ಶನಿವಾರಸAತೆ, ಅ. ೪: ದ್ವಿಚಕ್ರ ವಾಹನದಲ್ಲಿ ೧೭ ಕೆ.ಜಿ. ಗೋಮಾಂಸ ಸಾಗಿಸುತ್ತಿದ್ದ ಇಬ್ಬರನ್ನು ಶನಿವಾರಸಂತೆ ಪೊಲೀಸರು ಬಂಧಿಸಿ, ಪ್ರಕರಣ ದಾಖಲಿಸಿಕೊಂಡಿರುವ ಘಟನೆ ನಡೆದಿದೆ.
ಹಿಂದೂ ಜಾಗರಣಾ ವೇದಿಕೆ ನೀಡಿದ ಖಚಿತ ಮಾಹಿತಿಯ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ಪೊಲೀಸರು, ಅರಕಲಗೂಡು ತಾಲೂಕಿನ ಅಬ್ಬೂರು ಮಾಚಿಗೊಂಡನಹಳ್ಳಿಯಿAದ ದ್ವಿಚಕ್ರ ವಾಹನದಲ್ಲಿ ಗೋಮಾಂಸವನ್ನು ಕೊಡ್ಲಿಪೇಟೆಗೆ ಸಾಗಿಸುತ್ತಿದ್ದ ಆರೋಪಿಗಳನ್ನು ಮಾಲು ಸಹಿತ ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಅಸ್ಸಾಂ ಮೂಲದ ಅಬ್ಜುಲ್ ಹಾಗೂ ಪಶ್ಚಿಮ ಬಂಗಾಳ ಮೂಲದ ಆಶಿಕ್ ಎಂದು ಗುರುತಿಸಲಾಗಿದೆ.
ಈ ಕುರಿತು ಶನಿವಾರಸಂತೆ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ಜಿ. ಕೃಷ್ಣರಾಜ್ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಾರ್ಯಾಚರಣೆಯಲ್ಲಿ ಪಿಎಸ್‌ಐ ಹೆಚ್.ವೈ. ಚಂದ್ರ ಹಾಗೂ ಪೊಲೀಸ್ ಸಿಬ್ಬಂದಿ ಪಾಲ್ಗೊಂಡಿದ್ದರು.