ಮಡಿಕೇರಿ ಅ. ೨: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ, ರಾಜ್ಯಮಟ್ಟದ ವಿಶೇಷ ತನಿಖಾ ತಂಡದ ಮೂಲಕ ಸಮಗ್ರ ತನಿಖೆ ನಡೆಸಬೇಕೆಂದು ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಕೊಡಗು ಜಿಲ್ಲಾ ಸಮಿತಿ ತಾ. ೩ ರಂದು (ಇಂದು) ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಲಿದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಅಮೀನ್ ಮೊಹಿಸಿನ್ ತಿಳಿಸಿದ್ದಾರೆ.

ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕೊಡಗು ಜಿಲ್ಲೆಯ ಮಡಿಕೇರಿ ವಿಧಾನಸಭಾ ಕ್ಷೇತ್ರದ ಬ್ಯಾಡಗೊಟ್ಟ ಗ್ರಾಮದ ಬೂತ್ ಸಂಖ್ಯೆ ೨೧ರಲ್ಲಿ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಸಂಬAಧಪಟ್ಟವರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು.

ಅಲ್ಲದೆ, ಪ್ರಕರಣದ ಸಂಪೂರ್ಣ ತನಿಖೆಯನ್ನು ರಾಜ್ಯಮಟ್ಟದ ವಿಶೇಷ ತನಿಖಾ ತಂಡದ ಮೂಲಕ ನಡೆಸಬೇಕು ಎಂದು ಆಗ್ರಹಿಸಿ ನಗರದ ಇಂದಿರಾಗಾAಧಿ ವೃತ್ತದಲ್ಲಿ ಬೆಳಿಗ್ಗೆ ೧೧ ಗಂಟೆಗೆ ಪ್ರತಿಭಟನೆ ನಡೆಸುವುದಾಗಿ ತಿಳಿಸಿದ್ದಾರೆ.