ಮಡಿಕೇರಿ, ಅ. ೭: ವಿಕಸಿತ ಭಾರತ ನಿರ್ಮಾಣದ ಗುರಿಯೊಂದಿಗೆ ಮುನ್ನಡೆಯುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಯತ್ನಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕೆಂದು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಕರೆ ನೀಡಿದರು.
ನಗರದ ಗಾಂಧಿ ಮೈದಾನದಲ್ಲಿ ಆಯೋಜಿಸಿದ್ದ ವಿಕಸಿತ ಭಾರತ ಸಂಕಲ್ಪ ಸಭೆ ಹಾಗೂ ಸೇವಾ ಜ್ಯೋತಿ ಯಾತ್ರೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಜಗತ್ತು ಯುದ್ಧದ ವಾತಾವರಣವನ್ನು ಎದುರಿಸುತ್ತಿದೆ. ಯುದ್ಧವನ್ನು ನಿಯಂತ್ರಿಸುವ ಸಾಮರ್ಥ್ಯ ಮೋದಿಯವರಿಗಿದೆ ಎಂದು ಅಬುಧಾಬಿಯ ಸಚಿವರೊಬ್ಬರು ಹೇಳಿರುವುದು ಅವರ ನಾಯಕತ್ವಕ್ಕೆ ಸಾಕ್ಷಿಯಾಗಿದೆ ಎಂದು ಅಭಿಪ್ರಾಯಪಟ್ಟರು.
ಕಳೆದ ೨೫ ವರ್ಷಗಳಿಂದ ಸಾರ್ವಜನಿಕ ಜೀವನದಲ್ಲಿರುವ ನರೇಂದ್ರ ಮೋದಿ ಅವರು ದೇಶಕ್ಕಾಗಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿದ್ದಾರೆ. ಭಾರತ ಅಭಿವೃದ್ಧಿಯ ಪಥದಲ್ಲಿ ಮುನ್ನಡೆಯುತ್ತಿದ್ದು, ವಿಕಸಿತ ಭಾರತ ನಿರ್ಮಾಣಕ್ಕೆ ಎಲ್ಲರೂ ಸಂಕಲ್ಪ ಮಾಡಬೇಕು. ಈ ಕಾರ್ಯಕ್ರಮ ವ್ಯಕ್ತಿ ಪೂಜೆಯ ಉದ್ದೇಶ ಹೊಂದಿಲ್ಲ. ಬದಲಾಗಿ, ಭಾರತವನ್ನು ಸಮರ್ಥ ರಾಷ್ಟ್ರವನ್ನಾಗಿ ರೂಪಿಸುವ ಗುರಿಯೊಂದಿಗೆ ಮುನ್ನಡೆಯುತ್ತಿರುವ ಮೋದಿಯವರಿಗೆ ಅಭಿನಂದನೆ ಸಲ್ಲಿಸುವುದರ ಜೊತೆಗೆ ಅವರ ಪ್ರಯತ್ನಗಳಿಗೆ ಕೈಜೋಡಿಸುವ ಆಶಯವನ್ನು ಹೊಂದಿದೆ ಎಂದು ಹೇಳಿದರು.
ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ಪ್ರಾಸ್ತಾವಿಕವಾಗಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರು ೨೫ ವರ್ಷಗಳ ಸಾರ್ವಜನಿಕ ಜೀವನದಲ್ಲಿ ಭ್ರಷ್ಟಾಚಾರ ರಹಿತ ಆಡಳಿತದ ಮೂಲಕ ಸ್ವಾವಲಂಬಿ ಭಾರತ ನಿರ್ಮಾಣಕ್ಕೆ ಶ್ರಮಿಸುತ್ತಿದ್ದಾರೆ. ಜಾಗತಿಕ ಮಟ್ಟದಲ್ಲಿ ಭಾರತವನ್ನು ಅಭಿವೃದ್ಧಿಯ ಉತ್ತುಂಗಕ್ಕೆ ಕೊಂಡೊಯ್ಯುವ ಪ್ರಯತ್ನ ಮಾಡುತ್ತಿದ್ದಾರೆ. ಗುಜರಾತ್ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿಯೂ ಹಲವು ಸಾಧನೆಗಳನ್ನು ಮಾಡಿದ್ದಾರೆ. ಅಕ್ರಮ ನುಸುಳುಕೋರರ ವಿರುದ್ಧ ಜನರು ಜಾಗೃತರಾಗಬೇಕು ಎಂದು ಕರೆ ನೀಡಿದರು.
ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರು ದಕ್ಷ, ಸ್ವಚ್ಛ ಹಾಗೂ ಪ್ರಾಮಾಣಿಕ ಆಡಳಿತ ನೀಡುತ್ತಿದ್ದಾರೆ. ಪ್ರಧಾನಿಯಾಗಿ ಹಲವು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದ್ದಾರೆ. ಅಭಿವೃದ್ಧಿಯಲ್ಲಿ ಭಾರತ ಜಾಗತಿಕ ಮಟ್ಟದಲ್ಲಿ ನಾಲ್ಕನೇ ಸ್ಥಾನದಲ್ಲಿರುವುದು ಹೆಮ್ಮೆಯ ಸಂಗತಿಯಾಗಿದೆ. ಆಂತರಿಕ ಭದ್ರತೆ ಹಾಗೂ ದೇಶದ ರಕ್ಷಣೆಯಲ್ಲಿಯೂ ಮಹತ್ವದ ಪಾತ್ರ ವಹಿಸಿದ್ದಾರೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮಾಜಿ ಶಾಸಕರುಗಳಾದ ಕೆ.ಜಿ. ಬೋಪಯ್ಯ, ಅಪ್ಪಚ್ಚು ರಂಜನ್, ವಿಧಾನ ಪರಿಷತ್ ಮಾಜಿ ಸದಸ್ಯರುಗಳಾದ ಎಸ್.ಜಿ. ಮೇದಪ್ಪ, ಸುನಿಲ್ ಸುಬ್ರಮಣಿ,
೪ಐದನೇ ಪುಟಕ್ಕೆ
(ಮೊದಲ ಪುಟದಿಂದ) ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ, ನೆಲ್ಲೀರ ಚಲನ್, ಲೋಕೇಶ್, ಕೋರ್ ಕಮಿಟಿ ಸದಸ್ಯರುಗಳಾದ ರಾಬಿನ್ ದೇವಯ್ಯ, ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ ಹಾಜರಿದ್ದರು. ರವಿಕಾಳಪ್ಪ ಸ್ವಾಗತಿಸಿ, ಜಿಲ್ಲಾ ವಕ್ತಾರ ಬಿ.ಕೆ. ಅರುಣ್ ಕುಮಾರ್ ನಿರೂಪಿಸಿ, ವಂದಿಸಿದರು.
ನೇರಪ್ರಸಾರ ವೀಕ್ಷಣೆ
ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟಾçಧ್ಯಕ್ಷ ನಿತಿನ್ ನಬಿ ಅವರು ದೇಶವನ್ನು ಉದ್ದೇಶಿಸಿ ಮಾತನಾಡಿದ ಭಾಷಣದ ನೇರಪ್ರಸಾರವನ್ನು ಎಲ್ಇಡಿ ಮೂಲಕ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಗಾಂಧಿ ಮೈದಾನದಲ್ಲಿ ವೀಕ್ಷಿಸಿದರು.
ನಗರದಲ್ಲಿ ಯಾತ್ರೆ
ಸಭೆ ಬಳಿಕ ನಗರದ ಮುಖ್ಯಬೀದಿಯಲ್ಲಿ ಸೇವಾ ಜ್ಯೋತಿ ಯಾತ್ರೆಯನ್ನು ಕೈಗೊಳ್ಳಲಾಯಿತು. ಗಾಂಧಿ ಮೈದಾನದಿಂದ ಹಳೇ ಖಾಸಗಿ ಬಸ್ ನಿಲ್ದಾಣ ತನಕ ಸಾಗಿ ಮೋದಿ ಸಾಧನೆಯ ಬಗ್ಗೆ ತಿಳಿಸಲಾಯಿತು.