ಮೂರ್ನಾಡು, ಅ. ೨: ಇಲ್ಲಿನ ಹಿಂದೂ ಮಲಯಾಳಿ ಸಂಘದ ವತಿಯಿಂದ ಆಯೋಜಿಸಲಾದ ೧೮ನೇ ವರ್ಷದ ಓಣಂ ಹಬ್ಬವನ್ನು ವಿಜೃಂಭಣೆಯಿAದ ಆಚರಿಸಲಾಯಿತು.

ಮೂರ್ನಾಡು ಗೌಡ ಸಮಾಜದಲ್ಲಿ ಆಯೋಜಿಸಲಾದ ಓಣಂ ಹಬ್ಬಾಚರಣೆಯ ಸಮಾರಂಭವನ್ನು ಮುಖ್ಯ ಅತಿಥಿಗಳಾಗಿ ಶಾಸಕ ಮಂತರ್ ಗೌಡ ಆಗಮಿಸಿ, ಸಮಾರಂಭವನ್ನುದ್ದೇಶಿಸಿ ಮಾತನಾಡಿದ ಅವರು, ಓಣಂ ಹಬ್ಬ ಕೇವಲ ಕೇರಳ ರಾಜ್ಯದಲ್ಲಿ ಮಾತ್ರವಲ್ಲ. ರಾಷ್ಟçದಾದ್ಯಂತ ಎಲ್ಲೆಲ್ಲಿ ಮಲಯಾಳಿ ಹಿಂದೂ ಬಾಂಧವರು ಇದ್ದಾರೆ. ಆ ಭಾಗದಲ್ಲಿ ಓಣಂ ಹಬ್ಬ ಅತ್ಯಂತ ವಿಜೃಂಭಣೆಯಿAದ ಆಚರಿಸಲ್ಪಡುತ್ತದೆ. ಇಲ್ಲಿ ಜನಾಂಗದ ಒಗ್ಗಟ್ಟನ್ನು ಎತ್ತಿಹಿಡಿಯುವುದಲ್ಲದೆ, ತಮ್ಮ ಸಮಾಜದ ಆಚಾರ-ವಿಚಾರ, ಸಂಸ್ಕೃತಿಗಳನ್ನು ಬೆಳೆಸಿ ಉಳಿಸಿಕೊಂಡು ಹೋಗುವ ಕಾರ್ಯ ನಿರಂತರವಾಗಿ ನಡೆಯುತ್ತಿರುತ್ತದೆ. ಹಿಂದೂ ಮಲಯಾಳಿ ಸಂಘಗಳಿಗೆ ಬೇಕಾದ ಸೌಲಭ್ಯಗಳನ್ನು ಒದಗಿಸಿಕೊಡುವ ಭರವಸೆ ನೀಡಿದರು.

ಮುಖ್ಯ ಅತಿಥಿಯಾಗಿ ಆಗಮಿಸಿದ್ದ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೆ.ಜಿ. ಬೋಪಯ್ಯ ಸಮಾರಂಭವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಓಣಂ ಹಬ್ಬವು ಸಾಮಾಜಿಕ ಉತ್ಸವವಾಗಿ ಆಚರಣೆಗೊಳ್ಳುತ್ತಿದೆ. ಇದರಿಂದ ಸಮಾಜ ಬಾಂಧವರಲ್ಲಿ ಒಗ್ಗಟ್ಟು ಬೆಳೆಯತೊಡಗುತ್ತದೆ. ಹಿಂದೂಗಳು ತಮ್ಮ ಸಂಸ್ಕೃತಿಗಳನ್ನು ಚಾಚೂತಪ್ಪದೆ ಪಾಲಿಸಿದಾಗ ಮಾತ್ರ ಹಿಂದೂ ಸಮಾಜ ಗಟ್ಟಿಗೊಳ್ಳುತ್ತದೆ. ಹೀಗೆ ತಮ್ಮ ಆಚಾರ-ವಿಚಾರ ಪಾಲನೆಗಳಿಂದ ಸಮಾಜ ಒಳಿತು ಕಂಡುಕೊAಡಾಗ ದೇಶದ ಅಭಿವೃದ್ಧಿ ಕಾಣಬಹುದು ಎಂದ ಅವರು, ನಮ್ಮ ಶಿಸ್ತುಬದ್ದ ಜೀವನ ಬೇರೆಯವರಿಗೆ ಪ್ರೇರಣೆ ನೀಡುವಂತಾಗಬೇಕು ಎಂದು ಹೇಳಿದರು.

