ಮಡಿಕೇರಿ, ಅ. ೩: ಸಾವಯವ ರಸಾಯನಶಾಸ್ತçದಲ್ಲಿ ಸ್ನಾತಕೋತ್ತರ ಪದವಿಗಾಗಿ ಕೊಡಗಿನ ಅಜ್ಜಮಾಡ ಯಾನ ಬೋಪಣ್ಣ ಬೆಳ್ಳಿ ಪದಕವನ್ನು ಪಡೆದುಕೊಂಡಿದ್ದಾರೆ.

ಬೆಂಗಳೂರಿನ ಸಂತ ಜೋಸೆಫ್ ವಿಶ್ವ ವಿದ್ಯಾ ಲಯದಲ್ಲಿ ಸ್ನಾತಕೋತ್ತರ ವ್ಯಾಸಂಗ ಮಾಡಿದ್ದ ಯಾನ ಬೋಪಣ್ಣ ಇತ್ತೀಚೆಗೆ ನಡೆದ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಬೆಳ್ಳಿ ಪದಕ ಸ್ವೀಕರಿಸಿದರು.

ಕಾರ್ಯಕ್ರಮದಲ್ಲಿ ಪಾಲ್ಗೊ ಂಡಿದ್ದ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ರಾಜ್ಯಸಭಾ ಸದಸ್ಯ ಮನ್ಸೂರ್ ಅಲಿ ಖಾನ್, ಫೇರ್‌ಫ್ಯಾಕ್ಸ್ ಫೈನಾನ್ಶಿಯಲ್ ಹೋಲ್ಡಿಂಗ್ಸ್ ಲಿಮಿಟೆಡ್ ಸಂಸ್ಥಾಪಕ ಪ್ರೇಮ್ ವಾತ್ಸಾ ಮೊದಲಾದವರ ಸಮ್ಮುಖದಲ್ಲಿ ಯಾನ ಬೋಪಣ್ಣ ಅವರನ್ನು ಶೈಕ್ಷಣಿಕ ಸಾಧನೆಗಾಗಿ ವಿಶ್ವವಿದ್ಯಾಲಯದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಯಾನ ಬೋಪಣ್ಣ ಅವರು ಶ್ರೀಮಂಗಲ ಸಮೀಪದ ಕುರ್ಚಿ ಗ್ರಾಮದ ದಿ. ಅಜ್ಜಮಾಡ ಬೋಪಣ್ಣ ಮತ್ತು ಪ್ರೆಟಿ ದಂಪತಿಯ ಪುತ್ರಿ.