೆಳೆಸಿಕೊಳ್ಳಬೇಕೆಂದು ಕರೆ ನೀಡಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ನಿಕಟಪೂರ್ವ ಎನ್.ಎಸ್.ಎಸ್. ಅಧಿಕಾರಿ ಕೆ.ಪಿ. ಗಾಯತ್ರಿ ತಿಮ್ಮಯ್ಯ, ಅವರು ದಿನದ ಮಹತ್ವ ಹಾಗೂ ಸ್ವಯಂಸೇವಕರು ನಿಸ್ವಾರ್ಥ ಸೇವೆಯಿಂದ ಸೇವಾ ಮನೋಭಾವನೆಯನ್ನು ಬೆಳೆಸಿಕೊಂಡು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು. ರಾಷ್ಟಿçÃಯ ಸೇವಾ ಯೋಜನೆಯು ವ್ಯಕ್ತಿತ್ವ ನಿರ್ಮಾಣಕ್ಕೆ ಉತ್ತಮ ವೇದಿಕೆಯನ್ನು ಕಲ್ಪಿಸುತ್ತದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸ್ವಯಂಸೇವಕರಿAದ ರಾಷ್ಟಿçÃಯ ಸೇವಾ ಯೋಜನಾ ಘಟಕದ ಸ್ವಯಂಸೇವಾ ಪ್ರಾರ್ಥನಾ ಗೀತೆಯನ್ನು ಹಾಗೂ ರಾಷ್ಟಿçÃಯ ಸೇವಾ ಯೋಜನೆಯ ಗುರಿ, ಉದ್ದೇಶಗಳನ್ನು ತಿಳಿಸಿಕೊಟ್ಟರು. ನಂತರ ಸ್ವಯಂಸೇವಕರಿAದ ಕಾಲೇಜು ಆವರಣವನ್ನು ಸ್ವಚ್ಛಗೊಳಿಸಿ ಸಿಹಿ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಹಿರಿಯ ಉಪನ್ಯಾಸಕರುಗಳಾದ ಎಂ.ಪಿ. ದಮಯಂತಿ ಹಾಗೂ ಎ.ಎಂ. ಡೈನ ಸೋಮಯ್ಯ, ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಸಂಚಾಲಕಿ ನಕಿಯಭಾನು, ಉಪನ್ಯಾಸಕ ವೃಂದದವರು, ರಾಷ್ಟಿçÃಯ ಸೇವಾ ಯೋಜನೆ ಘಟಕದ ಕಾರ್ಯಕ್ರಮಾಧಿಕಾರಿ ಅನುಪಮ ತಿಮ್ಮಯ್ಯ, ಸ್ವಯಂ ಸೇವಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಪೊನ್ನಂಪೇಟೆ, ಸೆ. ೩೦ : ಗೋಣಿಕೊಪ್ಪಲು ಕಾವೇರಿ ಕಾಲೇಜಿನ ಎನ್.ಎಸ್.ಎಸ್. ಘಟಕದ ವತಿಯಿಂದ ರಾಷ್ಟಿçÃಯ ಸೇವಾ ಯೋಜನೆ ದಿನಾಚರಣೆ ಆಚರಿಸಲಾಯಿತು.

ಪ್ರಾಂಶುಪಾಲ ಡಾ. ಎಂ.ಬಿ. ಕಾವೇರಿಯಪ್ಪ ಅವರು ಎನ್.ಎಸ್.ಎಸ್. ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಎನ್‌ಎಸ್‌ಎಸ್ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಉತ್ತಮ ವೇದಿಕೆಯಾಗಿದ್ದು, ಕ್ರಿಯಾಶೀಲತೆ ಯನ್ನು ಮೈಗೂಡಿಸಿಕೊಳ್ಳಲು ಸಹಕಾರಿಯಾಗಿದೆ. ವಿದ್ಯಾರ್ಥಿಗಳು ಉತ್ತಮ ನಾಯಕತ್ವ ಗುಣಗಳನ್ನು ಬೆಳೆಸಿಕೊಂಡು, ಭ್ರಷ್ಟಾಚಾರದ ವಿರುದ್ಧ ಜಾಗೃತಿ ಮೂಡಿಸಿ, ಭ್ರಷ್ಟಾಚಾರ ಮುಕ್ತ ಭಾರತದ ನಿರ್ಮಾಣದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದರು. ದಿನಾಚರಣೆಯ ಅಂಗವಾಗಿ ಪೊನ್ನಂಪೇಟೆಯ ಶ್ರೀ ರಾಮಕೃಷ್ಣ ಶಾರದಾಶ್ರಮಕ್ಕೆ ಭೇಟಿ ನೀಡಿದ ವಿದ್ಯಾರ್ಥಿಗಳು ಆಶ್ರಮದ ಆವರಣದಲ್ಲಿ ಶ್ರಮದಾನ ಮಾಡಿ ಸ್ವಚ್ಛಗೊಳಿಸಿದರು.

ಎನ್‌ಎಸ್‌ಎಸ್ ಅಧಿಕಾರಿಗಳಾದ ಎಂ.ಎ. ಕುಶಾಲಪ್ಪ ಮತ್ತು ಕೆ.ಎಸ್. ಪೂಜಾ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆಶ್ರಮದ ಅಧ್ಯಕ್ಷರಾದ ಶ್ರೀ ಪರಹಿತಾನಂದ ಮಹಾರಾಜ್ ಅವರು ವಿದ್ಯಾರ್ಥಿಗಳಿಗೆ ಆಶೀರ್ವಚನ ನೀಡಿ ಸ್ವಾಮಿ ವಿವೇಕಾನಂದರ ಕುರಿತು ಮಾತನಾಡಿ, ವಿದ್ಯಾರ್ಥಿಗಳು ವಿವೇಕಾನಂದರ ತತ್ವ ಆದರ್ಶ ಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡು ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳುವಂತೆ ಕರೆ ನೀಡಿದರು. ಇದೇ ಸಂದರ್ಭದಲ್ಲಿ ಹಾಜರಿದ್ದ ವಿದ್ಯಾರ್ಥಿಗಳಿಗೆ ಆಶ್ರಮದ ವತಿಯಿಂದ ನೋಟ್‌ಬುಕ್‌ಗಳನ್ನು ವಿತರಿಸಿದರು.