ಮಡಿಕೇರಿ, ಅ. ೩: ಮಡಿಕೇರಿ ಹಾಗೂ ಗೋಣಿಕೊಪ್ಪ ದಸರಾ ಜನೋತ್ಸವವನ್ನು ಸಂಪ್ರದಾಯ, ಸಂಭ್ರಮ ಹಾಗೂ ಭಕ್ತಿಭಾವದೊಂದಿಗೆ, ಕಾನೂನು ಮತ್ತು ನಿಯಮಗಳನ್ನು ಪಾಲಿಸಿಕೊಂಡು ಜವಾಬ್ದಾರಿಯುತವಾಗಿ ಆಚರಿಸುವಂತೆ ಉಸ್ತುವಾರಿ ಸಚಿವ ಪಿ.ಎಂ. ನರೇಂದ್ರಸ್ವಾಮಿ ಕರೆ ನೀಡಿದರು.

ನಗರದ ಜಿಲ್ಲಾಡಳಿತ ಭವನದಲ್ಲಿ ದಸರಾ ಹಾಗೂ ತೀರ್ಥೋದ್ಭವಕ್ಕೆ ಸಂಬAಧಿಸಿದAತೆ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ದಸರಾ ಆಚರಣೆಗೆ ತನ್ನದೇ ಆದ ಸಂಪ್ರದಾಯ ಮತ್ತು ಇತಿಹಾಸವಿದೆ. ಅದನ್ನು ವಿಜೃಂಭಣೆಯಿAದ ಆಚರಿಸುವುದರ ಜೊತೆಗೆ ಕಾನೂನು ಹಾಗೂ ಸಂವಿಧಾನಕ್ಕೆ ಎಲ್ಲರೂ ಗೌರವ ನೀಡಬೇಕು. ನಿಯಮಗಳನ್ನು ಪಾಲಿಸಿಕೊಂಡೇ ವಿಜೃಂಭಣೆ ಹಾಗೂ ಜವಾಬ್ದಾರಿಯಿಂದ ದಸರಾ ಆಚರಣೆ ಮಾಡಬೇಕು. ಈ ಬಾರಿ ಮಡಿಕೇರಿ ಹಾಗೂ ಗೋಣಿಕೊಪ್ಪ ದಸರಾಕ್ಕೆ ಸರ್ಕಾರ ಅನುದಾನವನ್ನೂ ಹೆಚ್ಚಿಸಿದೆ. ಜನರ ಭಾವನೆಗಳಿಗೆ ಸರ್ಕಾರ ಗೌರವ ನೀಡಿದ್ದು, ಯಾವುದೇ ಅಡ್ಡಿ-ಆತಂಕವಿಲ್ಲದೆ ದಸರಾ ಸುಸೂತ್ರವಾಗಿ ನಡೆಯಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು.

ದಸರಾ ಹಿನ್ನೆಲೆಯಲ್ಲಿ ನಿಯಮಗಳನ್ನು ಸಡಿಲಿಸುವಂತೆ ಸರ್ಕಾರಕ್ಕೆ ಮನವಿ ಮಾಡುವುದು ಸಾಧ್ಯವಿಲ್ಲ. ಎಲ್ಲರೂ ತಮ್ಮ ಇತಿಮಿತಿಯಲ್ಲಿ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಜಿಲ್ಲಾಡಳಿತ ಹಾಗೂ ಸರ್ಕಾರ ಅತಿಥಿಗಳಿದ್ದಂತೆ. ಸ್ಥಳೀಯರೇ ದಸರಾ ಆಯೋಜಕರು. ಅವರ ಬೇಡಿಕೆಗಳನ್ನು ಗಮನಿಸಿ ಅಗತ್ಯ ನೆರವು ಒದಗಿಸುವುದು ಸರ್ಕಾರದ ಕರ್ತವ್ಯವಾಗಿದೆ ಎಂದು ಹೇಳಿದರು.

ವಿಜಯದಶಮಿಯಂದು ಬರುವುದಿಲ್ಲ

ರಾಜ್ಯದಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ದೆಹಲಿಯಿಂದ ಅಧಿಕಾರಿಗಳ ತಂಡವೊAದು ಅಧ್ಯಯನಕ್ಕಾಗಿ ರಾಜ್ಯಕ್ಕೆ ಆಗಮಿಸಿದೆ. ಬರ ನಿರ್ವಹಣೆಯಲ್ಲಿ ತೊಡಗಿಸಿಕೊಂಡಿರುವುದರಿAದ ವಿಜಯದಶಮಿಯಂದು ಮಡಿಕೇರಿಗೆ ಆಗಮಿಸಲು ಸಾಧ್ಯವಾಗುವುದಿಲ್ಲ. ವಿಜಯದಶಮಿ ಮರುದಿನ ಬರ ಪರಿಸ್ಥಿತಿಗೆ ಸಂಬAಧಿಸಿದ ಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳಬೇಕಾಗಿದೆ. ಕಾರ್ಯಕ್ರಮದ ಸಮಯದಲ್ಲಿ ಆಕಸ್ಮಿಕ ಬದಲಾವಣೆಯಾದರೆ ಆಗಮಿಸುವುದಾಗಿ ಸಚಿವರು ತಿಳಿಸಿದರು.

