ಶ್ರೀಮಂಗಲ, ಸೆ. ೩೦: ಶ್ರೀಮಂಗಲ ಕುರ್ಚಿ ಗ್ರಾಮದ ಅಮ್ಮೆಕೊಲ್ಲಿ ಗಿರಿಜನ ಹಾಡಿಗೆ ವೀರಾಜಪೇಟೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಅವರು ಭೇಟಿ ನೀಡಿ ನಿವಾಸಿಗಳ ಸಮಸ್ಯೆಯನ್ನು ಆಲಿಸಿದರು.

ಸ್ಥಳೀಯ ನಿವಾಸಿಗಳು ತಮ್ಮ ಅಹವಾಲುಗಳನ್ನು ಶಾಸಕರಿಗೆ ಸಲ್ಲಿಸಿದರು. ಪ್ರಮುಖವಾಗಿ ತಮ್ಮ ಕಾಲೋನಿಯಲ್ಲಿ ಮತ್ತಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಬೇಕೆಂದು ಮನವಿ ಮಾಡಿದ ನಿವಾಸಿಗಳು, ವಿದ್ಯುಚ್ಛಕ್ತಿ, ರಸ್ತೆ ಹಾಗೂ ಇತರ ಮೂಲಭೂತ ಸೌಲಭ್ಯಗಳನ್ನು ಮತ್ತಷ್ಟು ಸುಧಾರಿಸಿ ಕೊಡುವಂತೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ತಾಲೂಕು ತಹಶೀಲ್ದಾರ್ ಸಂಜನಾ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಬ್ಲಾಕ್ ಅಧ್ಯಕ್ಷ ಮಿದೇರಿರ ನವೀನ್, ವಲಯ ಅಧ್ಯಕ್ಷ ಪಲ್ವಿನ್ ಪೂಣಚ್ಚ, ಟಿ. ಶೆಟ್ಟಿಗೇರಿ ವಲಯ ಅಧ್ಯಕ್ಷ ತೀತಿರ ಪ್ರಭು, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಕಾಳಿಮಾಡ ಪ್ರಶಾಂತ್, ಕುಟ್ಟ ವಲಯ ಅಧ್ಯಕ್ಷ ರಾಮಕೃಷ್ಣ, ಡಿಸಿಸಿ ಸದಸ್ಯ ವಿಶು, ಸಂದೀಪ್, ಪಕ್ಷದ ಮುಖಂಡರು ತೀತಿರ ಮಂದಣ್ಣ, ಚೆಟ್ಟಂಗಡ ಅಭಿನ್, ಸುಧೀರ್, ಅಜ್ಜಿಕುಟ್ಟಿರ ಗಿರೀಶ್, ಉದಯ್ ಮಾದಪ್ಪ, ಯುವ ಕಾಂಗ್ರೆಸ್ ಫಾರ್ದಿನ್, ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.