ಹಿಂದೂ ಮಲಯಾಳಿ ಸಂಘದ ಜಿಲ್ಲಾ ಸಮಿತಿಯ ಅಧ್ಯಕ್ಷ ವಿ.ಎಂ. ವಿಜಯನ್ ಹಾಗೂ ಹಿಂದೂ ಮಲಯಾಳಿ ಸಂಘದ ಜಿಲ್ಲಾ ಸಮಿತಿ ಸಲಹೆಗಾರ ವಾಸುದೇವನ್ ಮತ್ತು ಹಿಂದೂ ಮಲಯಾಳಿ ಸಂಘದ ಜಿಲ್ಲಾ ಸಮಿತಿಯ ಸ್ಥಾಪಕಾಧ್ಯಕ್ಷ ಕೆ.ಎಸ್. ರಮೇಶ್ ಸಭೆಯನ್ನುದ್ದೇಶಿಸಿ ಮಾತನಾಡಿದರು. ವೇದಿಕೆಯಲ್ಲಿ ಹಿಂದೂ ಮಲಯಾಳಿ ಸಂಘದ ಜಿಲ್ಲಾ ಸಮಿತಿಯ ಉಪಾಧ್ಯಕ್ಷ ಟಿ.ಕೆ. ಸುಧೀರ್, ಜಿಲ್ಲಾ ಸಮಿತಿಯ ಮುಖ್ಯ ಕಾರ್ಯದರ್ಶಿ ಎನ್.ವಿ. ಉನ್ನಿಕೃಷ್ಣನ್, ಕುಶಾಲನಗರದ ಕೇರಳ ಸಮಾಜದ ಅಧ್ಯಕ್ಷ ಪಿ. ರವೀಂದ್ರನ್, ಎಐಸಿಸಿ ಬ್ಲಾಕ್‌ಅಧ್ಯಕ್ಷ ಹೆಚ್.ಎ. ಹಂಸ ಹೊದವಾಡ, ಜಿಲ್ಲಾ ಸಮಿತಿಯ ಸದಸ್ಯರಾದ ಆರ್. ಗಿರೀಶ್, ಕೆ.ವಿ. ಸುಬ್ರಮಣಿ ಮತ್ತು ಎಂ.ಆರ್. ರತಿಕೇಶನ್, ವೀರಾಜಪೇಟೆಯ ಹಿಂದೂ ಮಲಯಾಳಿ ಅಸೋಯೇಷನ್‌ನ ಅಧ್ಯಕ್ಷ ವಿನುಪ್, ವೀರಾಪೇಟೆಯ ಶ್ರೀ ಮುತ್ತಪ್ಪ ಮಲಯಾಳಿ ಸಂಘದ ಅಧ್ಯಕ್ಷ ಸುಮೇಶ್, ಅಮ್ಮತ್ತಿ-ಒಂಟಿಯAಗಡಿ ಹಿಂದೂ ಮಲಯಾಳಿ ಸಂಘದ ಅಧ್ಯಕ್ಷ ಪುಷ್ಕರನ್. ಕೆ.ಸಿ, ಸುಂಟಿಕೊಪ್ಪದ ಹಿಂದೂ ಮಲಯಾಳಿ ಸಮಾಜದ ಅಧ್ಯಕ್ಷ ವಾಸುದೇವ್. ಕೆ.ಕೆ, ಹಿಂದೂ ಮಲಯಾಳಿ ಸಮಾಜದ ಮಹಿಳಾ ಸಮಿತಿಯ ಅಧ್ಯಕ್ಷೆ ಶೀಬಾ ಪೃಥ್ವಿನಾಥ್, ಗೋಣಿಕೊಪ್ಪ ಹಿಂದೂ ಮಲಯಾಳಿ ಸಂಘದ ಅಧ್ಯಕ್ಷ ಪ್ರಶಾಂತ್ ಕುಮಾರ್ ಕೆ.ಪಿ., ಮೂರ್ನಾಡು ಹಿಂದೂ ಮಲಯಾಳಿ ಸಂಘದ ಕಾರ್ಯದರ್ಶಿ ಟಿ.ಕೆ ಸಂತೋಷ್, ಖಜಾಂಚಿ ಎನ್.