ಮಡಿಕೇರಿ: ಈ ಜಗತ್ತು ಕಂಡ ಮಹಾನ್ ಮಾನವತಾವಾದಿ ಹಾಗೂ ಶ್ರೇಷ್ಠ ವ್ಯಕ್ತಿ ಮಹಾತ್ಮ ಗಾಂಧಿ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾದ ಟಿ.ಪಿ.ರಮೇಶ್ ಅವರು ಅಭಿಮತ ವ್ಯಕ್ತಪಡಿಸಿದ್ದಾರೆ.
ಕೊಡಗು ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ಹಾಗೂ ಕಾಂಗ್ರೆಸ್ ಪ್ರಚಾರ ಸಮಿತಿ ಆಯೋಜಿಸಿದ್ದ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತಿç ಅವರ ಜನ್ಮ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ರಮೇಶ್ ಅವರು, ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತಿç ಅವರ ಜೀವನದ ಪ್ರಮುಖ ಘಟ್ಟಗಳನ್ನು ವಿವರಿಸಿದರು.
ಗಾಂಧೀಜಿಯವರು ಕೊಡಗಿಗೆ ಬಂದ ಘಟನೆಗಳನ್ನು ವಿವರಿಸಿದರು. ಜೈ ಜವಾನ್ ಮತ್ತು ಜೈ ಕಿಸಾನ್ ಎಂದು ಘೋಷಣೆಗಳನ್ನು ನೀಡಿ ದೇಶದ ಬಲವರ್ಧನೆಗೆ ಸೈನಿಕ ಮತ್ತು ರೈತ ಅನಿವಾರ್ಯ ಎಂದು ಬಲವಾಗಿ ಪ್ರತಿಪಾದಿಸಿದ ಮಾಜಿ ಪ್ರಧಾನಿ ಲಾಲ್ ಬಹಾದ್ದೂರ್ ಶಾಸ್ತಿç ಅವರು ತಮ್ಮ ನೈತಿಕತೆಯ ಮೂಲಕ ಇಂದಿನ ಪೀಳಿಗೆಯ ಎಲ್ಲಾ ರಾಜಕಾರಣಿಗಳಿಗೆ ಮಾದರಿಯಾಗಿದ್ದಾರೆ ಎಂದು ಹೇಳಿದರು.
ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷರಾದ ತೆನ್ನಿರ ಮೈನಾ ರವರು ಪ್ರಾಸ್ತಾವಿಕವಾಗಿ ಮಾತನಾಡಿ, ಮಹಾತ್ಮ ಗಾಂಧಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತಿç ಅವರು ದೇಶಕ್ಕೆ ನೀಡಿದ ಕೊಡುಗೆಗಳು ಅವರ ನೆನಪನ್ನು ಸದಾ ಕಾಲ ಜೀವಂತವಾಗಿಸಿದೆ ಎಂದು ಹೇಳಿದರು.
ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತಿç ಅವರ ಚಿತ್ರಪಟಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಮಹಾನ್ ಚೇತನಕ್ಕೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಗೌರವ ಸಮರ್ಪಣೆ ಮಾಡಿದರು.
ಜಿಲ್ಲಾ ಕಾಂಗ್ರೆಸ್ ಗೌರವ ಕಾರ್ಯದರ್ಶಿ ವಿ.ಪಿ. ಸುರೇಶ್, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷರಾದ ಇಸ್ಮಾಯಿಲ್, ಡಿ.ಸಿ.ಸಿ ಸದಸ್ಯರಾದ ಅಬ್ದುಲ್ ರಜಾಕ್, ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಕವನ್ ಕೊತ್ತೋಳಿ, ಪ್ರಚಾರ ಸಮಿತಿ ಬ್ಲಾಕ್ ಅಧ್ಯಕ್ಷರಾದ ವಿ.ಜಿ. ಮೋಹನ್, ಅಲ್ಪಸಂಖ್ಯಾತ ಘಟಕದ ಬ್ಲಾಕ್ ಅಧ್ಯಕ್ಷರಾದ ಕೆ.ಜಿ. ಪೀಟರ್, ಮಹಿಳಾ ನಗರಾಧ್ಯಕ್ಷರಾದ ಶಶಿ, ಪ್ರಧಾನ ಕಾರ್ಯದರ್ಶಿ ಕೋಚನ ಚೇತನ್, ನಗರ ಯುವ ಘಟಕದ ಅಧ್ಯಕ್ಷರಾದ ಅರ್ಜುನ್ ಪ್ರಮುಖರಾದ ಜಿ.ಸಿ. ಜಗದೀಶ್, ಫ್ಯಾನ್ಸಿ ಪಾರ್ವತಿ, ರಿಯಾಸುದ್ದೀನ್, ಮುನೀರ್ ಮಾಚಾರ್, ವಸಂತ್‌ಭಟ್, ಬೊಳ್ಳಿಯಂಡ ಗಣೇಶ್, ಮೀನಾಜ್ ಪ್ರವೀಣ್, ವೀಣಾಕ್ಷಿ, ಲೀಲಾ ಶೇಷಮ್ಮ, ಶಾಹಿದ್ ಬಾದ್‌ಶಾ, ಮಮ್ತಾಜ್ ಬೇಗಂ, ಬಂಗೇರ, ಹರಿಣಾಕ್ಷಿ, ವಿಮಲ, ಪ್ರೇಮಾ ನಿಂಗಪ್ಪ, ತಾಜುನ್ನೀಸಾ, ಧನಲಕ್ಷಿö್ಮ ಪೊನ್ನಕ್ಕ, ಹಬೀಬ್, ಸುನಂದ, ಆದಂ, ಮಹೇಶ್, ಸಾಹುಲ್, ಪ್ರತಾಪ್, ಕಿಶನ್, ಅಭಿಲಾಶ್, ರಾಣಿ, ಉಷಾ, ರಾಜು, ವಜೀರ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.