ಕೂಡಿಗೆ, ಅ. ೩: ಪದವಿಪೂರ್ವ ಕಾಲೇಜುಗಳ ಜಿಲ್ಲಾಮಟ್ಟದ ಚೆಸ್ ಮತ್ತು ಟೇಬಲ್ ಟೆನ್ನಿಸ್ ಕ್ರೀಡಾಕೂಟ ಪಂದ್ಯಾವಳಿ ಕೂಡಿಗೆ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಯಿತು. ಕ್ರೀಡಾಕೂಟಕ್ಕೆ ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಸೋಮಶೇಖರ್ ಚಾಲನೆ ನೀಡಿದರು.
ಈ ಸಂದರ್ಭ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಎಸ್.ಎ. ಯೋಗೇಶ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ್, ಶನಿವಾರಸಂತೆ ಭಾರತಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಅಶೋಕ್, ಹಿರಿಯ ಉಪನ್ಯಾಸಕ ನಾಗಪ್ಪ ಇದ್ದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲ ಹಂಡ್ರAಗಿ ನಾಗರಾಜ್ ವಹಿಸಿದ್ದರು. ಈ ಸಂದರ್ಭ ಐದು ತಾಲೂಕಿನ ಕ್ರೀಡಾಪಟುಗಳು, ದೈಹಿಕ ಶಿಕ್ಷಣ ಉಪನ್ಯಾಸಕರು, ತರಬೇತುದಾರರು ಭಾಗವಹಿಸಿದ್ದರು.