ಮಡಿಕೇರಿ, ಅ. ೧: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವತಿಯಿಂದ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆಯಲ್ಲಿನ ಉಳಿಕೆ ಮೂಲ ವೃಂದದ ‘ಭೂ ಮಾಪಕರ’ ಹುದ್ದೆಗಳ ನೇರ ನೇಮಕಾತಿ ಹಾಗೂ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದದ ‘ಗ್ರಾಮ ಆಡಳಿತ ಅಧಿಕಾರಿ’ ಹುದ್ದೆಗಳ ನೇರ ನೇಮಕಾತಿ ಪರೀಕ್ಷೆಯನ್ನು ಸುಗಮ ಹಾಗೂ ಸುವ್ಯವಸ್ಥಿತವಾಗಿ ನಡೆಸುವಂತೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪರೀಕ್ಷೆ ಸಂಬAಧ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪರೀಕ್ಷೆ ಸಂಬAಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಪರೀಕ್ಷೆ ಸಂದರ್ಭದಲ್ಲಿ ಯಾವುದೇ ರೀತಿಯ ಲೋಪ ಉಂಟಾಗದAತೆ ಎಚ್ಚರವಹಿಸುವಂತೆ ಜಿಲ್ಲಾಧಿಕಾರಿ ಸಂಬAಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಈಗಾಗಲೇ ಪರೀಕ್ಷೆ ಸಂಬAಧ ವೀಕ್ಷಕರು ಹಾಗೂ ಮಾರ್ಗಾಧಿಕಾರಿಗಳನ್ನು ನಿಯೋಜಿಸಲಾಗಿದ್ದು, ಎಲ್ಲಾ ಹಂತದ ಅಧಿಕಾರಿಗಳು ಒಂದು ತಂಡವಾಗಿ ಕರ್ತವ್ಯ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಹೇಳಿದರು. ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎ.ಗಣಪತಿ ಮಾಹಿತಿ ನೀಡಿ ‘ಭೂಮಾಪಕರ’ ಹುದ್ದೆಯ ನೇರ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆಯು ಅಕ್ಟೋಬರ್ ೨ ರಂದು (ಇಂದು) ಮಡಿಕೇರಿ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದ್ದು, ೩೮೬ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ಅಕ್ಟೋಬರ್, ೪ ರಂದು ‘ಗ್ರಾಮ ಆಡಳಿತ ಅಧಿಕಾರಿ’ ಹುದ್ದೆಗಳ ನೇರ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆಯು ನಗರದ ೫ ಕೇಂದ್ರಗಳಲ್ಲಿ ನಡೆಯಲಿದ್ದು, ೨,೩೪೪ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಯು ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ, ಸರ್ಕಾರಿ ಪದವಿ ಪೂರ್ವ ಕಾಲೇಜು ಮಡಿಕೇರಿ, ಸಂತ ಜೋಸೆಫರ ಕಾನ್ವೆಂಟ್ ಸಂಯುಕ್ತ ಪದವಿ ಪೂರ್ವ ಕಾಲೇಜು, ಸಂತ ಮೈಕಲರ ಸಂಯುಕ್ತ ಪದವಿ ಪೂರ್ವ ಕಾಲೇಜು ಮತ್ತು ಕೊಡಗು ವಿದ್ಯಾಲಯ ಮಡಿಕೇರಿ ಈ ೫ ಕೇಂದ್ರಗಳಲ್ಲಿ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಅವರು ಸ್ಪರ್ಧಾತ್ಮಕ ಪರೀಕ್ಷೆ ಸಂಬAಧ ಅಗತ್ಯ ಪೊಲೀಸರನ್ನು ನಿಯೋಜನೆ ಮಾಡಲಾಗುವುದು ಎಂದು ಹೇಳಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ನಿರಂಜನ, ಜಿಲ್ಲಾ ಖಜಾನಾಧಿಕಾರಿ ರಘುನಾಥ್, ಕೈಗಾರಿಕಾ ಕೇಂದ್ರದ ಉಪ ನಿರ್ದೇಶಕ ರಘು, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ಶಶಿಧರ, ಪಶುಪಾಲನಾ ಇಲಾಖೆಯ ಉಪ ನಿರ್ದೇಶಕ ಲಿಂಗರಾಜು ದೊಡ್ಡಮನಿ, ಕೃಷಿ ಇಲಾಖೆಯ ಉಪ ನಿರ್ದೇಶಕ ಸೋಮಶೇಖರ್, ಸಮಗ್ರ ಗಿರಿಜನ ಯೋಜನಾ ಇಲಾಖೆಯ ಉಪ ನಿರ್ದೇಶಕ ಭಾಗೀರಥಿ, ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕ ಸಚಿನ್, ತಹಶಿಲ್ದಾರರಾದ ಶ್ರೀಧರ, ಪ್ರವೀಣ್ ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್, ಕೂಡಿಗೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎಚ್.ಕೆ.ನಾಗರಾಜು, ಶಿಕ್ಷಣ ಸಂಯೋಜಕ ಜಾನೆಟ್, ಡಿಡಿಪಿಐ ಕಚೇರಿಯ ಉಪ ಯೋಜನಾ ಸಮನ್ವಯಾಧಿಕಾರಿ ಕೃಷ್ಣಪ್ಪ, ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿಜಯ್ ಇತರರು ಇದ್ದರು. ಪರೀಕ್ಷಾ ಕೇಂದ್ರಗಳಲ್ಲಿ ಸುಗಮವಾಗಿ ಪರೀಕ್ಷೆ ನಡೆಸಲು ಭಾರತೀಯ ನಾಗರಿಕ ಸಂಹಿತೆ ೨೦೨೩ರ ಕಲಂ ೧೬೩ ರಡಿ ಪ್ರದತ್ತವಾದ ಅಧಿಕಾರದಂತೆ ಪರೀಕ್ಷಾ ಕೇಂದ್ರಗಳ ಸುತ್ತಲೂ ೨೦೦ ಮೀ.ವ್ಯಾಪ್ತಿಯಲ್ಲಿನ ಪ್ರದೇಶವನ್ನು ನಿರ್ಭಂಧಿತ ಸ್ಥಳ ಎಂದು ಘೋಷಿಸಿ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಆದೇಶಿಸಿದ್ದಾರೆ.

ಈ ವ್ಯಾಪ್ತಿಯಲ್ಲಿನ ಜೆರಾಕ್ಸ್ ಅಂಗಡಿ ಮತ್ತು ಸೈಬರ್ ಸೆಂಟರ್‌ಗಳನ್ನು ಪರೀಕ್ಷಾ ದಿನಗಳಂದು ಮುಚ್ಚಬೇಕು. ಈ ಆದೇಶವು ಪರೀಕ್ಷಾ ದಿನದಂದು ಬೆಳಗ್ಗೆ ೧೦ ರಿಂದ ಸಂಜೆ ೫.೩೦ ಗಂಟೆಯವರೆಗೆ ಚಾಲ್ತಿಯಲ್ಲಿರುತ್ತದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.