ವೀರಾಜಪೇಟೆ, ಅ. ೫: ವೀರಾಜಪೇಟೆಯ ಐತಿಹಾಸಿಕ ಗೌರಿ-ಗಣೇಶ ವಿಸರ್ಜನಾ ಮಹೋತ್ಸವದ ಶೋಭಾಯಾತ್ರೆಯ ವೇಳೆ ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶಗೊಂಡು ತೀವ್ರವಾಗಿ ಗಾಯಗೊಂಡಿದ್ದ ಹುಬ್ಬಳ್ಳಿ ಮೂಲದ ಯುವಕ ಬಸವರಾಜು (೨೨) ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಬೆಳಿಗ್ಗೆ ಮೃತಪಟ್ಟಿದ್ದಾನೆ.
ವೀರಾಜಪೇಟೆಯ ಶಿವಕೇರಿಯಲ್ಲಿ ಶ್ರೀ ವಿನಾಯಕ ಯುವಕ ಸಮಿತಿ ವತಿಯಿಂದ ಗೌರಿ-ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿತ್ತು. ಗಣೇಶ ಮೂರ್ತಿ ವಿಸರ್ಜನಾ ಮಹೋತ್ಸವದ ಶೋಭಾಯಾತ್ರೆಯ ಸಂದರ್ಭದಲ್ಲಿ, ಧ್ವನಿವರ್ಧಕ (ಆಎ) ಅಳವಡಿಸಿದ್ದ ವಾಹನದಲ್ಲಿ ಬಸವರಾಜು ಕೆಲಸ ಮಾಡುತ್ತಿದ್ದರು. ಈ ವೇಳೆ ಡಿಜೆ ಲೈಟ್ ಮೇಲೆ ನಿಂತು ತೆರಳುತ್ತಿದ್ದಾಗ ಆಕಸ್ಮಿಕವಾಗಿ ವಿದ್ಯುತ್ ತಗುಲಿ ಆತನಿಗೆ ಸುಟ್ಟ ಗಾಯಗಳಾಗಿದ್ದವು. ಬಳಿಕ ಗಾಯಾಳು ಬಸವರಾಜುನನ್ನು ವೀರಾಜಪೇಟೆ ಸರಕಾರಿ ಆಸ್ಪತ್ರೆಗೆ ದಾಖಲಿಸಿ, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೃಷ್ಣರಾಜ ಆಸ್ಪತ್ರೆಗೆ ೪ಐದನೇ ಪುಟಕ್ಕೆ
(ಮೊದಲ ಪುಟದಿಂದ) ಹಾಗೂ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಡಿ.ಆರ್.ಎಂ. ಆಸ್ಪತ್ರೆಯಲ್ಲಿಯೂ ಚಿಕಿತ್ಸೆ ಮುಂದುವರಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಸೋಮವಾರ ಬೆಳಿಗ್ಗೆ ೪ ಗಂಟೆಯ ಸುಮಾರಿಗೆ ಆತ ಅಸುನೀಗಿದ್ದಾರೆ.
ವೀರಾಜಪೇಟೆ ಪೊಲೀಸರು ಮೈಸೂರಿಗೆ ತೆರಳಿ ಮುಂದಿನ ಕ್ರಮ ಕೈಗೊಂಡಿದ್ದಾರೆ.