ಮಡಿಕೇರಿ, ಅ. ೨: ಮೈಸೂರು - ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಒಡೆಯರ್ ತಾ. ೩ ರಂದು (ಇಂದು) ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಬೆಳಿಗ್ಗೆ ೧೧ ಗಂಟೆಗೆ ಪೊನ್ನಂಪೇಟೆ ಕೊಡವ ಸಮಾಜದಲ್ಲಿ ನಡೆಯುವ ಕೊಟ್ಟಂಗಡ ಕ್ರಿಕೆಟ್ ನಮ್ಮೆ ಲಾಂಛನ ಅನಾವರಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಮಧ್ಯಾಹ್ನ ೧ ಗಂಟೆಗೆ ಪಾರಾಣೆಯಲ್ಲಿ ನಡೆಯುವ ಅಂತರ ಗ್ರಾಮಾಂತರ ಕೈಲ್ ಮುಹೂರ್ತ ಕ್ರೀಡಾಕೂಟ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ.