ಗೋಣಿಕೊಪ್ಪಲು, ಅ. ೨: ಹಲವಾರು ಸಮಯದಿಂದ ರಸ್ತೆ ಹಾಳಾಗಿ ವಾಹನ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾದ ಹಿನ್ನೆಲೆಯಲ್ಲಿ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎ.ಎಸ್.ಪೊನ್ನಣ್ಣ ಅವರು ಗೋಣಿಕೊಪ್ಪ ಬೈಪಾಸ್ ರಸ್ತೆಯ ಕಾಂಕ್ರಿಟ್ ರಸ್ತೆ ಅಭಿವೃದ್ದಿಗೆ ೪೮ ಲಕ್ಷ ಅನುದಾನವನ್ನು ಒದಗಿಸಿದ್ದು ನೂತನ ಕಾಂಕ್ರಿಟ್ ರಸ್ತೆಯನ್ನು ಸಾರ್ವಜನಿಕರ ಸೇವೆಗೆ ಲೋಕಾರ್ಪಣೆಗೊಳಿಸಿದರು.

೨೫೬ ಮೀ. ಉದ್ದದ ಗೋಣಿಕೊಪ್ಪ ಬೈಪಾಸ್ ರಸ್ತೆಯ ಕಾಮಗಾರಿ ಕಳೆದ ಒಂದು ತಿಂಗಳಿನಿAದ ಆರಂಭಗೊAಡಿದ್ದು ಇದೀಗ ರಸ್ತೆಯು ಸಾರ್ವಜನಿಕರ ಅನುಕೂಲಕ್ಕೆ ಲಭ್ಯವಾಗಿದೆ. ಗುಣಮಟ್ಟದ ರಸ್ತೆ ಕಾಮಗಾರಿಯನ್ನು ನಿರ್ವಹಿಸಿದ ಗುತ್ತಿಗೆದಾರರ ಕೆಲಸಕ್ಕೆ ಶಾಸಕ ಪೊನ್ನಣ್ಣ ಶ್ಲಾಘನೆ ವ್ಯಕ್ತಪಡಿಸಿದರು. ಸಾರ್ವಜನಿಕರು ರಸ್ತೆಯ ಪ್ರಯೋಜನ ಪಡೆಯುವಂತೆ ತಿಳಿಸಿದರು.

ರಸ್ತೆ ಉದ್ಘಾಟನಾ ವೇಳೆ ಕೊಡಗು ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಅಧ್ಯಕ್ಷÀ ತೀತಿರ ಧರ್ಮಜ ಉತ್ತಪ್ಪ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎ.ಜೆ.ಬಾಬು, ಗೋಣಿಕೊಪ್ಪಲು ನಗರ ಕಾಂಗ್ರೆಸ್ ಅಧ್ಯಕ್ಷ ಪ್ರಮೋದ್ ಗಣಪತಿ, ನಗರ ಕಾಂಗ್ರೆಸ್ ಉಪಾಧ್ಯಕ್ಷ ನಾಯಂದಿರ ಶಿವಾಜಿ, ಗೋಣಿಕೊಪ್ಪಲು ಹಿರಿಯ ಕಾಂಗ್ರೆಸ್ ಮುಖಂಡರು, ಪೊನ್ನಂಪೇಟೆ ತಾಲೂಕು ಕೆಡಿಪಿ ಸದಸ್ಯÀ ಕೊಳ್ಳಿಮಾಡ ಅಜಿತ್ ಅಯ್ಯಪ್ಪ, ಗೋಣಿಕೊಪ್ಪಲು ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಬಿ.ಎನ್. ಪ್ರಕಾಶ್, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಸೇವಾದಳ ಘಟಕ ಅಧ್ಯಕ್ಷ ಪಿ.ಜಿ. ರಾಜಶೇಖರ್, ಗೋಣಿಕೊಪ್ಪಲು ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಸುನೀಲ್ ಮಾದಪ್ಪ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಮೂಕಳೇರ ಕುಶಾಲಪ್ಪ, ಪೊನ್ನಂಪೇಟೆ ತಾಲೂಕು ಕೆಡಿಪಿ ಸದಸ್ಯ ಅಬ್ದುಲ್ ಸಮ್ಮದ್, ಕೊಡಗು ಜಿಲ್ಲಾ ಗ್ಯಾರಂಟಿ ಸಮಿತಿಯ ಸದಸ್ಯೆ ನೂರೇರ ಧನ್ಯ ರವೀಂದ್ರ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕ ನಿಕಟಪೂರ್ವ ಅಧ್ಯಕ್ಷೆ ಕೊಳೇರ ಭಾರತಿ, ಗೋಣಿಕೊಪ್ಪಲು ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ಎಂ.ಮAಜುಳಾ, ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ಮಾಜಿ ಸದಸ್ಯೆ ರಸೀಕಾ ಅಶ್ವತ್, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕ ಅಧ್ಯಕ್ಷೆ ಮೂಕಳೇರ ಆಶಾ ಪೂಣಚ್ಚ, ಗೋಣಿಕೊಪ್ಪಲು ಚೆಸ್ಕಾಂ ಸಲಹಾ ಸಮಿತಿ ಮಾಜಿ ಸದಸ್ಯ ನಾರಾಯಣ ಸ್ವಾಮಿ ನಾಯ್ಡು, ವಿ.ಟಿ. ವಾಸು, ತಾಲೂಕು ಯುವ ಕಾಂಗ್ರೆಸ್‌ನ ಅಂಕಿತ ಪೊನ್ನಪ್ಪ ಅಶ್ರಫ್, ವಕೀಲರಾದ ಶಮೀರ್ ಹಾಗೂ ಸಾರ್ವಜನಿಕ ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು.