ಕೂಡಿಗೆ: ರಾಷ್ಟçಪಿತ ಮಹಾತ್ಮ ಗಾಂಧೀಜಿ ಜಯಂತಿ ಹಿನ್ನೆಲೆಯಲ್ಲಿ ಕುಶಾಲನಗರದಲ್ಲಿ ಬಿಜೆಪಿ ಮಹಾಶಕ್ತಿ ಕೇಂದ್ರದ ವತಿಯಿಂದ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಲಾಗಿತ್ತು.

ಕೊಡಗು-ಮೈಸೂರು ಗಡಿ ಕಾವೇರಿ ಸೇತುವೆ ಬಳಿಯಿಂದ ಆರಂಭಗೊAಡ ಸ್ವಚ್ಚತಾ ಅಭಿಯಾನದ ಅಂಗವಾಗಿ ಕಾರ್ಯಕರ್ತರು ಬೀದಿ ಬದಿಯಲ್ಲಿ ಹರಡಿದ್ದ ಕಸ ತ್ಯಾಜ್ಯ ಸಂಗ್ರಹಿಸಿ ವಿಲೇವಾರಿಗೊಳಿಸಿದರು. ಸ್ವಚ್ಚತಾ ಆಂದೋಲನದಲ್ಲಿ ಪಾಲ್ಗೊಂಡಿದ್ದ ಮಾಜಿ ಶಾಸಕ ಅಪ್ಪಚ್ಚುರಂಜನ್ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರು ೨೫ ವರ್ಷಗಳ ಕಾಲ ಮುಖ್ಯಮಂತ್ರಿ ಮತ್ತು ಪ್ರಧಾನಮಂತ್ರಿಯಾಗಿ ದೇಶಕ್ಕೆ ಸೇವೆ ಸಲ್ಲಿಸುತ್ತಿದ್ದಾರೆ. ಅವರ ಹುಟ್ಟುಹಬ್ಬ ಮತ್ತು ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಚತಾ ಆಂದೋಲನ ಮೂಲಕ ಜಾಗೃತಿ ಕಾರ್ಯಕ್ರಮ ಪ್ರತಿ ಗ್ರಾಪಂ ವ್ಯಾಪ್ತಿಯಲ್ಲಿ ಹಮ್ಮಿಕೊಳ್ಳಲಾಗಿದೆ. ನಾಗರಿಕರು ಕಸವನ್ನು ಬೀದಿಯಲ್ಲಿ ಬಿಸಾಡಬಾರದು. ನಮ್ಮ ಪರಿಸರವನ್ನು ಸ್ವಚ್ಚವಾಗಿಟ್ಟುಕೊಳ್ಳುವುದು ನಮ್ಮ ಜವಾಬ್ದಾರಿ ಎಂದರು.

ಈ ಸಂದರ್ಭ ನಗರ ಬಿಜೆಪಿ ಅಧ್ಯಕ್ಷ ಎಂ.ಎA. ಚರಣ್, ಪ್ರಧಾನ ಕಾರ್ಯದರ್ಶಿ ಮಧುಸೂದನ್, ಪ್ರಮುಖರಾದ ಗಣಿಪ್ರಸಾದ್, ಜೈವರ್ಧನ್, ಬೋಸ್ ಮೊಣ್ಣಪ್ಪ, ನಾರಾಯಣ, ಪ್ರಭಾಕರ್, ಗಣಪತಿ, ವೈಶಾಖ್, ಪ್ರವೀಣ್, ಸುಮನ್, ಸಚಿನ್, ಶಿವರಾಜ್, ಗೀತಾ, ಅನಿತಾ, ಮತ್ತಿತರರು ಉಪಸ್ಥಿತರಿದ್ದರು.