ಮಡಿಕೇರಿ, ಅ. ೨: ಮಡಿಕೇರಿ ದಸರಾ ಜನೋತ್ಸವದಲ್ಲಿನ ಮೂರನೇ ವರ್ಷದ ಕಾಫಿ ದಸರಾ ಅಂಗವಾಗಿ ಕಾಫಿಯಿಂದ ತಯಾರಿಸಲಾದ ವೈವಿಧ್ಯಮಯ ಖಾದ್ಯಗಳ ಸ್ಪರ್ಧೆ ಆಯೋಜಿಸಲಾಗಿದೆ ಎಂದು ಕಾಫಿ ದಸರಾ ಸಂಚಾಲಕ ಅನಿಲ್ ಹೆಚ್.ಟಿ. ತಿಳಿಸಿದ್ದಾರೆ.

ಅಕ್ಟೋಬರ್ ೧೪ ರಂದು ಮಡಿಕೇರಿಯ ಗಾಂಧಿ ಮೈದಾನದ ಕಲಾಸಂಭ್ರಮ ಸಭಾಂಗಣದಲ್ಲಿ ಬೆಳಗ್ಗೆ ೧೦ ಗಂಟೆಗೆ ಕಾಫಿ ದಸರಾ ಅಂಗವಾಗಿ ಫ್ಲೇವರ್ಸ್ ಆಫ್ ಕಾಫಿ ಹೆಸರಿನ ಖಾದ್ಯ ಸ್ಪರ್ಧೆಗಳು ಆಯೋಜಿತವಾಗಿದೆ. ಕಾಫಿ ಫ್ಲೆವರ್ ಕೇಕ್, ವಿಭಾಗ, ಕಾಫಿ ಫ್ಲೆವರ್ ಕಪ್ ಕೇಕ್ ವಿಭಾಗ, ಕಾಫಿ ಫ್ಲೆವರ್ ಬ್ರೌನಿ ವಿಭಾಗ, ಕಾಫಿ ಫ್ಲೆವರ್ ಚಾಕೋಲೇಟ್, ಪುಡ್ಡಿಂಗ್ ವಿಭಾಗ, ಕಾಫಿ ಫ್ಲೆವರ್ ಪಾನೀಯ ವಿಭಾಗ, ಕಾಫಿ ಫ್ಲೇವರ್‌ನಲ್ಲಿ ಹೊಸ ಪ್ರಯತ್ನ ವಿಭಾಗಗಳಲ್ಲಿ ಸ್ಪರ್ಧೆ ಆಯೋಜಿತವಾಗಿದೆ. ಈ ಎಲ್ಲಾ ಸ್ಪರ್ಧೆಗಳಿಗ ಸ್ಪರ್ಧಿಗಳು ಅಕ್ಟೋಬರ್ ೧೦ ರೊಳಗಾಗಿ ಹೆಸರು ನೋಂದಾಯಿಸಲು ಸಂಪರ್ಕ ಸಂಖ್ಯೆ ಮೇಪಾಡಂಡ ಸವಿತಾ ಕೀರ್ತನ್ ೬೩೬೬ ೪೬೨೪೧೩