ಮಡಿಕೇರಿ ಅ. ೫: ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ ರೋಟರಿ ಮಡಿಕೇರಿ ವುಡ್ಸ್ನ ಸಂಯುಕ್ತ ಆಶ್ರಯದಲ್ಲಿ ಎರಡು ದಿನಗಳ ಕಾಲ ಅಂತರ ಕಾಲೇಜು ಶಟಲ್ ಬ್ಯಾಡ್ಮಿಂಟನ್ ಹಾಗೂ ಟೇಬಲ್ ಟೆನ್ನಿಸ್ ಕ್ರೀಡಾಕೂಟ ನಡೆಯಿತು.
ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಅಂತರರಾಷ್ಟಿçÃಯ ಬ್ಯಾಡ್ಮಿಂಟನ್ ಆಟಗಾರ್ತಿ ಜ್ಯೋತಿ ಸೋಮಯ್ಯ ಅವರು ವಿದ್ಯಾರ್ಥಿಗಳು ಓದಿನ ಜೊತೆಗೆ ಹೆಚ್ಚು ಹೆಚ್ಚು ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವುದರಿಂದ ಮಾನಸಿಕವಾಗಿ ಹಾಗೂ ದೈಹಿಕವಾಗಿ ಸದೃಢರಾಗಲು ಸಾಧ್ಯವಾಗುತ್ತದೆ. ಉತ್ತಮ ಆರೋಗ್ಯಕ್ಕಾಗಿ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕಾಲೇಜಿನ ಪ್ರಾಂಶುಪಾಲ ಡಾ.ವೇಣುಗೋಪಾಲ್ ಮಾತನಾಡಿ, ಇತ್ತೀಚಿನ ವರ್ಷಗಳಲ್ಲಿ ಕ್ರೀಡಾಕೂಟದಲ್ಲಿ ಭಾಗವಹಿಸುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದು ಹರ್ಷ ವ್ಯಕ್ತಪಡಿಸಿದರು.
ಮುಂದಿನ ದಿನಗಳಲ್ಲಿ ಭಾಗವಹಿಸುವ ತಂಡಗಳ ಸಂಖ್ಯೆ ಹೆಚ್ಚಾದಂತೆ ಇಂತಹ ಕ್ರೀಡಾಕೂಟಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಆಯೋಜಿಸುವುದಾಗಿ ಅವರು ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ದೈಹಿಕ ಶಿಕ್ಷಣ ನಿರ್ದೇಶಕಿ ರಾಖಿ ಪೂವಣ್ಣ, ರೋಟರಿ ಮಡಿಕೇರಿ ವುಡ್ಸ್ ಅಧ್ಯಕ್ಷೆ ರೊ.ಪ್ರಮೀಳಾ ಶೆಟ್ಟಿ, ಕಾರ್ಯದರ್ಶಿ ಸ್ಮಿತಾ ಚೆಂಗಪ್ಪ, ವಲಯ ಸೇನಾನಿ ವಸಂತ್ ಕುಮಾರ್, ವುಡ್ಸ್ನ ನಿಕಟಪೂರ್ವ ಅಧ್ಯಕ್ಷÀ ಕಿರಣ್ ಕುಂದರ್ ಹಾಗೂ ಮಾಜಿ ಅಧ್ಯಕ್ಷÀ ಹರೀಶ್ ಕಿಗ್ಗಾಲ್ ಉಪಸ್ಥಿತರಿದ್ದರು.
ಕ್ರೀಡಾಕೂಟದ ವಿಜೇತರಿಗೆ ನೀಡಲಾಗುವ ಬಹುಮಾನಗಳನ್ನು ರೋಟರಿ ಮಡಿಕೇರಿ ವುಡ್ಸ್ ವತಿಯಿಂದ ಒದಗಿಸಲಾಯಿತು.