ವೀರಾಜಪೇಟೆ, ಅ. ೨ : ಸಮೀಪದ ಮಗ್ಗುಲ ಗ್ರಾಮದಲ್ಲಿರುವ ಲಿಟಲ್ ಸ್ಕಾಲರ್ಸ್ ಅಕಾಡೆಮಿ ವತಿಯಿಂದ ನಾಂಗಾಲ ಗ್ರಾಮದ ಕಲ್ತೋಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಟ್ರ್ಯಾಕ್ಸೂಟ್ಗಳನ್ನು ವಿತರಿಸಲಾಯಿತು. ಇದರೊಂದಿಗೆ ಕಲಿಕಾ ಹಾಗೂ ಆಟದ ಸಾಮಗ್ರಿಗಳನ್ನು, ಗಾಡ್ರೆಜ್ ಅನ್ನು ನೀಡಲಾಯಿತು.
ಲಿಟಲ್ ಸ್ಕಾಲರ್ಸ್ ಅಕಾಡೆಮಿಯ ಮುಖ್ಯಸ್ಥೆ ಹಾಗೂ ಉದ್ಯಮಿ ಪೂಜಾ ಸಜೇಶ್ ಅವರು ವಿದ್ಯಾರ್ಥಿಗಳಿಗೆ ಸಾಮಗ್ರಿಗಳನ್ನು ವಿತರಿಸಿ ಮಾತನಾಡಿ, ಶಾಲೆ ವತಿಯಿಂದ ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರಲಾಗುತ್ತಿದ್ದು, ಇದು ಶೈಕ್ಷಣಿಕ ಕ್ಷೇತ್ರಕ್ಕೆ ಸಂಬAಧಿಸಿದ ಕಾರ್ಯಕ್ರಮವಾಗಿದೆ ಎಂದರು. ವಿದ್ಯಾರ್ಥಿಗಳು ಕಲಿಕೆಯಲ್ಲಿ ಹಿಂದುಳಿಯದೆ ಉತ್ತಮ ಶಿಕ್ಷಣ ಪಡೆದು ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು. ಮಾನವೀಯತೆ ಹಾಗೂ ಸೇವಾ ಮನೋಭಾವ ಬೆಳೆಸಿಕೊಂಡು ಉತ್ತಮ ಪ್ರಜೆಗಳಾಗಿ ಬಾಳಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ನಾಂಗಾಲ ಗ್ರಾಮದ ಕಲ್ತೋಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಫ್ಯಾನ್ಸಿ ಲೋಬೊ, ಸಹ ಶಿಕ್ಷಕಿಯರು, ಲಿಟಲ್ ಸ್ಕಾಲರ್ಸ್ ಅಕಾಡೆಮಿಯ ಶಿಕ್ಷಕಿಯರು, ವಿದ್ಯಾರ್ಥಿಗಳು ಹಾಗೂ ಶಾಲಾ ಸಿಬ್ಬಂದಿ ಉಪಸ್ಥಿತರಿದ್ದರು.