ಕೆ. ಮುರಳಿ ಮತ್ತು ಹಿಂದೂ ಮಲಯಾಳಿ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಮೂರ್ನಾಡು ಹಿಂದೂ ಮಲಯಾಳಿ ಸಂಘದ ಅಧ್ಯಕ್ಷ ಕೆ. ಬಾಬು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಈ ಸಂದರ್ಭದಲ್ಲಿ ೧೦ನೇ ತರಗತಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಹೆಚ್ಚು ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳನ್ನು ಸಮ್ಮಾನಿಸಲಾಯಿತು. ರಂಗೋಲಿ (ಪೂಕಳಂ) ಸ್ಪರ್ಧೆಯಲ್ಲಿ ಹಾಕತ್ತೂರುವಿನ ಇಷ್ಟ ರಾಜೇಶ್ (ಪ್ರಥಮ), ಕೋರಂಬಾಣೆಯ ಬಿಂದು ಕಾರ್ತಿಕ್ (ದ್ವಿತೀಯ) ಹಾಗೂ ಮೂರ್ನಾಡುವಿನ ನಿಶಾ ಕಿಶೋರ್ (ತೃತೀಯ) ಸ್ಥಾನ ಪಡೆದು ನಗದು ಬಹುಮಾನ ಮತ್ತು ಟ್ರೋಫಿಗಳನ್ನು ತಮ್ಮದಾಗಿಸಿಕೊಂಡರು.

ಸಮಾರAಭಕ್ಕೂ ಮುಂಚೆ ಮೂರ್ನಾಡಿನ ಮುಖ್ಯ ಬೀದಿಯಲ್ಲಿ ನಡೆದ ಮೆರವಣಿಗೆಯಲ್ಲಿ ಕೇರಳದ ಸಾಂಪ್ರದಾಯಿಕ ಉಡುಪಿನಲ್ಲಿ ಮಹಿಳೆಯರು, ಮಕ್ಕಳು ಮತ್ತು ಮಹನೀಯರು, ಚಂಡೆ ಮೇಳದವರು, ಮಾವೇಲಿ ಮತ್ತು ಕೃಷ್ಣನ ಪಾತ್ರಧಾರಿಗಳು ಪಾಲ್ಗೊಂಡು ನೋಡುಗರ ಗಮನ ಸೆಳೆದರು. ಹಿಂದೂ ಮಲಯಾಳಿ ಸಂಘದ ಜಿಲ್ಲಾ ಸಮಿತಿಯ ಉಪಾಧ್ಯಕ್ಷ ಟಿ.ಕೆ. ಸುಧೀರ್ ಸ್ವಾಗತಿಸಿದರು. ಮೂರ್ನಾಡು ಹಿಂದೂ ಮಲಯಾಳಿ ಸಂಘದ ಕಾರ್ಯದರ್ಶಿ ಟಿ.ಕೆ. ಸಂತೋಷ್ ಕುಮಾರ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಓಣಂ ಸಧ್ಯ ಭೋಜನದ ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. - ಟಿ.ಸಿ. ನಾಗರಾಜ್.