ಮಡಿಕೇರಿ, ಅ.೧: ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಪಿ.ಎಂ.ನರೇAದ್ರ ಸ್ವಾಮಿ ಅವರು ತಾ. ೩ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಸಚಿವರು ತಾ.೩ ರಂದು ಬೆಳಗ್ಗೆ ೧೦ ಗಂಟೆಗೆ ಬಿಟ್ಟಂಗಾಲದ ಕೂರ್ಗ್ ಯತ್ನಿಕ್ ಹಾಲ್‌ನಲ್ಲಿ ನಡೆಯುವ ಪ್ರಜಾಸೇವಾ ಅಭಿಯಾನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಮಧ್ಯಾಹ್ನ ೨ ಗಂಟೆಗೆ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ತಲಕಾವೇರಿ ಪವಿತ್ರ ತೀರ್ಥೋದ್ಭವ ಸಂಬAಧ ಸಭೆ ನಡೆಸಲಿದ್ದಾರೆ. ಹಾಗೆಯೇ ಮಡಿಕೇರಿ ದಸರಾ ಉತ್ಸವ ಸಂಬAಧಿಸಿದAತೆ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಜೊತೆ ಪೂರ್ವಭಾವಿ ಸಭೆ ನಡೆಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಕೆ.ಸಿ.ವಿರೂಪಾಕ್ಷ ತಿಳಿಸಿದ್ದಾರೆ.