ಕೂಡಿಗೆ, ಅ. ೧: ಹೆಚ್. ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಘಟಕದ ಸಭೆ ಜಿಲ್ಲಾಧ್ಯಕ್ಷ ಡಾ. ಬಿ.ಎ. ದಿನೇಶ್ ಶೆಟ್ಟಿ ಅಧ್ಯಕ್ಷತೆಯಲ್ಲಿ ಪ್ರವಾಸಿ ಮಂದಿರದಲ್ಲಿ ನಡೆಯಿತು.

ಸಭೆಯಲ್ಲಿ ನೂತನ ಸದಸ್ಯರ ಸೇರ್ಪಡೆ ಕಾರ್ಯಕ್ರಮ ನಡೆಯುವುದರೊಂದಿಗೆ ನೂತನ ಪದಾಧಿಕಾರಿಗಳಿಗೆ ಪದಗ್ರಹಣ ನೆರವೇರಿಸಿ ಪ್ರಮಾಣಪತ್ರಗಳನ್ನು ಹಸ್ತಾಂತರಿಸಲಾಯಿತು.

ಈ ಸಂದರ್ಭ ಮಾತನಾಡಿದ ಜಿಲ್ಲಾಧ್ಯಕ್ಷ ಬಿ.ಎ. ದಿನೇಶ್ ಶೆಟ್ಟಿ, ಸಂಘಟನೆಯನ್ನು ತೊರೆದಿದ್ದ ಕೆಲವರು ಮತ್ತೆ ಸಂಘಟನೆಗೆ ಮರಳಿದ್ದು, ಹೊಸ ಸದಸ್ಯರೂ ಸಂಘಟನೆಯತ್ತ ಆಸಕ್ತಿ ತೋರುತ್ತಿದ್ದಾರೆ. ಸಂಘಟನೆಯ ಮುಂದಿನ ಅಭಿವೃದ್ಧಿಗೆ ಪೂರಕವಾದ ಹೋರಾಟಗಳ ಕುರಿತು ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ತಿಳಿಸಿದರು.

ತೀವ್ರ ಬರಗಾಲದ ಹಿನ್ನೆಲೆಯಲ್ಲಿ ರೈತರಿಗೆ ಅಗತ್ಯ ಪರಿಹಾರ ದೊರಕಿಸುವ ನಿಟ್ಟಿನಲ್ಲಿ ಸಂಘಟನೆ ಶ್ರಮಿಸಲಿದೆ. ರೈತರ ಸಮಸ್ಯೆಗಳಿಗೆ ಸ್ಪಂದಿಸುವುದರೊAದಿಗೆ ಜನಪರ ಹಾಗೂ ಅಭಿವೃದ್ಧಿಪರ ಹೋರಾಟಗಳನ್ನು ಮುಂದುವರಿಸ ಲಾಗುವುದು ಎಂದು ಹೇಳಿದರು. ಈ ಸಂದರ್ಭ ಜಿಲ್ಲಾ ಸಂಚಾಲಕ ಎಂ.ಎಸ್. ಮಣಿಕಂಠ, ಜಿಲ್ಲಾ ಗೌರವಾಧ್ಯಕ್ಷರಾದ ನಾಗರಾಜ ಕಾವಲ್ ಕೊಂಡ ಹಾಗೂ ಸಲೀನಾ ಪೆದ್ರು, ಜಿಲ್ಲಾ ಉಪಾಧ್ಯಕ್ಷರಾದ ಸಂತೋಷ್ ನೆಲ್ಲಿಹುದಿಕೇರಿ, ನಿರ್ಮಲಾ ಮತ್ತು ಸುಶೀಲಾ, ಜಿಲ್ಲಾ ಕಾರ್ಯದರ್ಶಿ ಸರಳಾ ರಾಮಣ್ಣ, ಸತೀಶ್, ಮಡಿಕೇರಿ ತಾಲೂಕು ಅಧ್ಯಕ್ಷ ಅರುಣ್ ಕುಮಾರ್, ಗೌರವಾಧ್ಯಕ್ಷ ನಾಗರಾಜ್, ಪ್ರಧಾನ ಕಾರ್ಯದರ್ಶಿ ತಾಜುನ್ನೀಸಾ, ಉಪಾಧ್ಯಕ್ಷೆ ತನುಜಾವತಿ, ಕುಶಾಲನಗರ ತಾಲೂಕು ಅಧ್ಯಕ್ಷ ಪುಟ್ಟಸ್ವಾಮಿ, ಉಪಾಧ್ಯಕ್ಷ ಕಮಾಲುದ್ದೀನ್, ಗೌರವಾಧ್ಯಕ್ಷೆ ಪುಟ್ಟಮ್ಮ, ಪ್ರಧಾನ ಕಾರ್ಯದರ್ಶಿ ಗಣೇಶ್ ಮಾಸ್ಟರ್, ಬಾವ ಮಾಲ್ದಾರೆ, ಕಾರ್ಯದರ್ಶಿ ಸುಂದರೇಶ್, ಜಂಟಿ ಕಾರ್ಯದರ್ಶಿ ಕಾರ್ತಿಕ್, ಮಾಧ್ಯಮ ವಕ್ತಾರ ಭರತ್ ಉಳುವಾರನ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.