ಕೂಡಿಗೆ, ಅ. ೩: ಕುಶಾಲನಗರ ತಾಲೂಕು ವಿಶ್ವಕರ್ಮ ಸಮಾಜದ ವತಿಯಿಂದ ೨೩ನೇ ವರ್ಷದ ಶ್ರೀ ವಿಶ್ವಕರ್ಮ ಪೂಜಾ ಮಹೋತ್ಸವ, ದುರ್ಗಾ ನಮಸ್ಕಾರ ಪೂಜೆ, ಪ್ರತಿಭಾ ಪುರಸ್ಕಾರ ಮತ್ತು ವಾರ್ಷಿಕ ಮಹಾಸಭೆ ತಾ. ೪ ರಂದು (ಇಂದು) ಕುಶಾಲನಗರ ಗಾಯತ್ರಿ ಕಲ್ಯಾಣ ಮಂಟಪದ ಸಭಾಂಗಣದಲ್ಲಿ ನಡೆಯಲಿದೆ.

ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಅರೆಮಾದನಹಳ್ಳಿ ಮಠದ ಪೀಠಾಧಿಪತಿಗಳಾದ ಶ್ರೀ ಅನಂತ ಶ್ರೀ ವಿಭೂಷಿತ ಶಿವ ಸುಜ್ಞಾನತೀರ್ಥ ಮಹಾಸ್ವಾಮಿ ವಹಿಸಲಿದ್ದು, ಕಾರ್ಯಕ್ರಮದ ಉದ್ಘಾಟನೆಯನ್ನು ಮಡಿಕೇರಿ ಶಾಸಕ ಡಾ. ಮಂತರ್ ಗೌಡ ನೆರವೇರಿಸಲಿದ್ದಾರೆ. ವಿಶೇಷ ಅಹ್ವಾನಿತರಾಗಿ ರಾಜ್ಯ ವಿಶ್ವಕರ್ಮ ಸಮುದಾಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಸುಜ್ಞಾನ ಮೂರ್ತಿ ಆಗಮಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಶಾಲನಗರ ತಾಲೂಕು ವಿಶ್ವಕರ್ಮ ಸಮಾಜದ ಅಧ್ಯಕ್ಷ ಸಿ. ದುರ್ಗೇಶ್ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್, ಯೋಜನಾ ಪ್ರಾಧಿಕಾರದ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ತಹಶೀಲ್ದಾರ ಕೆ.ಕೆ. ಕೃಷ್ಣಮೂರ್ತಿ, ರಾಜ್ಯ ವಿಶ್ವಕರ್ಮ ಸಮಾಜದ ನಿರ್ದೇಶಕ ಕೆ.ಎಸ್. ಚಂದ್ರಶೇಖರ್ ಸೇರಿದಂತೆ ನಿಕಟಪೂರ್ವ ಅಧ್ಯಕ್ಷರು, ವಿವಿಧ ಘಟಕದ ಅಧ್ಯಕ್ಷರು, ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.