ಭಾಗಮಂಡಲ, ಅ. ೬: ಆಟೋ ಚಾಲಕರು ಶ್ರೀ ತಲಕಾವೇರಿ ತೀರ್ಥೋದ್ಭವದ ಹಿನ್ನೆಲೆಯಲ್ಲಿ ಭಾಗಮಂಡಲ ತಲಕಾವೇರಿ ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯ ನಡೆಸಿದರು.
ಭಾಗಮಂಡಲ ಶ್ರೀ ಕಾವೇರಿ ಆಟೋ ಚಾಲಕ ಮತ್ತು ಮಾಲೀಕರ ಸಂಘದ ವತಿಯಿಂದ ೨೬ನೇ ವರ್ಷದ ಸ್ವಚ್ಛತಾ ಆಂದೋಲನ ನಡೆಯಿತು. ಭಾಗಮಂಡಲ ಕರಿಕೆ ಜಂಕ್ಷನ್ನಿAದ ತಲಕಾವೇರಿವರೆಗೆ ಹಮ್ಮಿಕೊಳ್ಳಲಾಗಿದ್ದ ಸ್ವಚ್ಛತಾ ಕಾರ್ಯಕ್ಕೆ ಭಾಗಮಂಡಲ ಪೊಲೀಸ್ ಠಾಣೆಯ ಎಎಸ್ಐ ಕೇಕಡ ದಿನೇಶ್ ಚಾಲನೆ ನೀಡಿದರು.
ಭಾಗಮಂಡಲದಿAದ ತಲಕಾವೇರಿವರೆಗೆ ಸ್ವಚ್ಛತಾ ಕಾರ್ಯ ನಡೆಯಿತು. ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಕಾವೇರಿ ಆಟೋ ಚಾಲಕರ ಮತ್ತು ಮಾಲೀಕರ ಸಂಘದ ಅಧ್ಯಕ್ಷ ನಂಗಾರು ಪುನೀತ್ ವಹಿಸಿದ್ದರು. ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕಾಳನ ರವಿ ಮಾತನಾಡಿ, ಆಟೋ ಚಾಲಕರು ಮತ್ತಷ್ಟು ಸಾಮಾಜಿಕ ಕಾರ್ಯಗಳಲ್ಲಿ ಸಂಘದ ಸದಸ್ಯರು ತೊಡಗಿಸಿಕೊಳ್ಳುವಂತಾಗಲಿ ಎಂದರು.
ಭಾಗಮಂಡಲ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಂದ, ಗಜಾನನ ಯುವಕ ಸಂಘದ ಅಧ್ಯಕ್ಷ ಗೌರೀಶ್ ರೈ, ಸಂಘದ ಕಾರ್ಯದರ್ಶಿ ವಿಜಯಕುಮಾರ್ ಪೂಜಾರಿ, ಉದ್ಯಮಿ ಪಟ್ಟಮಾಡ ಸುಧೀರ್ ಕುಮಾರ್ , ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಭಾಸ್ಕರ ದೇವಂಗೋಡಿ ಉಪಸ್ಥಿತರಿದ್ದರು.