ವೀರಾಜಪೇಟೆ, ಅ. ೬: ವೀರಾಜಪೇಟೆ ತಾಲೂಕಿನ ಆರ್ಜಿ ಭಾಗದಲ್ಲಿ ನಿರ್ಮಿಸಲು ಉದ್ದೇಶಿಸಿರುವ ನೂತನ ನ್ಯಾಯಾಲಯ ಕಟ್ಟಡದ ಸ್ಥಳ ವೀಕ್ಷಣೆಯನ್ನು, ಜಿಲ್ಲಾ ಉಸ್ತುವಾರಿ ಸಚಿವರಾದ ನರೇಂದ್ರಸ್ವಾಮಿ ಅವರೊಂದಿಗೆ ವೀರಾಜಪೇಟೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ವೀಕ್ಷಿಸಿದರು.
ಹೈಕೋರ್ಟ್ ಹಾಗೂ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರುಗಳು, ಕೊಡಗು ಜಿಲ್ಲಾಧಿಕಾರಿ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು. ಈ ಸಂದರ್ಭ ಕರ್ನಾಟಕ ರಾಜ್ಯ ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ರಾಚಯ್ಯ, ಕೊಡಗು ಜಿಲ್ಲಾ ನ್ಯಾಯಾಧೀಶರಾದ ಮಾರುತಿ ಬಾಗಡೆ, ಅಪರ ಜಿಲ್ಲಾ ನ್ಯಾಯಾಧೀಶರಾದ ನಟರಾಜ್, ಹಿರಿಯ ಸಿವಿಲ್ ನ್ಯಾಯಾಧೀಶರಾದ ಮಂಜುನಾಥ್, ನ್ಯಾಯಾಧೀಶರಾದ ವಿಶ್ವನಾಥ್, ಸರಕಾರಿ ವಕೀಲರಾದ ನರೇಂದ್ರ ಕಾಮತ್, ವೀರಾಜಪೇಟೆ ವಕೀಲರ ಸಂಘದ ಅಧ್ಯಕ್ಷರು, ಸದಸ್ಯರು ಪದಾಧಿಕಾರಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.