ಮಡಿಕೇರಿ, ಅ. ೨: ರಾಷ್ಟçಪಿತ ಮಹಾತ್ಮ ಗಾಂಧೀಜಿಯವರ ೧೫೭ನೇ ಜನ್ಮ ವರ್ಷಾಚರಣೆ ಪ್ರಯುಕ್ತ ಶಾಲಾ ಶಿಕ್ಷಣ, ಪದವಿ ಪೂರ್ವ ಶಿಕ್ಷಣ ಮತ್ತು ಕಾಲೇಜು ಶಿಕ್ಷಣ ಇಲಾಖೆಗಳ ಸಹಕಾರದಲ್ಲಿ ಬಾಪೂಜಿ ಪ್ರಬಂಧ ಸ್ಪರ್ಧೆಯು ಇತ್ತೀಚೆಗೆ ಏರ್ಪಡಿಸಲಾಗಿತ್ತು.

ಪ್ರೌಢಶಾಲಾ ವಿಭಾಗ, ಪದವಿ ಪೂರ್ವ ಶಿಕ್ಷಣ ವಿಭಾಗ ಮತ್ತು ಪದವಿ/ ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಅದರಂತೆ ಜಿಲ್ಲೆಯ ಪ್ರೌಢಶಾಲಾ ವಿಭಾಗದಲ್ಲಿ ಸುಮಾರು ೨೦೦ಕ್ಕೂ ಹೆಚ್ಚು, ಪದವಿ ಪೂರ್ವ ಕಾಲೇಜು ವಿಭಾಗದಲ್ಲಿ ೫೧ ವಿದ್ಯಾರ್ಥಿಗಳು, ಪದವಿ/ಸ್ನಾತಕೋತ್ತರ ವಿಭಾಗದಲ್ಲಿ ೨೫ ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರಬಂಧ ಸ್ಪರ್ಧೆ ಬರೆದಿದ್ದರು.

ಪ್ರೌಢಶಾಲಾ ವಿಭಾಗದಲ್ಲಿ ವೀರಾಜಪೇಟೆಯ ಸಂತ ಅನ್ನಮ್ಮ ಪ್ರೌಢ ಶಾಲೆಯ ೮ನೇ ತರಗತಿ ‘ಬಿ’ ವಿಭಾಗದ ಹರ್ಷಿತ ಕೆ.ಎಂ.(ಪ್ರಥಮ), ಮಡಿಕೇರಿ ತಾಲೂಕಿನ ಕಡಗದಾಳು ಗ್ರಾಮದ ಸರ್ಕಾರಿ ಪ್ರೌಢಶಾಲೆಯ ೧೦ನೇ ತರಗತಿಯ ರೇಷ್ಮಾ ಡಿ.(ದ್ವಿತೀಯ), ಮಡಿಕೇರಿ ತಾಲೂಕಿನ ಹಾಕತ್ತೂರು ಸರ್ಕಾರಿ ಪ್ರೌಢಶಾಲೆಯ ೧೦ನೇ ತರಗತಿಯ ಕುಬ್ರಾ ಎ.ಐ.(ತೃತೀಯ) ಸ್ಥಾನ ಪಡೆದಿದ್ದಾರೆ.

ಪದವಿಪೂರ್ವ ಕಾಲೇಜು ವಿಭಾಗದಲ್ಲಿ ಮಡಿಕೇರಿ ಸರ್ಕಾರಿ ಪದಪೂರ್ವ ಕಾಲೇಜಿನ ದ್ವಿತೀಯ ಪಿಯುಸಿಯ ಶ್ರಾವ್ಯ ಕೆ.ಪಿ.(ಪ್ರಥಮ), ವೀರಾಜಪೇಟೆ ತಾಲೂಕಿನ ಪೆರುಂಬಾಡಿ ಸಿಇಎ ಮಹಿಳಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ರೈಹಾನ ಡಿ.ಆರ್.(ದ್ವಿತೀಯ), ವೀರಾಜಪೇಟೆ ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿಯ ಚೈತನ್ಯ ಕೆ.ಎಂ.(ತೃತೀಯ) ಸ್ಥಾನ ಪಡೆದಿದ್ದಾರೆ.

ಪದವಿ/ ಸ್ನಾತಕೋತ್ತರ ವಿಭಾಗದಲ್ಲಿ ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಹುಧಾ ಪಜ್ಹಲಿ (ಪ್ರಥಮ), ವೀರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದ್ವಿತೀಯ ಬಿ.ಎ.(ಎಚ್‌ಇಪಿ) ನವೀನ್ ಎ.ಕೆ.(ದ್ವಿತೀಯ) ಮತ್ತು ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಸಂಧ್ಯಾ ಪಿ.ಎಂ.(ತೃತೀಯ) ಇವರು ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾಗಿದ್ದಾರೆ.