ವೀರಾಜಪೇಟೆ: ಪಟ್ಟಣದ ಸಂತ ಅನ್ನಮ್ಮ ಪ್ರೌಢಶಾಲೆಯಲ್ಲಿ ರಾಷ್ಟçಪಿತ ಮಹಾತ್ಮ ಗಾಂಧಿ ಜಯಂತಿ ಹಾಗೂ ಲಾಲ್ ಬಹುದ್ದೂರ್ ಶಾಸ್ತಿçಜಿ ಅವರ ಜಯಂತಿಯನ್ನು ಎನ್ಸಿಸಿ ಘಟಕದ ವತಿಯಿಂದ ಆಚರಿಸಲಾಯಿತು.
ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹುದ್ದೂರ್ ಶಾಸ್ತಿç ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಮಾಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ತದನಂತರ ವಿದ್ಯಾರ್ಥಿಗಳಿಂದ ಭಗವದ್ಗೀತೆ, ಕುರಾನ್ ಹಾಗೂ ಬೈಬಲ್ ಧಾರ್ಮಿಕ ಗ್ರಂಥಗಳ ಪ್ರಾರ್ಥನೆ ನಡೆಯಿತು.
ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಂತ ಅನ್ನಮ್ಮ ಚರ್ಚ್ನ ಸಹಾಯಕ ಗುರುಗಳಾದ ಫಾ. ವಿಲ್ಫೆçಡ್ ಮಾತನಾಡಿ, ಇಬ್ಬರು ಆದರ್ಶ ಪುರುಷರುಗಳ ಜಯಂತಿಯನ್ನು ನಾವಿಂದು ಆಚರಿಸುತ್ತಿದ್ದು ಅವರ ತತ್ವ ಸಿದ್ಧಾಂತಗಳು ಹಾಗೂ ಪರಿಕಲ್ಪನೆಗಳು ಇಂದಿಗೂ ಪ್ರಚಲಿತದಲ್ಲಿವೆ. ಅವರ ಆದರ್ಶಗಳನ್ನು ಪಾಲಿಸುವುದರ ಮೂಲಕ ಭವ್ಯ ರಾಷ್ಟçದ ನಿರ್ಮಾಣಕ್ಕೆ ಪಣತೊಡಿ ಎಂದು ಕರೆ ನೀಡಿದರು.
ಸಂತ ಅನ್ನಮ್ಮ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಸವರಿನ್ ಡಿಸೋಜ ಮಾತನಾಡಿ, ಭಾರತದ ಇತಿಹಾಸದಲ್ಲಿ ಸದಾ ಸ್ಮರಣೀಯವಾಗಿರುವ ಮೇರು ವ್ಯಕ್ತಿತ್ವದ ಮಹಾಪುರುಷರು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹುದೂರ್ ಶಾಸ್ತಿçಜಿ ಅವರು ರಾಷ್ಟçಕ್ಕೆ ನೀಡಿದ ಕೊಡುಗೆ ಅಪಾರವಾಗಿದ್ದು. ಅವರ ಆದರ್ಶಗಳು ಇಂದಿನ ಯುವ ಜನತೆಗೆ ಮಾದರಿಯಾಗಿದೆ. ಸ್ವಾಸ್ಥ ಸಮಾಜದ ನಿರ್ಮಾಣದಲ್ಲಿ ಆ ಮಹಾಪುರುಷರ ಸಂದೇಶಗಳು ಅಡಗಿದೆ ಎಂದರು.
ಸಭಾ ಕಾರ್ಯಕ್ರಮದ ಬಳಿಕ ಎನ್ಸಿಸಿ ವಿದ್ಯಾರ್ಥಿಗಳು ಸಮೀಪದ ಚರ್ಚ್ ಸ್ಟಿçÃಟಿನಲ್ಲಿ ಹಾಗೂ ಶಾಲೆಯ ಒಳ ಅವರಣದಲ್ಲಿ ಶ್ರಮದಾನವನ್ನು ನಡೆಸಲಾಯಿತು. ಮುಖ್ಯ ರಸ್ತೆಯ ಎರಡು ಬದಿಗಳಲ್ಲಿ ಎಸೆದಿದ್ದ ಪ್ಲಾಸ್ಟಿಕ್, ಪೇಪರ್ಗಳನ್ನು ತೆಗೆದು ಸ್ವಚ್ಛತಾ ಕಾರ್ಯವನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿಯರಾದ ಸಿಸ್ಟರ್ ರೋಸಿ ಡೈಸಾ, ಸಿಸ್ಟರ್ ವಂದನಾ, ಎನ್ಸಿಸಿ ಅಧಿಕಾರಿಗಳಾದ ಅಬ್ದುಲ್ ಮುನೀರ್, ಸಹನಾ ರಹಮತ್, ಸಹ ಶಿಕ್ಷಕರುಗಳು, ಸಿಬ್ಬಂದಿಗಳು ಹಾಗೂ ಎನ್ಸಿಸಿ ಏರ್ ವಿಂಗ್, ಆರ್ಮಿ ವಿಂಗ್ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.