ದಸರಾ ಆಚರಣೆಗೆ ಸಂಬAಧಿಸಿದAತೆ ಕೈಗೊಳ್ಳಬೇಕಾದ ಎಲ್ಲ ಕಾಮಗಾರಿಗಳು ಹಾಗೂ ಸಿದ್ಧತೆಗಳನ್ನು ಸಮರ್ಪಕವಾಗಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಮಾತನಾಡಿ, ಅ.೧೧ರಂದು ನಾಲ್ಕು ಶಕ್ತಿದೇವತೆಗಳ ಕರಗ ಪೂಜೆಯ ಮೂಲಕ ಮಡಿಕೇರಿ ದಸರಾಕ್ಕೆ ವಿಧ್ಯುಕ್ತ ಚಾಲನೆ ದೊರೆಯಲಿದೆ. ಮಡಿಕೇರಿ ದಸರಾಕ್ಕೆ ನೂರಾರು ವರ್ಷಗಳ ಇತಿಹಾಸವಿದ್ದು, ಈ ಬಾರಿ ಸರ್ಕಾರದಿಂದ ರೂ.೨ ಕೋಟಿ ಅನುದಾನ ಬಿಡುಗಡೆಯಾಗಿದೆ. ಮಂಟಪಗಳು ಹಾಗೂ ಕರಗಗಳಿಗೆ ಹೆಚ್ಚಿನ ಅನುದಾನ ನೀಡುವ ಚಿಂತನೆಯೂ ಇದೆ ಎಂದರು.

ಮAಟಪಗಳ ನಿರ್ಮಾಣಕ್ಕೆ ಶ್ರಮಿಸಲಾಗುತ್ತಿದ್ದು, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಕಾಫಿ ದಸರಾವನ್ನೂ ಹಮ್ಮಿಕೊಳ್ಳಲಾಗಿದೆ. ಅ.೨೦ರಂದು ನಡೆಯುವ ಆಯುಧ ಪೂಜೆ ಕಾರ್ಯಕ್ರಮಕ್ಕೆ ಖ್ಯಾತ ಹಾಡುಗಾರರಾದ ಅನನ್ಯ ಭಟ್ ಹಾಗೂ ವಾಸುಕಿ ವೈಭವ್ ಆಗಮಿಸಲಿದ್ದಾರೆ ಎಂದು ತಿಳಿಸಿದರು.

ದಸರಾ ಸಂದರ್ಭದಲ್ಲಿ ಯಾವುದೇ ಸಮಸ್ಯೆ ಉಂಟಾಗದAತೆ ಮುನ್ನೆಚ್ಚರಿಕೆ ವಹಿಸಲಾಗುವುದು. ೪ಏಳನೇ ಪುಟಕ್ಕೆ

(ಮೊದಲ ಪುಟದಿಂದ) ಧ್ವನಿವರ್ಧಕ ಬಳಕೆಗೆ ಸುಪ್ರೀಂ ಕೋರ್ಟ್ ನಿರ್ಬಂಧವಿರುವ ಹಿನ್ನೆಲೆಯಲ್ಲಿ ವಿಶೇಷ ವಿನಾಯಿತಿ ನೀಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ನಗರದ ಪ್ರಮುಖ ಬೀದಿಗಳಲ್ಲಿ ಉತ್ತಮ ವಿದ್ಯುತ್ ಅಲಂಕಾರ ಕೈಗೊಳ್ಳಬೇಕು ಎಂದು ಹೇಳಿದರು.

ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ಮಾತನಾಡಿ, ದಸರಾ ಹಾಗೂ ತೀರ್ಥೋದ್ಭವದ ಸಿದ್ಧತೆಗಳ ಕುರಿತು ಮಾಹಿತಿ ನೀಡಿದರು. ಅ.೧೭ರಂದು ರಾತ್ರಿ ೭.೫೦ಕ್ಕೆ ಕಾವೇರಿ ತೀರ್ಥೋದ್ಭವವಾಗಲಿದ್ದು, ಈಗಾಗಲೇ ಶಾಸಕರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಸಿ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.

