ವೀರಾಜಪೇಟೆ: ವೀರಾಜಪೇಟೆ ತಾಲೂಕು ಕಚೇರಿಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತಿç ಜಯಂತಿ ಆಚರಿಸಲಾಯಿತು.

ಕಾರ್ಯಕ್ರಮದ ಆರಂಭದಲ್ಲಿ ವೀರಾಜಪೇಟೆ ತಾಲೂಕು ದಂಡಾಧಿಕಾರಿ ಹಾಗೂ ತಹಶೀಲ್ದಾರ್ ಪಿ.ಕೆ. ಪ್ರವೀಣ್ ಕುಮಾರ್ ಅವರು, ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತಿç ಅವರ ಭಾವಚಿತ್ರಗಳಿಗೆ ಪುಷ್ಪ ನಮನ ಸಲ್ಲಿಸುವ ಮೂಲಕ ಗೌರವ ಸಮರ್ಪಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ದೇಶದ ಸ್ವಾತಂತ್ರ÷್ಯಕ್ಕಾಗಿ ಮಹಾತ್ಮ ಗಾಂಧೀಜಿಯವರು ನೀಡಿದ ಅಹಿಂಸಾ ಮಾರ್ಗ ಮತ್ತು ಸತ್ಯದ ಸಂದೇಶಗಳು ಇಂದಿಗೂ ಪ್ರಸ್ತುತವಾಗಿವೆ ಎಂದರು. ಅಲ್ಲದೆ, ಜೈ ಜವಾನ್, ಜೈ ಕಿಸಾನ್ ಘೋಷಣೆಯ ಮೂಲಕ ದೇಶದ ರಕ್ಷಣೆ ಮತ್ತು ಕೃಷಿಗೆ ಅಪಾರ ಕೊಡುಗೆ ನೀಡಿದ ಲಾಲ್ ಬಹದ್ದೂರ್ ಶಾಸ್ತಿç ಅವರ ಸರಳತೆ ಹಾಗೂ ಪ್ರಾಮಾಣಿಕತೆಯನ್ನು ನಾವೆಂದೂ ಮರೆಯಬಾರದು ಎಂದು ಸ್ಮರಿಸಿದರು.

ಕಾರ್ಯಕ್ರಮದಲ್ಲಿ ಗ್ರೇಡ್-೨ ತಹಶೀಲ್ದಾರ್ ಪ್ರದೀಪ್, ಕಂದಾಯ ಪರಿವೀಕ್ಷಕ ಹರೀಶ್ ಎಂ.ಎಲ್. ಸೇರಿದಂತೆ ತಾಲೂಕು ಕಚೇರಿಯ ಮತ್ತು ಕಂದಾಯ ಇಲಾಖೆಯ ಎಲ್ಲಾ ಸಿಬ್ಬಂದಿಗಳು ಉಪಸ್ಥಿತರಿದ್ದು, ಮಹಾನ್ ನಾಯಕರಿಗೆ ಪುಷ್ಪ ನಮನ ಸಲ್ಲಿಸಿ ಗೌರವ ಅರ್ಪಿಸಿದರು.