ಮಡಿಕೇರಿ, ಅ. ೮: ಕೊಡಗು ಗೌಡ ವಿದ್ಯಾ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ ತಾ.೧೧ರಂದು ಬೆಳಿಗ್ಗೆ ೧೦ ಗಂಟೆಗೆ ಮಡಿಕೇರಿಯ ಕೊಡಗು ಗೌಡ ಸಮಾಜದಲ್ಲಿ ನಡೆಯಲಿದೆ.
ನಗರದ ಪತ್ರಿಕಾ ಭವನದಲ್ಲಿ ಈ ಕುರಿತು ಮಾಹಿತಿ ನೀಡಿದ ವಿದ್ಯಾ ಸಂಘದ ಅಧ್ಯಕ್ಷ ಅಂಬೆಕಲ್ ನವೀನ್ ಕುಶಾಲಪ್ಪ ತಮ್ಮ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷÀ ಆನಂದ ಕರಂದ್ಲಾಜೆ ಉದ್ಘಾಟಿಸಲಿದ್ದಾರೆ.
ಬೆಂಗಳೂರು ಮೂಲದ ವಿದ್ಯಾನಿಧಿ ದಾನಿಗಳು ಹಾಗೂ ಉದ್ಯಮಿಗಳಾದ ಮುಕ್ಕಾಟಿ ಎ.ಮನೋಜ್ ಕುಮಾರ್ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ವಿದ್ಯಾನಿಧಿಯ ದಾನಿಗಳಾದ ನಿಕಟಪೂರ್ವ ಅಧ್ಯಕ್ಷರು ಹಾಗೂ ಉದ್ಯಮಿಗಳಾದ ಹೊಸೂರು ರಮೇಶ್ ಜೋಯಪ್ಪ, ನಿವೃತ್ತ ಪ್ರಾಂಶುಪಾಲರಾದ ತೆಕ್ಕಡೆ ಗುಲಾಬಿ ಜನಾರ್ಧನ, ಸಂಘದ ಮಾಜಿ ನಿರ್ದೇಶಕ ಹಾಗೂ ಕಾಫಿ ಬೆಳೆಗಾರ ಕುಕ್ಕುನೂರು ನಾಣಯ್ಯ, ಚೇರಂಬಾಣೆ ಬಿ.ಬಾಡಗದ ಕಾಫಿ ಬೆಳೆಗಾರ ತೊತ್ತಿಯನ ಕೀರ್ತಿಕುಮಾರಿ ಮೋಹನ್ ಅವರು ಅತಿಥಿಗಳಾಗಿ ಉಪಸ್ಥಿತರಿರುವರು.
ವಿವಿಧ ಕ್ಷೇತ್ರಗಳ ಸಾಧಕರಾದ ಕೊಕ್ಕಲೆ ವಿ.ಸುಮಂತ್, ನಡುವಟ್ಟಿರ ಎಂ.ಬಿಪಿನ್ ಅಚ್ಚಪ್ಪ, ಕೆ.ಬಿ.ರೀಮಾ ಜಯಪ್ರಕಾಶ್, ಎ. ಎಸ್. ದಾಮಿನಿ, ಮೊಟ್ಟೆರ ಜೆ.ಯಾಶಿಕಾ ಹಾಗೂ ಸಿರಕಜೆ ಎಸ್.ಮೌಲ್ಯ ಶ್ರೀಧರ ಅವರುಗಳನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗುವುದು. ಹತ್ತನೇ ತರಗತಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ೩೮, ಪಿಯುಸಿಯಲ್ಲಿ ೪೨, ಪದವಿ ೧೧ ಹಾಗೂ ೪ಏಳನೇ ಪುಟಕ್ಕೆ
(ಮೊದಲ ಪುಟದಿಂದ) ಸಿಇಟಿಯ ಮೂವರು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು. ಅಲ್ಲದೆ ಕ್ರೀಡಾ ಸಾಧಕರನ್ನು ಸನ್ಮಾನಿಸಲಾಗುವುದು ಎಂದು ಅಂಬೆಕಲ್ಲ್ ನವೀನ್ ತಿಳಿಸಿದರು. ೧೯೦೮ರಲ್ಲಿ ಸ್ಥಾಪನೆಯಾದ ಕೊಡಗು ಗೌಡ ವಿದ್ಯಾ ಸಂಘವು ಗೌಡ ಸಮುದಾಯದ ಶೈಕ್ಷಣಿಕ ಪ್ರಗತಿಗಾಗಿ ನಿರಂತರವಾಗಿ ಶ್ರಮಿಸುತ್ತಿದೆ. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಪುರಸ್ಕರಿಸುವುದರೊಂದಿಗೆ ಗ್ರಾಮೀಣ ಹಿನ್ನೆಲೆಯ ಹಾಗೂ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಮುನ್ನಡೆಯಲು ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬಂದಿದೆ.
ಸಂಸ್ಥೆಯ ಕಾರ್ಯಚಟುವಟಿಕೆಗಳು ನಿರಂತರವಾಗಿ ನಡೆಯಲು ಉದಾರ ಮನಸ್ಸಿನ ದಾನಿಗಳ ಕೊಡುಗೆ ಪ್ರಮುಖವಾಗಿದೆ. ಈ ವರ್ಷವೂ ಪ್ರತಿಭಾ ಪುರಸ್ಕಾರದೊಂದಿಗೆ ಕ್ರೀಡೆ, ವಿಜ್ಞಾನ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಾಧಕರನ್ನು ಸನ್ಮಾನಿಸಿ, ಕಿರು ಕೊಡುಗೆಗಳನ್ನು ನೀಡುವ ಮೂಲಕ ಪ್ರೋತ್ಸಾಹಿಸಲಾಗುತ್ತಿದೆ ಎಂದರು.
ಗೋಷ್ಠಿಯಲ್ಲಿ ಉಪಾಧ್ಯಕ್ಷ ಅಮೆ ಸಿ. ಸೀತಾರಾಮ್, ಕಾರ್ಯದರ್ಶಿ ಪೇರಿಯನ ಕೆ.ಉದಯಕುಮಾರ್, ಸಹಕಾರ್ಯದರ್ಶಿ ತಳೂರು ಕೆ.ದಿನೇಶ್ ಕುಮಾರ್, ನಿರ್ದೇಶಕರುಗಳಾದ ಮೂಲೆಮಜಲು ಎಂ.ಮನೋಜ್ ಕುಮಾರ್ ಹಾಗೂ ಪುದಿಯನೆರವನ ರೇವತಿ ರಮೇಶ್ ಉಪಸ್ಥಿತರಿದ್ದರು.