ಕೂಡಿಗೆ, ಅ. ೩: ಹೆಬ್ಬಾಲೆ ಪ್ರಾಥಮಿಕ ಆರೋಗ್ಯ ಕೇಂದ್ರ, ಗ್ರಾಮ ಪಂಚಾಯಿತಿ. ಅರಣ್ಯ ಇಲಾಖೆ ಸಂಯುಕ್ತಾಶ್ರಯದಲ್ಲಿ ಹಾವು ಕಡಿತ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕಾರ್ಯಕ್ರಮ ಹಾಗೂ ರೇಬೀಸ್ ದಿನವನ್ನು ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಹೆಬ್ಬಾಲೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ದರ್ಶನ್ ಅವರು ಹಾವು ಕಡಿತ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಬಗ್ಗೆ ಮಾಹಿತಿಯನ್ನು ನೀಡಿದರು.
ಶಿರಂಗಾಲ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಉಜ್ಮಮಾ ರೇಬೀಸ್ ದಿನದ ಬಗ್ಗೆ ಮಾಹಿತಿ ನೀಡಿದರು.
ಗ್ರಾಮ ಪಂಚಾಯಿತಿ ಹೆಬ್ಬಾಲೆಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರವಿ ಕುಮಾರ್ ಅವರು ಮಾತನಾಡಿ, ಹಾವು ಕಡಿತಕ್ಕೆ ಒಳಗಾಗಿದ್ದಾರೆ ನಾಟಿ ಔಷಧಿ ಕೊಡಿಸದೆ ತಕ್ಷಣ ಆಸ್ಪತ್ರೆಗೆ ದಾಖಲಿಸುವ ಬಗ್ಗೆ ಸವಿಸ್ತಾರವಾದ ಮಾಹಿತಿಯನ್ನು ನೀಡಿದರು. ಆರೋಗ್ಯ ನಿರೀಕ್ಷಕ ಸಂಜಯ್ ಮಾತನಾಡಿದರು.
ಕಾರ್ಯಕ್ರಮದಲ್ಲಿ ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ರಾಣಿ ವೆಂಕಟೇಶ್, ಮಂಜುನಾಥ, ಹೆಬ್ಬಾಲೆಯ ಆರೋಗ್ಯ ಕೇಂದ್ರದ ಮೇಲ್ವಿಚಾರಕಿ ಲತಾ ಕುಮಾರಿ, ಪ್ರಥಮ ದರ್ಜೆ ಸಹಾಯಕಿ ಆರತಿ, ಅರಣ್ಯ ಇಲಾಖೆಯ ರಾಚಪ್ಪ, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಮತ್ತು ಸಾರ್ವಜನಿಕರು ಹಾಜರಿದ್ದರು. ಸಂಜಯ್ ಸ್ವಾಗತಿಸಿ, ವಂದಿಸಿದರು.