ಗೋಣಿಕೊಪ್ಪಲು, ಅ.೩; ಗಾಂಧಿ ಜಯಂತಿ ಅಂಗವಾಗಿ ಗೋಣಿಕೊಪ್ಪದ ಸ್ವಾತಂತ್ರ‍್ಯ ಹೋರಾಟಗಾರ ಕೊಳ್ಳಿಮಾಡ ಕರುಂಬಯ್ಯ ಬಸ್ ನಿಲ್ದಾಣದಲ್ಲಿರುವ ಸಂವಿದಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಹಾಗು ಕೊಡಗಿನ ಗಾಂಧಿ ಪಂದ್ಯAಡ ಬೆಳ್ಯಪ್ಪ ಪ್ರತಿಮೆಗೆ ಯುನೈಟೆಡ್ ಕೊಡವ ಆರ್ಗನೈಸೇಷನ್ (ಯುಕೊ) ವತಿಯಿಂದ ಗೌರವ ಸಲ್ಲಿಸಲಾಯಿತು.
ಯುಕೊ ಅಧ್ಯಕ್ಷ ಕೊಕ್ಕಲೆಮಾಡ ಮಂಜು ಚಿಣ್ಣಪ್ಪ ಅಂಬೇಡ್ಕರ್ ಪ್ರತಿಮೆಗೆ ಹಾಗೂ ಪಂದ್ಯAಡ ಬೆಳ್ಯಪ್ಪ ಅವರ ಮೊಮ್ಮಗಳು ಬೊಮ್ಮಂಡ ಸವೇರಾ ಚಂಗಪ್ಪ ಪಂದ್ಯAಡ ಬೆಳ್ಯಪ್ಪರ ಪ್ರತಿಮೆಗೆ ಮಾಲಾರ್ಪಣೆ ಮಾಡುವುದರೊಂದಿಗೆ ವಿಶೇಷ ನಮನ ಸಲ್ಲಿಸಲಾಯಿತು.
ಈ ಸಂದರ್ಭ ಮಾತನಾಡಿದ ಯುಕೊ ಅಧ್ಯಕ್ಷ ಕೊಕ್ಕಲೆಮಾಡ ಮಂಜು ಚಿಣ್ಣಪ್ಪ, ದೇಶದ ಸ್ವಾತಂತ್ರö್ಯ ಹೋರಾಟದಲ್ಲಿ ಕೊಡಗಿನ ಅಧ್ಯಾಯದಲ್ಲಿ ಪಂದ್ಯAಡ ಬೆಳ್ಯಪ್ಪ ಹಾÀಗೂಸೀತಮ್ಮ ಬೆಳ್ಯಪ್ಪ ಅವರ ಪಾತ್ರ ಅನನ್ಯ, ಯುಕೊ ಸಂಘಟನೆಯಿAದ “ನೆಪ್ಪುರ ನಳತ್ ಮಾಂಜತ ಮೊಟ್ಟ್” ಎಂಬ ಪರಿಕಲ್ಪನೆಯಲ್ಲಿ ಕೊಡಗಿನ ಸ್ವಾತಂತ್ರ‍್ಯ ಹೋರಾಟಗಾರರನ್ನು ನಿರಂತರವಾಗಿ ಸ್ಮರಿಸುವ ಕೆಲಸ ಮಾಡಲಾಗುತ್ತಿದೆ ಎಂದರು.
ಕೊಡಗಿನ ಸ್ವಾತಂತ್ರ‍್ಯ ಹೋರಾಟಗಾರರ ಸ್ಮರಣೆ ಪ್ರತಿಯೊಂದು ಗ್ರಾಮ ಪಂಚಾಯ್ತಿ ಮಟ್ಟದಲ್ಲಿ ನಡೆಯಬೇಕು. ರಾಜ್ಯ ಹಾಗೂ ರಾಷ್ಟçಮಟ್ಟದಲ್ಲಿ ಮಾನ್ಯತೆ ಸಿಗುವಂತಾಗಬೇಕು ಈ ನಿಟ್ಟಿನಲ್ಲಿ ಕೊಡಗಿನ ಚುನಾಯಿತ ಜನಪ್ರತಿನಿಧಿಗಳು ಪ್ರಯತ್ನಿಸಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಯುಕೊ ಸದಸ್ಯರಾದ ಕಳ್ಳಿಚಂಡ ರಾಬಿನ್ ಸುಬ್ಬಯ್ಯ, ಚೆಪ್ಪುಡಿರ ಸುಜು ಕರುಂಬಯ್ಯ, ಪ್ರತಿಮಾ ಕರುಂಬಯ್ಯ. ನೆಲ್ಲಮಕ್ಕಡ ಜಫ್ರಿ ಮಾದಯ್ಯ, ಅಜ್ಜಿನಿಕಂಡ ತಿಮ್ಮಯ್ಯ, ಕಳ್ಳಿಚಂಡ ದೀನ ಉತ್ತಪ್ಪ ಹಾಗೂ ಇತರರು ಹಾಜರಿದ್ದರು.