ಶನಿವಾರಸAತೆ: ಸಮೀಪದ ಕೊಡ್ಲಿಪೇಟೆಯ ಕಿರಿಕೊಡ್ಲಿಮಠದ ಶ್ರೀಸದಾಶಿವ ಸ್ವಾಮೀಜಿ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆಯಲ್ಲಿ ಶುಕ್ರವಾರ ಗಾಂಧೀಜಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮ ದಿನಾಚರಣೆಯನ್ನು ಸಂಭ್ರಮದಿAದ ಆಚರಿಸಲಾಯಿತು.
ವಿದ್ಯಾಸಂಸ್ಥೆ ಅಧ್ಯಕ್ಷ ಸದಾಶಿವ ಸ್ವಾಮೀಜಿ ಮಾತನಾಡಿ, ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತಿç ಅವರ ಜೀವನ ಚರಿತ್ರೆ, ಆದರ್ಶ ವ್ಯಕ್ತಿತ್ವದ ಬಗ್ಗೆ ತಿಳಿಸಿದರು.
ಶಿಕ್ಷಕಿ ಮಮತಾ ಗಾಂಧೀಜಿ - ಶಾಸ್ತಿçಜಿಯವರ ತತ್ವಾದರ್ಶಗಳ ಬಗ್ಗೆ ಮಾತನಾಡಿದರು. ವಿದ್ಯಾಸಂಸ್ಥೆ ಕಾರ್ಯದರ್ಶಿ ಕೆ.ಪಿ ನಂಜುAಡಯ್ಯ, ಪ್ರಾಂಶುಪಾಲೆ ತನುಜಾ, ಉಪನ್ಯಾಸಕರು, ಶಿಕ್ಷಕರು ಹಾಜರಿದ್ದರು.
ಶಿಕ್ಷಕಿಯರಾದ ಕಾಂಚನಾ ಸ್ವಾಗತಿಸಿ, ಸೌಮ್ಯಾ ವಂದಿಸಿದರು. ಉಪನ್ಯಾಸಕ ಎನ್.ಎಂ ಚಂದ್ರಶೇಖರ್ ನಿರೂಪಿಸಿದರು.