ಮಡಿಕೇರಿ ನಗರ ದಸರಾ ಸಮಿತಿ ಕಾರ್ಯಾಧ್ಯಕ್ಷ ಬಿ.ಕೆ. ಅರುಣ್ ಕುಮಾರ್ ಮಾತನಾಡಿ, ಮಡಿಕೇರಿ ದಸರಾ ಜನೋತ್ಸವ ಜಗತ್ಪçಸಿದ್ಧವಾಗಿದ್ದು, ದಸರಾ ಸಂದರ್ಭ ದೇವಲೋಕವೇ ಸೃಷ್ಟಿಯಾಗುವಂತಹ ವಾತಾವರಣ ನಿರ್ಮಾಣವಾಗುತ್ತದೆ. ಧ್ವನಿವರ್ಧಕ ಬಳಕೆಯ ಮೇಲಿನ ನಿರ್ಬಂಧದಿAದ ತೊಂದರೆಯಾಗುತ್ತಿದ್ದು, ಈ ಕುರಿತು ಸರ್ಕಾರ ವಿಶೇಷ ವಿನಾಯಿತಿಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.

ರಸ್ತೆ ದುರಸ್ತಿ, ಜಂಗಲ್ ಕಟ್ಟಿಂಗ್, ವಿದ್ಯುತ್ ತಂತಿಗಳ ಸಮರ್ಪಕಗೊಳಿಸುವಿಕೆ ಹಾಗೂ ಅಗ್ನಿಶಾಮಕ ವಾಹನಗಳ ನಿಯೋಜನೆಗೆ ಕ್ರಮ ಕೈಗೊಳ್ಳಬೇಕು. ದಸರಾಕ್ಕೆ ಹೆಚ್ಚಿನ ಅನುದಾನ ನೀಡಬೇಕು ಎಂದು ಕೋರಿದರು.

ಗೋಣಿಕೊಪ್ಪ ಕಾವೇರಿ ದಸರಾ ಸಮಿತಿ ಕಾರ್ಯಾಧ್ಯಕ್ಷ ಕುಲ್ಲಚಂಡ ಪ್ರಮೋದ್ ಗಣಪತಿ ಮಾತನಾಡಿ, ಗೋಣಿಕೊಪ್ಪ ದಸರಾ ಈ ಬಾರಿ ೪೮ನೇ ವರ್ಷಕ್ಕೆ ಕಾಲಿಡುತ್ತಿದೆ. ಮೊದಲ ದಿನ ದೇವಿಯ ಪ್ರತಿಷ್ಠಾಪನೆ ನೆರವೇರಲಿದ್ದು, ಅ.೨೧ರಂದು ದೇವಿಯ ವಿಸರ್ಜನೆ ನಡೆಯಲಿದೆ. ಅ.೧೮ರಂದು ಸಂಚಿತ್ ಹೆಗ್ಡೆ ಅವರ ಗಾಯನ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದರು.

ಮಡಿಕೇರಿ ದಸರಾ ಸಮಿತಿ ಹಾಗೂ ನಗರಸಭೆ ಉಪಾಧ್ಯಕ್ಷ ಮಹೇಶ್ ಜೈನಿ ಮಾತನಾಡಿ, ಒಂಬತ್ತು ದಿನಗಳ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ರಾತ್ರಿ ೧೦ ಗಂಟೆಯೊಳಗೆ ಸ್ಥಗಿತಗೊಳಿಸುವಂತೆ ಪೊಲೀಸ್ ಇಲಾಖೆ ಸೂಚಿಸುತ್ತಿರುವುದರಿಂದ ಕಲಾತಂಡಗಳಿಗೆ ಕಾರ್ಯಕ್ರಮ ಪೂರ್ಣಗೊಳಿಸಲು ಸಮಸ್ಯೆಯಾಗುತ್ತಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳು ಪೂರ್ಣಗೊಳ್ಳುವವರೆಗೆ ಸಹಕಾರ ನೀಡಬೇಕು. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕಡಿಮೆ ಮಿತಿಯ ಧ್ವನಿವರ್ಧಕ ಬಳಸಲಾಗುವುದು ಎಂದರು.

ರಸ್ತೆ ಕಾಮಗಾರಿಗಳು ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ರಾತ್ರಿ ವೇಳೆಯಲ್ಲೂ ಕಾಮಗಾರಿ ನಡೆಸಬೇಕು. ಶಾಲೆಗಳಿಗೆ ರಜೆ ವಿಸ್ತರಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.

ಸಭೆಯಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಶಾಸಕ ಎ.ಎಸ್. ಪೊನ್ನಣ್ಣ, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಮಡಿಕೇರಿ ನಗರಸಭೆ ಹಾಗೂ ದಸರಾ ಸಮಿತಿ ಅಧ್ಯಕ್ಷೆ ಪಿ. ಕಲಾವತಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ, ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಅಭಿಷೇಕ್, ಅಪರ ಜಿಲ್ಲಾಧಿಕಾರಿ ನಿರಂಜನ್ ಸೇರಿದಂತೆ ಅಧಿಕಾರಿಗಳು ಹಾಗೂ ದಸರಾ ಸಮಿತಿ ಪ್ರಮುಖರು ಉಪಸ್ಥಿತರಿದ್ದರು.