ಮಡಿಕೇರಿ, ಅ. ೧: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಕಾಂಗ್ರೆಸ್ ಹತಾಶಗೊಂಡಿದ್ದು, ಈ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದೆ ಎಂದು ಜಿಲ್ಲಾ ಬಿಜೆಪಿ ಆರೋಪಿಸಿದೆ.
ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಬಿಜೆಪಿ ವಕ್ತಾರ ತಳೂರು ಕಿಶೋರ್ ಕುಮಾರ್, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು ಹಾಗೂ ಅವರನ್ನು ಬಂಧಿಸಬೇಕು ಎಂದು ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿರುವುದು ಖಂಡನೀಯ ಎಂದರು.
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಕೇಂದ್ರ ಸರ್ಕಾರ ೪ಏಳನೇ ಪುಟಕ್ಕೆ
(ಮೊದಲ ಪುಟದಿಂದ) ಯಾವುದೇ ರೀತಿಯ ಹಸ್ತಕ್ಷೇಪ ಮಾಡುತ್ತಿಲ್ಲ. ಸಂವಿಧಾನದ ಅಡಿಯಲ್ಲಿ ಚುನಾವಣಾ ಆಯೋಗ ಸ್ವತಂತ್ರ ಸಂಸ್ಥೆಯಾಗಿದ್ದು, ಮತದಾರರ ಪಟ್ಟಿಯ ಪರಿಷ್ಕರಣೆಯ ಕಾರ್ಯವನ್ನು ಆಯೋಗವೇ ನಿರ್ವಹಿಸುತ್ತಿದೆ ಎಂದು ಹೇಳಿದರು. ಅಕ್ರಮ ವಲಸಿಗರು ಹಾಗೂ ನುಸುಳುಕೋರರ ಮತಗಳ ಮೂಲಕ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿತ್ತು ಎಂಬ ಆರೋಪ ಮಾಡಿದ ಅವರು, ಎಸ್‌ಐಆರ್ ಪರಿಷ್ಕರಣೆ ಪ್ರಕ್ರಿಯೆ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಕೆಲಸವೂ ನಡೆಯುತ್ತಿದೆ. ಮತದಾರರಿಗೆ ತೊಂದರೆಯಾಗದAತೆ ಪ್ರಕ್ರಿಯೆ ನಡೆಸಲಾಗುತ್ತಿದೆ ಎಂದರು.
ಮತ್ತೋರ್ವ ಜಿಲ್ಲಾ ವಕ್ತಾರ ಶಾಂತೆಯAಡ ರವಿ ಕುಶಾಲಪ್ಪ ಮಾತನಾಡಿ, ಈ ಹಿಂದೆ ವೀರಾಜಪೇಟೆಯಲ್ಲಿ ಪ್ರತಿಕೃತಿ ದಹಿಸಿದ ಪ್ರಕರಣಕ್ಕೆ ಸಂಬAಧಿಸಿದAತೆ ಬಿಜೆಪಿ ಕಾರ್ಯಕರ್ತರ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಲಾಗಿತ್ತು. ಅದೇ ರೀತಿಯ ಘಟನೆ ಕಾಂಗ್ರೆಸ್‌ನಿAದ ನಡೆದಿದ್ದರೂ ಅವರ ವಿರುದ್ಧ ಏಕೆ ಕ್ರಮ ಕೈಗೊಂಡಿಲ್ಲ ಎಂದು ಪ್ರಶ್ನಿಸಿದರು.
ಎಸ್‌ಐಆರ್ ಪ್ರಕ್ರಿಯೆ ಸರಿಯಿಲ್ಲ ಎಂದು ಕೊಡಗಿಗೆ ಆಗಮಿಸಿದ್ದ ನಟ ಪ್ರಕಾಶ್ ರಾಜ್ ಅವರು ಸಮಾಜವನ್ನು ವಿಭಜಿಸುವ ರೀತಿಯಲ್ಲಿ ಮಾತನಾಡುತ್ತಿದ್ದಾರೆ. ಸಾಮರಸ್ಯಕ್ಕೆ ಧಕ್ಕೆ ತರುವ ಪ್ರಯತ್ನ ನಡೆಯುತ್ತಿದೆ ಎಂದು ದೂರಿದರು.
ಕೊಡಗಿನಲ್ಲಿ ವಾರ್ಷಿಕ ಸರಾಸರಿ ೬ ಸಾವಿರಕ್ಕೂ ಅಧಿಕ ಹೊಸ ವಾಹನಗಳು ತೆರಿಗೆ ಪಾವತಿಸುತ್ತಿದ್ದರೂ ಜಿಲ್ಲೆಯ ರಸ್ತೆಗಳ ದುಸ್ಥಿತಿ ಮಾತ್ರ ಬದಲಾಗಿಲ್ಲ. ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿದ್ದರೂ ಸೂಕ್ತ ಅನುದಾನ ದೊರೆತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಜಿಲ್ಲಾ ಬಿಜೆಪಿ ವಕ್ತಾರ ಬಿ.ಕೆ. ಅರುಣ್ ಕುಮಾರ್ ಮಾತನಾಡಿ, ರಾಜ್ಯ ಸರ್ಕಾರ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿದ್ದು, ಈ ಬಗ್ಗೆ ಜನರು ಪ್ರಶ್ನಿಸಬಾರದೆಂಬ ಉದ್ದೇಶದಿಂದ ಎಸ್‌ಐಆರ್ ವಿಷಯವನ್ನು ಮುನ್ನೆಲೆಗೆ ತರುತ್ತಿದೆ ಎಂದು ಆರೋಪಿಸಿದರು.
ಬಿಜೆಪಿ ಮಾಧ್ಯಮ ಪ್ರಮುಖ್ ಸಜಿಲ್ ಕೃಷ್ಣ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.