ಕುಶಾಲನಗರ, ಅ. ೮: ಕುಶಾಲನಗರ ಮಡಿಕೇರಿ ಹೆದ್ದಾರಿ ರಸ್ತೆಯ ಆನೆಕಾಡು ಮೀಸಲು ಅರಣ್ಯದ ಬಳಿ ಅಪಘಾತ ಮುಕ್ತ ವಲಯವನ್ನಾಗಿಸಲು ಜಿಲ್ಲಾಡಳಿತ ಕ್ರಮ ಕೈಗೊಂಡಿದೆ.
ಕುಶಾಲನಗರ ಬಸವನಹಳ್ಳಿ ಮತ್ತು ಹೊಸಕೋಟೆ ನಡುವೆ ಆನೆಕಾಡು ಬಳಿ ನಿರಂತರ ವಾಹನಗಳ ಅಪಘಾತ ನಡೆಯುತ್ತಿದ್ದು, ಈ ಹಿನ್ನಲೆಯಲ್ಲಿ ಕುಶಾಲನಗರ ಸಂಚಾರಿ ಪೊಲೀಸ್ ಅಧಿಕಾರಿಗಳು ಕ್ಷೇತ್ರದ ಶಾಸಕರು ಮತ್ತು ಜಿಲ್ಲಾ ಪೊಲೀಸ್ ಅಧಿಕಾರಿಗಳಿಗೆ ಸದರಿ ಪ್ರದೇಶವನ್ನು ಅಪಘಾತ ಮುಕ್ತ ವಲಯವನ್ನಾಗಿಸಲು ಮನವಿ ಸಲ್ಲಿಸಿದ ಮೇರೆಗೆ ಇದೀಗ ರಾಷ್ಟಿçÃಯ ಹೆದ್ದಾರಿ ಅಧಿಕಾರಿಗಳ ಮೂಲಕ ಆರು ಕಡೆ ರಸ್ತೆ ಉಬ್ಬುಗಳ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ. ಆ ಮೂಲಕ ವಾಹನಗಳ ವೇಗ ನಿಯಂತ್ರಣ ಮಾಡಿ ಅಪಘಾತ ತಡೆಯಲು ಕ್ರಮ ಕೈಗೊಳ್ಳಲಾಗಿದೆ.
ಇತ್ತೀಚೆಗೆ ನಡೆದ ಸರಣಿ ವಾಹನ ಅಪಘಾತಗಳ ಘಟನೆ ಬೆನ್ನಲ್ಲಿಯೇ ಕುಶಾಲನಗರ ಪೊಲೀಸ್ ಇನ್ಸ್ಪೆಕ್ಟರ್ ಪ್ರದೀಪ್ಕುಮಾರ್ ಅವರು ಸ್ಥಳ ಪರಿಶೀಲಿಸಿ ನಂತರ ರಾಷ್ಟಿçÃಯ ಹೆದ್ದಾರಿ ಅಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಜಿಲ್ಲಾಧಿಕಾರಿಗಳಿಗೆ ಹಾಗೂ ಕ್ಷೇತ್ರ ಶಾಸಕರಿಗೆ ವರದಿ ಸಲ್ಲಿಸಿದ್ದು ಈ ಸಂಬAಧ ಶಾಸಕರೊಂದಿಗೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಇದೀಗ ಈ ವ್ಯಾಪ್ತಿಯಲ್ಲಿ ವಾಹನಗಳ ವೇಗವನ್ನು ತಡೆಯುವ ನಿಟ್ಟಿನಲ್ಲಿ ರಸ್ತೆ ಉಬ್ಬು ನಿರ್ಮಾಣ ಕಾಮಗಾರಿ ಭರದಿಂದ ನಡೆಯುತ್ತಿದೆ.