ನಾಪೋಕ್ಲು, ಅ. ೮: ಇಲ್ಲಿನ ಬಿಜೆಪಿ ಶಕ್ತಿಕೇಂದ್ರದ ವತಿಯಿಂದ ಮಾಜಿ ಪ್ರಧಾನಿ ಲಾಲ್ ಬಹುದ್ದೂರ್ ಶಾಸ್ತ್ರೀ ಅವರ ಜಯಂತಿಯ ಅಂಗವಾಗಿ ಶ್ರೀ ಭಗವತಿ ದೇವಸ್ಥಾನದ ಆವರಣದಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಾಗೂ ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಬಿಜೆಪಿ ಶಕ್ತಿಕೇಂದ್ರದ ಸಂಚಾಲಕರಾದ ಶಿವಾಚಾಳಿಯಂಡ ಅಂಬಿ ಕಾರ್ಯಪ್ಪ ಹಾಗೂ ಪ್ರಮುಖರು ದಿನದ ಮಹತ್ವದ ಬಗ್ಗೆ ಮಾತನಾಡಿ ಶಾಸ್ತ್ರೀ ಅವರ ತತ್ವ ಆದರ್ಶಗಳನ್ನು ಎಲ್ಲರೂ ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಸಮಾಜಕ್ಕೆ ಮಾದರಿಯಾಗಬೇಕೆಂದರು. ಈ ಸಂದರ್ಭ ಪ್ರಮುಖರಾದ ನಿರುಕಾರ್ಯಪ್ಪ, ಕೊಡಗು ಜಿಲ್ಲಾ ಬಿಜೆಪಿ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿವಾಚಾಳಿಯಂಡ ಜಗದೀಶ್, ಮಡಿಕೇರಿ ಗ್ರಾಮಾಂತರ ಮಂಡಲ ಉಪಾಧ್ಯಕ್ಷ ಪಾಡಿಯಮ್ಮಂಡ ಮನುಮಹೇಶ್, ಗ್ರಾಮಾಂತರ ಮಂಡಲ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಪ್ರದೀಪ್, ಹಿಂದುಳಿದ ವರ್ಗಗಳ ಮೋರ್ಚಾ ಉಪಾಧ್ಯಕ್ಷೆÀ ಉಮಾಪ್ರಭು, ಬೂತ್ ಅಧ್ಯಕ್ಷರಾದ ಚೀಯಕಪೂವಂಡ ಸತೀಶ್ ದೇವಯ್ಯ, ಪದಾಧಿಕಾರಿಗಳಾದ ಬಿದ್ದಾಟಂಡ ಸಂಪತ್, ಕನ್ನಂಬಿರ ಸುಧಿ ತಿಮ್ಮಯ್ಯ, ಪ್ಯಾಕ್ಸ್ ನಿರ್ದೇಶಕರಾದ ಕುಂಡ್ಯೋಳAಡ ವಿಶು, ಪ್ರಮುಖರಾದ ಶಿವಚಾಳಿಯಂಡ ದೀಪು, ವಿಲ್ಮ, ಕಂಗಾಡ ಜಾಲಿಪೂವಪ್ಪ, ನಾಟೋಳಂಡ ಕಸ್ತೂರಿ, ಸಚಿನ್ ಸೇರಿದಂತೆ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.