ಕೂಡಿಗೆ, ಅ. ೨: ಕೂಡಿಗೆ ಯೂತ್ ಫ್ರೆಂಡ್ಸ್ ಅಸೋಸಿಯೇಷನ್ ವತಿಯಿಂದ ಡಿಸೆಂಬರ್ ೧೨ ಮತ್ತು ೧೩ ರಂದು ಅಂತರರಾಜ್ಯ ಮುಕ್ತ ವಾಲಿಬಾಲ್ ಪಂದ್ಯಾವಳಿ ನಡೆಸುವ ವಿಷಯಕ್ಕೆ ಸಂಬAಧಿಸಿದAತೆ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ನವರ ನೇತೃತ್ವದಲ್ಲಿ ಪೂರ್ವಭಾವಿ ಸಭೆಯು ಕೂಡಿಗೆ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು.
ಸಭೆಯನ್ನು ಉದ್ದೇಶಿಸಿ ಮಾತನಾಡಿದ ಶಾಸಕ ಡಾ.ಮಂತರ್ ಗೌಡ ಅವರು, ಎಲ್ಲಾ ಧರ್ಮಗಳನ್ನು ಒಂದಾಗಿಸುವ ಸಾಮರ್ಥ್ಯ ಕ್ರೀಡೆಗೆ ಇದೆ. ಗ್ರಾಮಾಂತರ ಪ್ರದೇಶಗಳಲ್ಲಿ ಸಹೋದರತ್ವ,ಮತ್ತು ಉತ್ತಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಲು ಕ್ರೀಡೆಯ ಮೂಲಕ ಒಗ್ಗಟ್ಟು ಮೂಡುತ್ತದೆ, ಇದರ ಮೂಲಕ ಯುವಕರಿಗೆ ಕ್ರೀಡೆ ಹಾಗೂ ಸಾಮಾಜಿಕ ಚಟುವಟಿಕೆಗಳಲ್ಲಿ ಭಾಗವಹಿಸಿ ಸಮಾಜಮುಖಿ ಕಾರ್ಯಗಳನ್ನು ಕೈಗೊಳ್ಳಲು ಇಂತಹ ಕ್ರೀಡಾಕೂಟದ ಮೂಲಕ ಸಾಧ್ಯವಾಗುವುದು. ಜಿಲ್ಲೆಯಲ್ಲಿ ಹಾಕಿ ಕ್ರೀಡಾಕೂಟವು ಎಷ್ಟು ಪ್ರಾಮುಖ್ಯತೆಯನ್ನು ಪಡೆದಿದೆಯೋ ಅದೇ ರೀತಿಯಲ್ಲಿ ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಕೂಡಿಗೆ ವಾಲಿಬಾಲ್ ಪಂದ್ಯಾವಳಿಯಲ್ಲಿ ರಾಜ್ಯ, ರಾಷ್ಟçದ ಮಟ್ಟದಲ್ಲಿ ಹೆಸರು ಗಳಿಸಿದೆ ಅದೇ ರೀತಿಯಲ್ಲಿ ದೊಡ್ಡ ಮಟ್ಟದ ಪಂದ್ಯಾವಳಿ ಆಯೋಜಿಸುತ್ತಿರುವ ಯೂತ್ ಫ್ರೆಂಡ್ಸ್ ಅಸೋಸಿಯೇಷನ್ ಸಮಿತಿಗೆ ಸಹಕಾರ ನೀಡುವುದಾಗಿ ತಿಳಿಸಿದರು.
ಕುಶಾಲನಗರ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್ ಮಾತನಾಡಿ, ಕ್ರೀಡೆಯಿಂದ ಸೌಹಾರ್ದ ಸಾಮರಸ್ಯ ಮೂಡುತ್ತದೆ ಗ್ರಾಮಾಂತರ ಪ್ರದೇಶಗಳಲ್ಲಿ ಯುವ ಸಂಘಟನೆಯ ಮುಖೇನ ಆದರ್ಶ ಸಮಾಜದ ಗುರಿಯನ್ನು ಸಾಧಿಸಲು ಸಹಕಾರಿಯಾಗುವುದು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಯೂತ್ ಫ್ರೆಂಡ್ಸ್ ಅಸೋಸಿಯೇಷನ್ ಅಧ್ಯಕ್ಷ ಕೆ.ಎ. ಪೀಟರ್, ಉಪಾಧ್ಯಕ್ಷ ಟಿ.ಪಿ.ಹಮೀದ್, ಕಾರ್ಯದರ್ಶಿ ಶಿವಕುಮಾರ್, ಖಜಾಂಚಿ ಸನ್ನಿ, ಗ್ರಾಮ ಪಂಚಾಯಿತಿ ಮಾಜಿ ಸದಸ್ಯರಾದ ಫಿಲೋಮಿನಾ, ರಾಜ್ಯ ಲ್ಯಾಂಪ್ ಮಹಾಮಂಡಳದ ಅಧ್ಯಕ್ಷ ಎಸ್. ಆರ್. ಅರುಣ್ ರಾವ್, ಜಿಲ್ಲಾ ಸಹಕಾರ ಯೂನಿಯನ್ ಬ್ಯಾಂಕ್ನ ನಿರ್ದೇಶಕ ಎಸ್. ಆರ್. ಸುನಿಲ್ ರಾವ್, ಸೇರಿದಂತೆ ಅಸೋಸಿಯೇಷನ್ ನೂರಾರು ಸದಸ್ಯರು ಹಾಗೂ ವಿವಿಧ ಘಟಕದ ಪದಾಧಿಕಾರಿಗಳು, ಗ್ರಾಮದ ಪ್ರಮುಖರು ಉಪಸ್ಥಿತರಿದ್ದರು.