ಕೂಡಿಗೆ, ಅ. ೨: ಕೂಡಿಗೆ ಆಂಜೆಲಾ ವಿದ್ಯಾನಿಕೇತನ ಶಾಲೆಯ ವಿದ್ಯಾರ್ಥಿಗಳು ಪ್ರಸಕ್ತ ಸಾಲಿನ ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸಿ ತಾಲೂಕು, ಜಿಲ್ಲಾ ಹಾಗೂ ವಲಯ ಮಟ್ಟದಲ್ಲಿ ಗಮನಾರ್ಹ ಸಾಧನೆ ಮಾಡಿದ್ದಾರೆ. ಸಾಧನೆಗೈದ ವಿದ್ಯಾರ್ಥಿಗಳನ್ನು ಅಭಿನಂದಿಸಿ ಶಾಲಾ ಆವರಣದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು.

ಈ ಸಂದರ್ಭ ಮಾತನಾಡಿದ ಸಿಸ್ಟರ್ ಮೇರಿ ಮಚ್ಚಾಡೋ ಹಾಗೂ ಸಿಸ್ಟರ್ ಅನಿತಾ ಡಿಸೋಜಾ ಅವರು, ಕ್ರೀಡೆಯು ವಿದ್ಯಾರ್ಥಿಗಳಲ್ಲಿ ಶಿಸ್ತು, ಆತ್ಮವಿಶ್ವಾಸ, ತಂಡ ಭಾವನೆ ಮತ್ತು ನಾಯಕತ್ವ ಗುಣಗಳನ್ನು ಬೆಳೆಸುತ್ತದೆ ಎಂದು ತಿಳಿಸಿ, ಮುಂದಿನ ಹಂತಗಳಲ್ಲಿಯೂ ಉತ್ತಮ ಸಾಧನೆ ಮಾಡುವಂತೆ ಹಾರೈಸಿದರು.

ವಿದ್ಯಾರ್ಥಿಗಳ ಪರಿಶ್ರಮ, ದೈಹಿಕ ಶಿಕ್ಷಣ ಶಿಕ್ಷಕರ ಮಾರ್ಗದರ್ಶನ ಹಾಗೂ ಶಾಲೆಯ ಪ್ರೋತ್ಸಾಹದಿಂದ ಈ ಗಮನಾರ್ಹ ಕ್ರೀಡಾ ಸಾಧನೆ ಸಾಧ್ಯವಾಗಿದೆ. ಆಂಜೆಲಾ ವಿದ್ಯಾನಿಕೇತನದ ಕ್ರೀಡಾ ಪ್ರತಿಭೆಗಳು ಶಾಲೆಯ ಕೀರ್ತಿಯನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಲಿ ಎಂದರು. ವಿವಿಧ ವಿಭಾಗಗಳ ಕ್ರೀಡಾಕೂಟದಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ಮತ್ತು ಪ್ರಶಸ್ತಿ ಪತ್ರಗಳನ್ನು ವಿತರಿಸಲಾಯಿತು.