ಪೊನ್ನಂಪೇಟೆ: ರಾಷ್ಟçಪಿತ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತಿçÃಜಿ ಅವರ ಆದರ್ಶಗಳನ್ನು ಪಾಲನೆ ಮಾಡುವ ಮೂಲಕ ಭ್ರಷ್ಟಾಚಾರ ಮುಕ್ತ ಹಾಗೂ ಸದೃಢ ಭಾರತ ನಿರ್ಮಾಣ ಕಾರ್ಯದಲ್ಲಿ ಎಲ್ಲರೂ ಕೈಜೋಡಿಸಬೇಕು ಎಂದು ಕಾವೇರಿ ಕಾಲೇಜು ಪ್ರಾಂಶುಪಾಲ ಡಾ. ಎಂ.ಬಿ. ಕಾವೇರಿಯಪ್ಪ ಹೇಳಿದರು.
ಗೋಣಿಕೊಪ್ಪಲಿನ ಕಾವೇರಿ ಕಾಲೇಜಿನಲ್ಲಿ ನಡೆದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಅತ್ಯಂತ ಸರಳ ಜೀವನಕ್ಕೆ ನಾಂದಿ ಹಾಡಿದವರು ಮಹಾತ್ಮ ಗಾಂಧೀಜಿಯವರು. ಅವರ ಆದರ್ಶ ಜೀವನ ಇಂದಿನ ಯುವ ಜನಾಂಗಕ್ಕೆ ದಾರಿದೀಪವಾಗಿದೆ. ಇಂದಿನ ಜಾಗತೀಕರಣದ ದಿನಮಾನಗಳಲ್ಲಿ ಮಹಾತ್ಮ ಗಾಂಧೀಜಿಯವರ ಆದರ್ಶಗಳು ಹಾಗೂ ಅವರು ಹಾಕಿಕೊಟ್ಟ ಮೌಲ್ಯಗಳು ಅಗತ್ಯವಾಗಿವೆ. ಸ್ವಚ್ಛತೆಯ ಬಗ್ಗೆ ಎಲ್ಲರಲ್ಲೂ ಅರಿವು ಮೂಡಿಸುವಲ್ಲಿ ಅವರ ಪಾತ್ರ ಬಹು ಮುಖ್ಯವಾಗಿದೆ ಎಂದರು.
ಕಾವೇರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರೊ. ಎಸ್.ಎಸ್. ಮಾದಯ್ಯ ಅವರು ಮಾತನಾಡಿ, ಅಹಿಂಸೆಯನ್ನು ಅಸ್ತçವಾಗಿಸಿಕೊಂಡು ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ಕೊಡಿಸುವಲ್ಲಿ ಮಹಾತ್ಮ ಗಾಂಧೀಜಿಯವರ ಕೊಡುಗೆ ಅಪಾರ. ಅದೇ ರೀತಿ ಲಾಲ್ ಬಹದ್ದೂರ್ ಶಾಸ್ತಿçÃಜಿ ಅವರು ದೇಶ ಕಂಡ ಅಪ್ರತಿಮ ಪ್ರಧಾನಿಯಾಗಿದ್ದು, ಸರಳ ಜೀವನಕ್ಕೆ ಮಾದರಿಯಾಗಿದ್ದ ಧೀಮಂತ ನಾಯಕ ಎಂದು ಬಣ್ಣಿಸಿದರು. ಈ ಸಂದರ್ಭದಲ್ಲಿ ಉಪನ್ಯಾಸಕರು, ಆಡಳಿತ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.